Hosanagara | ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವಲ್ಲಿ ಕಾರ್ಯಾಂಗದ ಪಾತ್ರ ಹಿರಿದು : ಶಾಸಕ ಬೇಳೂರು ಗೋಪಾಲಕೃಷ್ಣ

ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವಲ್ಲಿ ಕಾರ್ಯಾಂಗದ ಪಾತ್ರ ಹಿರಿದು : ಶಾಸಕ ಬೇಳೂರು ಗೋಪಾಲಕೃಷ್ಣ


ಹೊಸನಗರ : ಸರ್ಕಾರಿ ಯೋಜನೆಗಳನ್ನು ಜಾರಿ ಮಾಡಿ ಯಶಸ್ವಿಗೊಳಿಸುವ ಹೊಣೆಗಾರಿಕೆ ಇಲಾಖಾ ನೌಕರರ ಮೇಲಿದೆ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದರು.

ಅವರು ಇಲ್ಲಿನ ಈಡಿಗರ ಭವನದಲ್ಲಿ ಏರ್ಪಡಿಸಿದ್ದ ರಾಜ್ಯ ಸರ್ಕಾರಿ ನೌಕರರ ತಾಲೂಕು ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿ, ನನ್ನ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರ ಸಮಸ್ಯೆಗಳಿಗೆ ಸ್ಪಂದಿಸಲು ನಾನು ಸಿದ್ದನಿದ್ದೇನೆ. ಅವರ ಬೇಡಿಕೆಗಳ ಈಡೇರಿಕೆಗಾಗಿ ಸರ್ಕಾರದ ಗಮನ ಸೆಳೆಯುವ ಪ್ರಯತ್ನ ನಡೆಸುತ್ತೇನೆ. ಉತ್ತಮ ರೀತಿಯಲ್ಲಿ ಕಾರ್ಯ ನಿರ್ವಹಿಸುವ ಸಿಬ್ಬಂದಿಗಳಿಗೆ ಸದಾ ನನ್ನ ಬೆಂಬಲವಿದೆ ಎಂದರು.

ಶಾಸಕ ಆರಗ ಜ್ಞಾನೇಂದ್ರ ಮಾತನಾಡಿ, ಸಂಘಟನೆಯಿಂದ ಸಬಲತೆ ಸಾಧ್ಯವಿದೆ. ಆದರೆ ಸಂಘಟನೆಗೆ ಕೆಟ್ಟ ಹೆಸರು ತರುವಂತಹ ಕಾರ್ಯವನ್ನು ಯಾರೊಬ್ಬರೂ ಮಾಡಬಾರದು. ನೌಕರರ ಕಲ್ಯಾಣವು ಸರಕಾರದ ಕರ್ತವ್ಯ ಎಂದರು.

ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಮಾತನಾಡಿ, ಹಿರಿಯರ ಶ್ರಮದಿಂದ ಸಂಘಟನೆ ಇಂದು ಬಲಿಷ್ಠವಾಗಿದೆ. ದೇಶದಲ್ಲಿಯೇ ಕರ್ನಾಟಕ ರಾಜ್ಯ ನೌಕರರು ಹೆಚ್ಚು ಕೌಶಲ್ಯಪೂರ್ಣರಾಗಿ ಕರ‍್ಯನಿರ್ವಹಿಸುತ್ತಿರುವುದು ಸಾಬೀತಾಗಿದೆ. ಹಲವು ಒತ್ತಡಗಳ ನಡುವೆ ನೌಕರರು ಕೆಲಸ ಮಾಡಬೇಕಾಗಿದೆ. ನೌಕರರ ಬೇಡಿಕೆಗಳನ್ನು ಈಡೇರಿಸುವಲ್ಲಿ ಸರಕಾರಿ ಹೆಚ್ಚಿನ ಕಾಳಜಿ ವಹಿಸಬೇಕಿದೆ ಎಂದರು.


ಸಂಘದ ಮಾಜಿ ಅಧ್ಯಕ್ಷರಾದ ಕೆ.ಬಿ.ಸಿ.ಕೃಷ್ಣ, ಎಸ್.ಸಿ.ಕೃಷ್ಣಮೂರ್ತಿ, ಎಚ್.ಎಲ್.ಗುರುಮೂರ್ತಿ, ರೇಣುಕಪ್ಪ, ಸಿ.ಕೃಷ್ಣಮೂರ್ತಿ ಅವರನ್ನು ಸಮ್ಮೇಳನದಲ್ಲಿ ಗೌರವಿಸಲಾಯಿತು.

ಸಾಂಸ್ಕೃತಿಕ ಹಾಗೂ ಕ್ರೀಡೆಗಳಲ್ಲಿ ಗಮನಾರ್ಹ ಸಾಧನೆ ಮಾಡಿದ ಸಂಘದ ಸದಸ್ಯರಿಗೆ ಅಭಿನಂದನೆ ಸಲ್ಲಿಸಲಾಯಿತು.

ಪ್ರವಚನಕಾರ ಜಿ.ಎಸ್.ನಟೇಶ್ ಅವರು ಪ್ರಜಾಸ್ನೇಹಿ ಆಡಳಿತ ಕುರಿತು ವಿಶೇಷ ಉಪನ್ಯಾಸ ನೀಡಿದರು. ತಾಲೂಕು ಅಧ್ಯಕ್ಷ ಎಂ.ಬಸವಣ್ಯಪ್ಪ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ, ತಹಸೀಲ್ದಾರ್ ರಶ್ಮಿ, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ನರೇಂದ್ರ ಕುಮಾರ್, ಬಿಇಓ ಕೃಷ್ಣಮೂರ್ತಿ, ಹಾಲಪ್ಪ ಸಂಕೂರು, ಎಚ್.ಆರ್.ಸುರೇಶ್, ಮಲ್ಲಿಕಾರ್ಜುನ ಸ್ವಾಮಿ, ರಂಗಸ್ವಾಮಿ, ರೇಣುಕೇಶ್ ಕೆ, ಸುಧೀಂದ್ರಕುಮಾರ್, ರಮೇಶಕುಮಾರ್, ಮಾಲತೇಶ್ ಮತ್ತಿತರರು ಇದ್ದರು. ಪ್ರದೀಪ್ ಮತ್ತು ರೇಖಾ ಪ್ರಭಾಕರ ಕಾರ್ಯಕ್ರಮ ನಿರ್ವಹಿಸಿದರು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ ಅಪಘಾತ – ತಪ್ಪಿದ ಭಾರಿ ಅನಾಹುತ

ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ ಅಪಘಾತ – ತಪ್ಪಿದ ಭಾರಿ ಅನಾಹುತ A school bus lost control…

2 hours ago

ಶಿಕ್ಷಕರ ಗೌರವದ ಹೆಸರಿನಲ್ಲಿ ರಾಜಕೀಯ ಬೇಡ; ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ಶಿಕ್ಷಕರ ಗೌರವದ ಹೆಸರಿನಲ್ಲಿ ರಾಜಕೀಯ ಬೇಡ; ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ Congress leaders in Sagar have hit…

3 hours ago

ಶಿಕ್ಷಣ ಸೇವೆಗೆ ಸಂದ ಪ್ರತಿಷ್ಠಿತ ಗೌರವ; ಅರಸಾಳಿನ ಸುಮಾ ಎಸ್.ಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ

ಶಿಕ್ಷಣ ಸೇವೆಗೆ ಸಂದ ಪ್ರತಿಷ್ಠಿತ ಗೌರವ; ಅರಸಾಳಿನ ಸುಮಾ ಎಸ್.ಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ Summa S.…

7 hours ago

ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ

ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ Power outage in…

11 hours ago

ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ

ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ Retired government employees were specially honoured by senior…

14 hours ago

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಕರೆತಂದರೆ ₹10…

1 day ago