Ripponpete | ಕ್ರೀಡಾಕೂಟಗಳು ಮಾನಸಿಕ ಹಾಗೂ ದೈಹಿಕ ಶಕ್ತಿಯನ್ನು ಹೆಚ್ಚಿಸುತ್ತದೆ: ಶಾಸಕ ಬೇಳೂರು ಗೋಪಾಲಕೃಷ್ಣ

Ripponpete | ಕ್ರೀಡಾಕೂಟಗಳು ಮಾನಸಿಕ ಹಾಗೂ ದೈಹಿಕ ಶಕ್ತಿಯನ್ನು ಹೆಚ್ಚಿಸುತ್ತದೆ: ಶಾಸಕ ಬೇಳೂರು ಗೋಪಾಲಕೃಷ್ಣ

ರಿಪ್ಪನ್ ಪೇಟೆ :ಕ್ರೀಡೆಯಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯ ವೃದ್ಧಿಸುತ್ತದೆ. ಯುವಜನರು ಆಟೋಟಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು ದುಶ್ಚಟಗಳಿಂದ ದೂರ ಇರಬೇಕೆಂದು ಸಾಗರ ಕ್ಷೇತ್ರದ ಶಾಸಕ ಹಾಗೂ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಬೇಳೂರು ಗೋಪಾಲಕೃಷ್ಣ ಹೇಳಿದರು.


ಪಟ್ಟಣದಲ್ಲಿ ಎಲೆವನ್ ಸ್ಟಾರ್ಸ್ ಕ್ರಿಕೆಟ್ ಕ್ಲಬ್ ಶನಿವಾರ ಆಯೋಜಿಸಿದ್ದ ರಿಪಬ್ಲಿಕ್ ಕಪ್ – 2024 ಕ್ರಿಕೆಟ್ ಪಂದ್ಯಾವಳಿಯನ್ನು ಉದ್ಘಾಟಿಸಿ ಅವರು ಮಾತನಾಡಿ ಆಧುನಿಕ ತಂತ್ರಜ್ಞಾನದ ಅಡಿಯಲ್ಲಿ ಶಿಕ್ಷಣವನ್ನು ಪಡೆಯುತ್ತಿರುವ ಇಂದಿನ ಯುವ ಸಮೂಹ ಒತ್ತಡದ ಜೀವನದಲ್ಲಿ ಬದುಕುತ್ತಿದ್ದಾರೆ.ಕ್ರೀಡೆಗಳು ಸೋಲು ಗೆಲುವಿನ ಪಾಠವನ್ನು ಕಲಿಸುವುದರ ಜೊತೆಗೆ ಯುವ ಸಮುದಾಯದಲ್ಲಿ ಶಿಸ್ತಬದ್ಧ ಜೀವನವನ್ನು ರೂಪಿಸುತ್ತವೆ. ಗ್ರಾಮೀಣ ಪ್ರದೇಶದಲ್ಲಿ ಯುವಜನರು ಹೆಚ್ಚು ಕ್ರೀಡಾ ಚಟುವಟಿಕೆಯಲ್ಲಿ ಭಾಗಿಯಾಗುವುದರಿಂದ ಆರೋಗ್ಯವಾಗಿ ಚಟುವಟಿಕೆಯಿಂದ ಇರಬಹುದು ಎಂದು ಹೇಳಿದರು.

ಎಲೆವನ್ ಸ್ಟಾರ್ ಕ್ರಿಕೆಟ್ ಕ್ಲಬ್ ಆಯೋಜಿಸಿರುವ ಕ್ರಿಕೆಟ್ ಪಂದ್ಯಾವಳಿಯಲ್ಲಿ ನಿವೃತ್ತ ಯೋಧರಿಗೆ,ಕ್ರೀಡಾ ಸಾಧಕರಿಗೆ ,ಉತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನಿಸುತ್ತಿರುವುದು ಎಲ್ಲರಿಗೂ ಪ್ರೇರಣೆಯಾಗಿದೆ.ಇಂತಹ ಉತ್ತಮ ಕಾರ್ಯಕ್ರಮವನ್ನು ಆಯೋಜಿಸಿದ ಕ್ಲಬ್ ನ ಎಲ್ಲಾರಿಗೂ ಹೃದಯಪೂರ್ವಕವಾಗಿ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದರು.

ಜಿಪಂ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ್ ಮಾತನಾಡಿ ಕ್ರೀಡೆಯೂ ಜೀವನದ ಒಂದು ಭಾಗವಾಗಿದ್ದು ಸ್ಪರ್ಧಾತ್ಮಕ ಮನೋಭಾವನೆ ಮೂಡಿಸುತ್ತದೆ. ನೀತಿ ನಿಯಮಗಳ ಸಂವಹನೆಯೊಂದಿಗೆ ಶಿಸ್ತಿನ ಅರಿವು ಉಂಟಾಗುತ್ತದೆ. ಕ್ರೀಡೆಯಲ್ಲಿ ಸೋಲು-ಗೆಲುವುಗಳನ್ನು ಸಮಾನವಾಗಿ ಸ್ವೀಕರಿಸುವ ಮನೋಭಾವ ಹೆಚ್ಚಿಸುತ್ತದೆ. ಹಾಗೆಯೇ ಇದರಿಂದ ಮನಸ್ಸಿನ ನಾಗಾಲೋಟದ ಕೌಶಲತೆ ವೃದ್ಧಿಸುತ್ತದೆ. ಅದನ್ನು ಜೀವನದ ಒಂದು ಭಾಗವೆಂದು ಪರಿಗಣಿಸುವುದರಿಂದ ಒತ್ತಡದ ಜೀವನದಿಂದ ಹೊರಬರಲು ಸಾಧ್ಯ ಎಂದರು.

ಈ ಸಂಧರ್ಭದಲ್ಲಿ ನಿವೃತ್ತ ಯೋಧರಾದ ಮುಕುಂದ ಬಿ ಎಂ , ಕುಮಾರಸ್ವಾಮಿ ಬಿ ಟಿ , ರಮೇಶ್ ಹೆಚ್ ಎನ್ ಹಾಗೂ ಕುವೆಂಪು ವಿಶ್ವವಿದ್ಯಾಲಯ ಬಿಬಿಎ ವಿಭಾಗದಲ್ಲಿ ನಾಲ್ಕನೇ ರ್ಯಾಂಕ್ ಪಡೆದ ಸಿಂಧು ಮತ್ತು ಪ್ರೋ ಕಬ್ಬಡಿ ಲೀಗ್ ಗೆ ಆಯ್ಕೆಯಾದ ಗಗನ್ ಗೌಡ ಪರವಾಗಿ ಅವರ ಪೋಷಕರನ್ನು ಸನ್ಮಾನಿಸಲಾಯಿತು.2023-24 ನೇ ಸಾಲಿನ SSLC ,PUC ಹಾಗೂ ಪದವಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ,ರಾಷ್ಟ್ರ ಹಾಗೂ ರಾಜ್ಯಮಟ್ಟದಲ್ಲಿ ಪ್ರತಿನಿಧಿಸಿದ ಕ್ರೀಡಾಪಟುಗಳಿಗೆ ಸನ್ಮಾನಿಸಿ ಗೌರವಿಸಲಾಯಿತು.


ಈ ಸಂದರ್ಭದಲ್ಲಿ ಇಲೆವನ್ ಸ್ಟಾರ್ ಕ್ಲಬ್ ಅಧ್ಯಕ್ಷ ಅಬ್ದುಲ್ ರವೂಫ಼್ ಮುಖ್ಯ ಅತಿಥಿಗಳಾಗಿ ಧನಲಕ್ಷ್ಮಿ ಲಕ್ಷ್ಮಿ ಗಂಗಾಧರ್, ಸುಧೀಂದ್ರ ಪೂಜಾರಿ ,ಬಿ ಪಿ ರಾಮಚಂದ್ರ , ಆಸೀಫ಼್ ಭಾಷಾಸಾಬ್ , ನಿರೂಪ , ಹಸನಬ್ಬ , ರಫ಼ಿ ರಿಪನ್ ಪೇಟೆ, ಶ್ವೇತಾ ನಿಶಾಂತ್ ಆಚಾರ್ಯ, ಎಂ ಬಿ ಲಕ್ಷ್ಮಣ್ ಗೌಡ, ಅಮೀರ್ ಹಂಜಾ, ಎಂ ಎಂ ಪರಮೇಶ್, ಮಾಸ್ತಿಕಟ್ಟೆ ಸುಬ್ರಮಣ್ಯ, ಲೇಖನ ಚಂದ್ರನಾಯಕ್, ಪ್ರವೀಣ್, ಶಬ್ಬೀರ್, ಆರ್ ಎನ್ ಮಂಜುನಾಥ್, ಮುತ್ತಲಿಫ್, ಡಾಕಪ್ಪ, ಮಾಲತೇಶ್ ಹಾಗೂ ಇನ್ನಿತರರಿದ್ದರು.

ಕಾರ್ಯಕ್ರಮವನ್ನು ರಿಜ್ವಾನ್ ನಿರೂಪಿಸಿದರು.

Leave a Reply

Your email address will not be published. Required fields are marked *