Humcha | ಆನೆಗದ್ದೆ ಸರ್ಕಾರಿ ಶಾಲೆಯಲ್ಲಿ ಕಟ್ಟಡ ಕಾರ್ಮಿಕರ ಸಂಘದ ವತಿಯಿಂದ ಸಂಕ್ರಾಂತಿ ಆಚರಣೆ

Humcha | ಆನೆಗದ್ದೆ ಸರ್ಕಾರಿ ಶಾಲೆಯಲ್ಲಿ ಕಟ್ಟಡ ಕಾರ್ಮಿಕರ ಸಂಘದ ವತಿಯಿಂದ ಸಂಕ್ರಾಂತಿ ಆಚರಣೆ


ಶಾಲೆಗಳಲ್ಲಿ ನಮ್ಮ ಮಕ್ಕಳಿಗೆ ನಮ್ಮ ಹಬ್ಬ ಹರಿದಿನಗಳು ಹಾಗೂ ಸಂಸ್ಕೃತಿ ಸಂಪ್ರದಾಯಗಳ ಮಹತ್ವ, ಆಚಾರ ವಿಚಾರಗಳನ್ನು ತಿಳಿಸಿಕೊಟ್ಟು ಮನವರಿಕೆ ಮಾಡಿಕೊಡುವ ಕೆಲಸ ಆಗಬೇಕು ಎಂದು

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ಸಮೀಪದ ಆನೆಗದ್ದೆ ಸರ್ಕಾರಿ ಪ್ರಾಥಮಿಕ ಶಾಲಾ ಆವರಣದಲ್ಲಿ ಕಟ್ಟಡ ಕಾರ್ಮಿಕರ ಸಂಘ ಹಾಗೂ ಶ್ರಮಶಕ್ತಿ ಅಸಂಘಟಿತ ಕಾರ್ಮಿಕರ ಒಕ್ಕೂಟದವರು ಶಾಲೆಯ ಎಸ್‌ಡಿಎಂಸಿ ಹಾಗೂ ಗ್ರಾಮಸ್ಥರ ಸಹಕಾರದಿಂದ ನಡೆಸಿದ ಸಂಕ್ರಾಂತಿ ಸುಗ್ಗಿ ಸಂಭ್ರಮ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ವ್ಯವಸಾಯದ ಭೂಮಿ ವಾಣಿಜ್ಯಕರಣವಾಗಿ ಮಾರ್ಪಾಡುತ್ತಿರುವ ಜೊತೆಯಲ್ಲಿಯೇ ಸುಗ್ಗಿಯ ಸಂಭ್ರಮವು ಕಡಿಮೆಯಾಗುತ್ತಿವೆ, ಹಳ್ಳಿಗಳಲ್ಲಿ ನಡೆಯುತ್ತಿದ್ದ ಸಂಕ್ರಾಂತಿ ಹಬ್ಬ ಶಾಲಾ ಕಾಲೇಜುಗಳಲ್ಲಿ ನಡೆಸುವಂತಾಗಿದೆ ಎಂದರು.


ಮಕರ ಸಂಕ್ರಾಂತಿ ದಿನ ರೈತರು ಧಾನಸ ಧಾನ್ಯಗಳನ್ನು ಸಂಗ್ರಹಿಸಿ ಇಟ್ಟಿಕೊಳ್ಳುವ ಕಾಲ, ದೇವ ಮಾನವರು ಧರೆಗೆ ಇಳಿದು ಬಂದಿದ್ದರಿಂಲೇ ದೇವ ಪುರುಷರಾದ ಜೋಗಯ್ಯ, ಗುಡ್ಡರು, ನೀಲಗಾರರು ಹಬ್ಬದ ದಿನದಂದು ಮನೆ ಮುಂದಕ್ಕೆ ಭಿಕ್ಷಕ್ಕೆ ಬರುತ್ತಾರೆ, ಎಳ್ಳು ಬೆಲ್ಲ ಒಳ್ಳೆಯ ಅಲೋಚನೆಯ ಸಂಕೇತವಾಗಿದೆ. ಸಂಸದ ಬಿ ವೈ ರಾಘವೇಂದ್ರ ರವರ ಆಶಯದಂತೆ ಸರ್ಕಾರಿ ಶಾಲೆಗಳಲ್ಲಿ ಹಬ್ಬವನ್ನು ಆಚರಿಸುತಿದ್ದೇವೆ ಎಂದರು.

ಕಟ್ಟಡ ಕಾರ್ಮಿಕರ ಸಂಘದ ಹೊಸನಗರ ಗ್ರಾಮಾಂತರ ಅಧ್ಯಕ್ಷ ಮಹಮ್ಮದ್ ಹುಸೇನ್ ಮಾತನಾಡಿ ನಮ್ಮ ದೇಶದಲ್ಲಿ ಆಚರಿಸುವ ಪ್ರತಿ ಹಬ್ಬ ಹರಿದಿನ ಆಚರಣೆ ಸಂಪ್ರದಾಯದ ಹಿಂದೆ ಅದರದ್ದೇ ಆದ ಅರ್ಥ ಇತಿಹಾಸ ವೈಜ್ಞಾನಿಕ ಕಾರಣಗಳಿವೆ. ಅವುಗಳನ್ನು ಅರಿತು ಅವುಗಳ ಆಚರಣೆ ಆಗಬೇಕು,ಶಾಲಾ ಕಾಲೇಜುಗಳಲ್ಲಿ ಕೇವಲ ಪಾಠ ಪ್ರವಚನಗಳಿಗೆ ಸಂಬಂಧಿಸಿದ ಚಟುವಟಿಕೆಗಳಿಗೆ ಸೀಮಿತವಾಗದೆ ಪಠ್ಯೇತರ ಚಟುವಟಿಕೆಗಳಿಗೂ ಆಧ್ಯತೆ ನೀಡಬೇಕು, ಮಕ್ಕಳ ದೈಹಿಕ ಮಾನಸಿಕ ಸದೃಢತೆ ಹೆಚ್ಚಬೇಕು, ಆ ಮೂಲಕ ಅವರಲ್ಲಿ ಜ್ಞಾನಾರ್ಜನೆ ಶಕ್ತಿ ಹೆಚ್ಚಿಸಬೇಕೆಂದರು.

ಇದೇ ಸಂಧರ್ಭದಲ್ಲಿ ಆನೆಗದ್ದೆ ಶಾಲೆ ರಾಜ್ಯಮಟ್ಟದ ಪ್ರಶಸ್ತಿ ಪಡೆಯುವಲ್ಲಿ ಶ್ರಮಿಸಿದ ಶಿಕ್ಷಕರನ್ನು ಸಂಘದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು..ಶಾಲಾ ಮಕ್ಕಳಿಗೆ ಹಾಗೂ ಪೋಷಕರಿಗೆ ಸಂಕ್ರಾಂತಿ ಹಬ್ಬದೂಟ ಏರ್ಪಡಿಸಲಾಗಿತ್ತು.

ಈ ಸಂಧರ್ಭದಲ್ಲಿ ಕಟ್ಟಡ ಕಾರ್ಮಿಕರ ಸಂಘದ ಜಿಲ್ಲಾ ಗೌರವ ಅಧ್ಯಕ್ಷ ಮಹಾದೇವ ಆಚಾರ್, ಜಿಲ್ಲಾ ಅಧ್ಯಕ್ಷರಾದ ಸಂಜಯ್ ಕುಮಾರ್ ,ರಾಘಣ್ಣ, ಜಿಲ್ಲಾ ಕಾರ್ಯದರ್ಶಿ ಆರ್ಮುಗಂ,ಎಸ್ ಡಿಎಂಸಿ ಅಧ್ಯಕ್ಷರಾದ ಸುರೇಶ್ ಎ ಆರ್ ಆನೆಗದ್ದೆ , ಸಮಿತಿಯ ರಾಘವೇಂದ್ರ ರಿಪ್ಪನ್‌ಪೇಟೆ ,ಪ್ರಭು ಮೇಸ್ತ್ರಿ ತಿರುಪತಿ,ಭಾಗ್ಯ,ಶಂಕರಾಚಾರ್, ವನಿತಾ, ಶ್ವೇತಾ , ಸ್ವಾತಿ ,ಪ್ರಭಾಕರ್ ಆಚಾರ್ ,ಪ್ರಶಾಂತ್  ಹಾಗೂ ಇತರರಿದ್ದರು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ ಅಪಘಾತ – ತಪ್ಪಿದ ಭಾರಿ ಅನಾಹುತ

ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ ಅಪಘಾತ – ತಪ್ಪಿದ ಭಾರಿ ಅನಾಹುತ A school bus lost control…

3 hours ago

ಶಿಕ್ಷಕರ ಗೌರವದ ಹೆಸರಿನಲ್ಲಿ ರಾಜಕೀಯ ಬೇಡ; ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ಶಿಕ್ಷಕರ ಗೌರವದ ಹೆಸರಿನಲ್ಲಿ ರಾಜಕೀಯ ಬೇಡ; ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ Congress leaders in Sagar have hit…

4 hours ago

ಶಿಕ್ಷಣ ಸೇವೆಗೆ ಸಂದ ಪ್ರತಿಷ್ಠಿತ ಗೌರವ; ಅರಸಾಳಿನ ಸುಮಾ ಎಸ್.ಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ

ಶಿಕ್ಷಣ ಸೇವೆಗೆ ಸಂದ ಪ್ರತಿಷ್ಠಿತ ಗೌರವ; ಅರಸಾಳಿನ ಸುಮಾ ಎಸ್.ಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ Summa S.…

8 hours ago

ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ

ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ Power outage in…

12 hours ago

ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ

ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ Retired government employees were specially honoured by senior…

14 hours ago

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಕರೆತಂದರೆ ₹10…

1 day ago