Ripponpete| “ಕಡುಬಡವರ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು “: ಶಾಸಕ ಗೋಪಾಲಕೃಷ್ಣ ಬೇಳೂರು

“ಕಡುಬಡವರ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು “: ಶಾಸಕ ಗೋಪಾಲಕೃಷ್ಣ  ಬೇಳೂರು

ರಿಪ್ಪನ್‌ಪೇಟೆ;-ಕೂಲಿ ಕಾರ್ಮಿಕರ ಮತ್ತು  ಕಡುಬಡವರ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು,ಉನ್ನತ ವ್ಯಾಸಂಗಮಾಡಲು ಉತ್ತಮ ಅವಕಾಶಗಳಿವೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು.


ಶನಿವಾರ ಪಟ್ಟಣದಸರ್ಕಾರಿ ಪದವಿ ಪೂರ್ವ ಕಾಲೇಜ್‌ನ ಕ್ರೀಡಾ ಮತ್ತು ಸಾಂಸ್ಕೃತಿಕ ಕಾರ್ಯಕ್ರಮದ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು ಹಿಂದೆ ಶ್ರೀಮಂತರ ಮಕ್ಕಳಿಗೆ ಮಾತ್ರ ಉನ್ನತ ಶಿಕ್ಷಣ ಪಡೆಯುತ್ತಿದ್ದರು ಅದರೆ ಕೂಲಿಕಾರ್ಮಿಕರ ಮಕ್ಕಳು ಇದರಿಂದ ವಂಚಿತರಾಗುವ ಕಾಲವೊಂದು ಇತ್ತು ಈಗಿನ ಸರ್ಕಾರಗಳು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಹೆಚ್ಚಿನ ಅವಕಾಶಗಳನ್ನು ನೀಡಲಾಗುತ್ತಿದ್ದು ಕೆ.ಎ.ಎಸ್.ಐ.ಎ.ಎಸ್.ಇಂಜಿನಿಯರ ವ್ಯಾಸಂಗ ಮಾಡುವ ಮೂಲಕ ಕಡುಬಡವರ ಮಕ್ಕಳು ಶ್ರೀಮಂತರ ಮಕ್ಕಳಿಗೆ ಸಮನಾಗಿ ಶಿಕ್ಷಣ ಪಡೆಯುವ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣಾರಾಗುವ ಮೂಲಕ ಶಾಲಾ ಕಾಲೇಜ್‌ನ ಕೀರ್ತಿಯನ್ನು ಉತ್ತುಂಗಕ್ಕೆ ಏರಿಸುವಂತಾಗಿದ್ದಾರೆಂದು ಹೇಳಿದರು.


ನಾನು ಕಾಲೇಜ್ ವಿದ್ಯಾಭ್ಯಾಸಕ್ಕಾಗಿ ಸೇರುವ ಸಂದರ್ಭದಲ್ಲಿ ಸಾಗರದ ಸರ್ಕಾರಿ ಪದವಿ ಪೂರ್ವ ಕಾಲೇಜ್ ಒಂದು ಕಾಲದಲ್ಲಿ ದನದ ದೊಡ್ಡಿಯೆಂಬ ಅಪಹಾಸ್ಯಕ್ಕೆ ಕಾರಣವಾಗಿತು.ಅದನ್ನು ಆಳಿಸುವ ಉದ್ದೇಶದಿಂದಾಗಿ ನಾನು ಪ್ರಥಮವಾಗಿ  ಶಾಸಕನಾಗಿ ಆಯ್ಕೆಯಾಗುತ್ತಿದ್ದಂತೆ ಮೊದಲು ನಾ ಓದಿದ ಕಾಲೇಜ್ ಆಭಿವೃಧ್ದಿ ಪಡಿಸುವ ಮೂಲಕ ರಾಜ್ಯದಲ್ಲಿಯೇ ಅತ್ಯುತ್ತಮ ಕಾಲೇಜ್ ಎಂಬ ಹೆಗ್ಗಳಿಕೆಗೆ ತರುವ ನಿಟ್ಟಿನಲ್ಲಿ ಶ್ರಮಿಸಿರುವುದಾಗಿ ತಮ್ಮ ವಿದ್ಯಾರ್ಥಿ ಜೀವನದ ಕಷ್ಟವನ್ನು ಮೆಲಕು ಹಾಕಿದರು

ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ನೀಡುವುದರೊಂದಿಗೆ ಶಿಸ್ತು ಸಂಯಮತೆಯನ್ನು ಕಲಿಸುವ ಮೂಲಕ ಉಪನ್ಯಾಸಕರು ಮತ್ತು ಪೋಷಕರು ಗಮನಹರಿಸಬೇಕು. ಭವಿಷ್ಯದಲ್ಲಿ ದೇಶದ ನಾಯಕರಾಗುವಂತೆ ಮಾಡುವುದು ನಮ್ಮಗಳ ಅಧ್ಯಕರ್ತವ್ಯವಾಗಿದೆ.ಇದೇ ಸಂದರ್ಭದಲ್ಲಿ ಕಾಲೇಜ್‌ಗೆ ಅಗತ್ಯವಾಗಿ ಬೇಕಾಗುವ ಮೂಲಭೂತ ಸೌಲಭ್ಯಗಳ ಕುರಿತು ಪ್ರಾಚಾರ್ಯರು ಮನವಿ ಪತ್ರವನ್ನು ನೀಡಿದ್ದು ಅದನ್ನು ಈಡೇರಿಸುವ ಭರವಸೆ ನೀಡಿ ಕಳೆದ ಹಲವಾರು ವರ್ಷಗಳಿಂದ ಸುಣ್ಣಬಣ್ಣವನ್ನು ಕಾಣದ ಕಾಲೇಜ್‌ಗೆ ತಕ್ಷಣ ಸುಣ್ಣಬಣ್ಣ ಮಾಡುವುದರೊಂದಿಗೆ ಅಭಿವೃದ್ದಿಗೆ ಶ್ರಮಿಸುತ್ತಿರುವುದಾಗಿ ಹೇಳಿದರು.

ಪ್ರಾಚಾರ್ಯ ಎ.ಮಂಜುನಾಥ ಅಧ್ಯಕ್ಷತೆ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಪದವಿ ಪೂರ್ವ ಕಾಲೇಜ್ ಜಿಲ್ಲಾ ಉಪನಿರ್ದೇಶಕ ಬಿ.ಕೃಷ್ಣಪ್ಪ,ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಧನಲಕ್ಷö್ಮ,ಉಪಾಧ್ಯಕ್ಷ ಸುದೀಂದ್ರಪೂಜಾರಿ,ಸಿಡಿಸಿ ಸಮಿತಿಯ ಉಪಾಧ್ಯಕ್ಷ ಜಿ.ಆರ್.ಗೋಪಾಲಕೃಷ್ಣ, ಸಿಡಿಸಿ ಸದಸ್ಯರಾದ ರಫ಼ಿ ರಿಪ್ಪನ್‌ಪೇಟೆ, ಬೋರಪ್ಪ , ಷಣ್ಮುಖ ,ಲೇಖನ ಚಂದ್ರನಾಯ್ಕ್ , ನಾಗಪ್ಪ ಕಟ್ಟೆ ಗ್ರಾಮ ಪಂಚಾಯ್ತಿ ಸದಸ್ಯರಾದ,ವಿನೋಧ, ಆಶ್ವಿನಿ ರವಿಶಂಕರ್ ಸುಂದರೇಶ್.ಈ.ಮಧುಸೂದನ್, ಪ್ರಕಾಶಪಾಲೇಕರ್,ಇನ್ನಿತರ ಗ್ರಾಮ ಪಂಚಾಯ್ತಿ ಸದಸ್ಯರು ಸಿಡಿಸಿ ಸದಸ್ಯರು ಹಾಜರಿದ್ದರು.

ಇದೇ ಸಂದರ್ಭದಲ್ಲಿ ಕಳೆದ ವರ್ಷದಲ್ಲಿ ದ್ವಿತೀಯ ಪಿ.ಯು.ಸಿ.ಪರೀಕ್ಷೆಯಲ್ಲಿ  ಉನ್ನತ ಶ್ರೇಣಿಯಲ್ಲಿ ಉತ್ತೀರ್ಣಾರಾದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಹುಂಚದ ಶವಾಗಾರಕ್ಕೆ 6 ವರ್ಷವಾದರೂ ಉದ್ಘಾಟನೆ ಭಾಗ್ಯ ಇಲ್ಲ –  ಮುಹೂರ್ತ ಸಿಕ್ಕಿಲ್ಲವೋ, ಅಥವಾ ಸತ್ತವರೇ ಎದ್ದು ಬಂದು ರಿಬ್ಬನ್ ಕತ್ತರಿಸಬೇಕೋ?

ಹುಂಚದ ಶವಾಗಾರಕ್ಕೆ 6 ವರ್ಷವಾದರೂ ಉದ್ಘಾಟನೆ ಭಾಗ್ಯ ಇಲ್ಲ –  ಮುಹೂರ್ತ ಸಿಕ್ಕಿಲ್ಲವೋ, ಅಥವಾ ಸತ್ತವರೇ ಎದ್ದು ಬಂದು ರಿಬ್ಬನ್…

3 hours ago

ಈದ್ ಮಿಲಾದ್ ಹಬ್ಬ ಶಾಂತಿಯುತ ಆಚರಣೆಗೆ ಪೊಲೀಸ್ ಸೂಚನೆ: ಸೌಹಾರ್ದತೆ ಕಾಪಾಡಲು ಪಿಎಸ್‌ಐ ರಾಜುರೆಡ್ಡಿ ಕರೆ

ಈದ್ ಮಿಲಾದ್ ಹಬ್ಬ: ಸೌಹಾರ್ದತೆ ಕಾಪಾಡಲು ಪಿಎಸ್‌ಐ ರಾಜುರೆಡ್ಡಿ ಕರೆ Ripponpete PSI Rajureddy appeals for peaceful and…

6 hours ago

13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೈಕ್ ಕಳ್ಳ ಕೊನೆಗೂ ಪೊಲೀಸರ ಬಲೆಗೆ

13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೈಕ್ ಕಳ್ಳ ಕೊನೆಗೂ ಪೊಲೀಸರ ಬಲೆಗೆ Bhadravati New Town Police have arrested a…

7 hours ago

ಅಡಿಕೆ ತೋಟಕ್ಕೆ ನುಗ್ಗಿದ ಖಾಸಗಿ ಬಸ್: 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯ

ಅಡಿಕೆ ತೋಟಕ್ಕೆ ನುಗ್ಗಿದ ಖಾಸಗಿ ಬಸ್: 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯ Private bus loses control and…

7 hours ago

ಸಾಗರ : ಬಳಸಗೋಡು ಬಳಿ ಭೀಕರ ರಸ್ತೆ ಅಪಘಾತ – 19 ವರ್ಷದ ಯುವಕ ಸ್ಥಳದಲ್ಲೇ ಸಾವು

ಸಾಗರ : ಬಳಸಗೋಡು ಬಳಿ ಭೀಕರ ರಸ್ತೆ ಅಪಘಾತ - 19 ವರ್ಷದ ಯುವಕ ಸ್ಥಳದಲ್ಲೇ ಸಾವು 19-year-old Arjun…

9 hours ago

ಕಸ್ತೂರಿ ರಂಗನ್ ವರದಿ ಮತ್ತೆ ಮುನ್ನೆಲೆಗೆ: ಮಲೆನಾಡಿನ ಸಾವಿರಾರು ಕುಟುಂಬಗಳಿಗೆ ಆತಂಕ.! – ಜಿಲ್ಲೆಯ ಯಾವ ಗ್ರಾಮಗಳಿಗೆ ಕಸ್ತೂರಿ ರಂಗನ್ ವರದಿ ಅನ್ವಯ? ಇಲ್ಲಿದೆ ಸಂಪೂರ್ಣ ಪಟ್ಟಿ

ಕಸ್ತೂರಿ ರಂಗನ್ ವರದಿ ಮತ್ತೆ ಮುನ್ನೆಲೆಗೆ: ಮಲೆನಾಡಿನ ಸಾವಿರಾರು ಕುಟುಂಬಗಳಿಗೆ ಆತಂಕ.! – ಜಿಲ್ಲೆಯ ಯಾವ ಗ್ರಾಮಗಳಿಗೆ ಕಸ್ತೂರಿ ರಂಗನ್…

1 day ago