Hosanagara | ಸಾವಿನಲ್ಲೂ ಒಂದಾದ ವೃದ್ದ ದಂಪತಿಗಳು – ಪತಿಯ ಸಾವಿನ ಸುದ್ದಿ ತಿಳಿಯುತಿದ್ದಂತೆ ಪತ್ನಿಯೂ ನಿಧನ
ತುಂಬು ಜೀವನ ನಡೆಸಿದ ಸತಿ-ಪತಿಗಳಿಬ್ಬರು ಸಾವಿನಲ್ಲೂ ಒಂದಾಗಿರುವ ಚಿತ್ರಣವೊಂದು ಹೊಸನಗರದಲ್ಲಿ ನಡೆದಿದೆ.ಹೌದು!ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಸಾವಂತೂರು ಗ್ರಾಮದಲ್ಲಿ ಇಂಥಹ ಚಿತ್ರಣವೊಂದು ಕಂಡು ಬಂದಿದೆ. ಹೊಳೆಯಪ್ಪ (90) ಹಾಗೂ ಗಂಗಮ್ಮ(80) ಇವರಿಬ್ಬರೂ ಸಾವಿನಲ್ಲಿ ಒಂದಾದ ದಂಪತಿಗಳಾಗಿದ್ದಾರೆ.
ಹೊಸನಗರ ತಾಲೂಕು ಮುಂಬಾರು ಗ್ರಾಮ ಪಂಚಾಯಿತಿ ಸಾವಂತೂರು ಗ್ರಾಮ ಸಾಲತೋಡೆಯ ಕೃಷಿ ಕಾರ್ಮಿಕ ದಂಪತಿಗಳಾದ 90ರ ಹರೆಯದ ಹೊಳೆಯಪ್ಪ ಹಾಗೂ 84ರ ಗಂಗಮ್ಮ ದಂಪತಿಗಳು ಗುರುವಾರ ಬೆಳಗಿನ ಜಾವ ಒಂದು ಗಂಟೆಯ ಅಂತರದಲ್ಲಿ ಮೃತಪಟ್ಟು ಸಾವಿನಲ್ಲೂ ಒಂದಾಗಿದ್ದಾರೆ.
ಪತಿ ಹೊಳೆಯಪ್ಪನವರು ಅನಾರೋಗ್ಯದಿಂದ ಮೃತಪಟ್ಟ ವಿಷಯ ತಿಳಿಯುತಿದ್ದಂತೆ ಪತ್ನಿ ಗಂಗಮ್ಮ ತೀವ್ರ ಹೃದಯಘಾತದಿಂದ ಗಂಡನೊಂದಿಗೆ ಇಹಲೋಕ ತ್ಯಜಿಸಿರುವುದಾಗಿ ತಿಳಿದು ಬಂದಿದೆ.
ಮೃತ ದಂಪತಿಗಳು ಇಬ್ಬರು ಗಂಡು ಗಂಡು ಐವರು ಹೆಣ್ಣು ಮಕ್ಕಳು ಹಾಗೂ ಅಪಾರ ಬಂಧು ಬಳಗ ಬಿಟ್ಟಗಲಿದ್ದಾರೆ.
ಮೃತ ದಂಪತಿಗಳ ನಿಧನಕ್ಕೆ ಮುಂಬಾರು ಗ್ರಾಮ ಪಂಚಾಯಿತಿ ಅಧ್ಯಕ್ಷರು ಸದಸ್ಯರು ಸಿಬ್ಬಂದಿ ವರ್ಗ ಹಾಗೂ ಗ್ರಾಮಸ್ಥರು ಸಂತಾಪ ವ್ಯಕ್ತಪಡಿಸಿದ್ದಾರೆ.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್