ಹೊಸನಗರ ತಾಲೂಕು ಕಾಂಗ್ರೆಸ್ ಓಬಿಸಿ ಮೋರ್ಚಾದ ಅಧ್ಯಕ್ಷರಾಗಿ ಪ್ರವೀಣ್ ಲಕ್ಷ್ಮಿಕಾಂತ್ ಅಡ್ದೇರಿ ಆಯ್ಕೆ
ರಿಪ್ಪನ್ ಪೇಟೆ : ಹೊಸನಗರ ತಾಲೂಕು ಕಾಂಗ್ರೆಸ್ ಓ ಬಿ ಸಿ ಘಟಕದ ತಾಲೂಕು ಅಧ್ಯಕ್ಷರಾಗಿ ಪ್ರವೀಣ್ ಲಕ್ಷ್ಮಿಕಾಂತ್ ಅಡ್ಡೇರಿ ಆಯ್ಕೆಯಾಗಿದ್ದಾರೆ.
ಶಿವಮೊಗ್ಗದಲ್ಲಿ ಒಬಿಸಿ ಜಿಲ್ಲಾ ಅಧ್ಯಕ್ಷರಾದ ರಮೇಶ್ ಇಕ್ಕೇರಿ ಅವರ ಅಧ್ಯಕ್ಷತೆಯಲ್ಲಿ ಸಭೆಯಲ್ಲಿ ಪ್ರವೀಣ್ ಲಕ್ಷ್ಮಿಕಾಂತ್ ಅಡ್ಡೇರಿ ಅವರನ್ನು
ಅವಿರೋಧವಾಗಿ ಆಯ್ಕೆ ಮಾಡಲಾಯಿತು.
ಕಾಂಗ್ರೆಸ್ ಪಕ್ಷದಲ್ಲಿ ಹಲವಾರು ವರ್ಷಗಳಿಂದ NSUI ಸಾಗರ ಕ್ಷೇತ್ರ ಘಟಕದ ಅಧ್ಯಕ್ಷರಾಗಿ ಹಾಗೂ ನಿಷ್ಠಾವಂತ ಕಾರ್ಯಕರ್ತನಾಗಿ ಕೆಲಸ ಮಾಡಿದ ಪ್ರವೀಣ್ ಲಕ್ಸ್ಮಿಕಾಂತ್ ಅಡ್ಡೆರಿ ಇವರು ಪಕ್ಷದಲ್ಲಿ ಇನ್ನು ಹೆಚ್ಚಿನ ಸಾಧನೆ ಮಾಡಲಿ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ, ಮಾಜಿ ಜಿ ಪಂ ಸದಸ್ಯ ಕಲಗೋಡು ರತ್ನಾಕರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವಲಿಂಗ ಮೂರ್ತಿ, ರಾಜ್ಯ ಒಬಿಸಿ ಉಪಾಧ್ಯಕ್ಷರಾದ ಡಾಕಪ್ಪ ಬಾಳೂರು,ಮಾಜಿ ತಾಲೂಕು ಪಂಚಾಯಿತಿ ಸದಸ್ಯ ಚಂದ್ರಮೌಳಿ,ಒಬಿಸಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ಗಾಜಾನೂರು ಕಾಂಗ್ರೆಸ್ ಮುಖಂಡ ವೆಂಕಟೇಶ್ G ನಾಯ್ಕ್, ಮಧುಸೂಧನ್, ಚೇತನ್ ಗೌಡ,ಪ್ರಶಾಂತ್ ಹಾರಂಬಳ್ಳಿ, ನಾಗರಾಜ್,ಇನ್ನು ಮುಂತಾದ ಕಾಂಗ್ರೆಸ್ ಮುಖಂಡರು ಶುಭ ಹಾರೈಸಿದ್ದಾರೆ.