Ripponpete | ಚಾಲಕನ ನಿಯಂತ್ರಣ ತಪ್ಪಿ ಲೈಟ್ ಕಂಬಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು – ತಪ್ಪಿದ ಭಾರಿ ಅನಾಹುತ
ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಲೈಟ್ ಕಂಬಕ್ಕೆ ಡಿಕ್ಕಿಯಾಗಿ ಪಲ್ಟಿಯಾಗಿ ಉರುಳಿ ಬಿದ್ದಿರುವ ಘಟನೆ ರಿಪ್ಪನ್‌ಪೇಟೆಯ ಹೊಸನಗರ ರಸ್ತೆಯ ತಾವರೆಕೆರೆ ಸಮೀಪದಲ್ಲಿ ನಡೆದಿದೆ.
ರಿಪ್ಪನ್‌ಪೇಟೆ ಕಡೆಯಿಂದ ಹೊಸನಗರ ಕಡೆಗೆ ತೆರಳುತಿದ್ದ ಮಾರುತಿ ಸ್ವಿಫ್ಟ್ ಕಾರು ತಾವರೆಕೆರೆ ತಿರುವಿನಲ್ಲಿ ನಿಯಂತ್ರಣ ತಪ್ಪಿ ರಸ್ತೆ ಕೆಳಗೆ ಇಳಿದ ಪರಿಣಾಮ ಲೈಟ್ ಕಂಬಕ್ಕೆ ಡಿಕ್ಕಿಯಾಗಿ, ಮೋಟಾರ್ ಪಂಪ್ ಹೌಸ್ ಗೆ ಡಿಕ್ಕಿಯಾಗಿ ನಂತರ ಪಲ್ಟಿಯಾಗಿ ಉರುಳಿ ಬಿದ್ದಿದ್ದು ಈ ಸಂಧರ್ಭದಲ್ಲಿ ಅದೃಷ್ಟವಶಾತ್ ವಿದ್ಯುತ್ ಸಂಪರ್ಕ ಕಡಿತಗೊಂಡ ಕಾರಣ ಭಾರಿ ಅನಾಹುತ ತಪ್ಪಿದೆ.
ಕಾರಿನಲ್ಲಿ ಚಾಲಕನೊಬ್ಬನೆ ಪ್ರಯಾಣಿಸುತಿದ್ದು ಸಣ್ಣಪುಟ್ಟ ಗಾಯಾಗಳಾಗಿದೆ
ರಿಪ್ಪನ್‌ಪೇಟೆ ಠಾಣೆಯ ಸಿಬ್ಬಂದಿಗಳು ಹಾಗೂ ಮೆಸ್ಕಾಂ ಇಲಾಖೆಯವರು ಸ್ಥಳಕ್ಕೆ ಆಗಮಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.