Ripponpete | ಪುನೀತ್ ರಾಜ್‍ಕುಮಾರ್ ನಾಮಫಲಕಕ್ಕೆ ಬಣ್ಣ ಬಳಿದಿದ್ದಾರೆಂದು ಸುಳ್ಳು ಸುದ್ದಿ ಹಂಚುತ್ತಿರುವ ಕಿಡಿಗೇಡಿಗಳು –
ರಿಪ್ಪನ್ ಪೇಟೆ : ಪಟ್ಟಣದಲ್ಲಿ ಪುನೀತ್ ರಾಜ್‍ಕುಮಾರ್ ನಾಮಫಲಕಕ್ಕೆ ಬಣ್ಣ ಬಳೆದಿದ್ದಾರೆ ಹಾಗೂ ಪುನೀತ್ ಪುತ್ಥಳಿ ಕೆಡವಿದ್ದಾರೆ ಎಂದು ಸುಳ್ಳು ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಡುತಿದ್ದು ಇದು ಸತ್ಯಕ್ಕೆ ದೂರವಾದ ಸಂಗತಿಯಾಗಿದೆ.
ಸಾಮಾಜಿಕ ಜಾಲತಾಣದಲ್ಲಿ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆಯ ಗವಟೂರಿನಲ್ಲಿ ಪುನೀತ್ ರಾಜ್‍ಕುಮಾರ್ ನಾಮಫಲಕಕ್ಕೆ ಬಣ್ಣ ಬಳಿದಿದ್ದಾರೆ ಹಾಗೂ ಪುನೀತ್ ಪುತ್ಥಳಿ ಕೆಡವಿದ್ದಾರೆ ಎಂದು ಸುಳ್ಳು ಸುದ್ದಿಗಳನ್ನು ಕಿಡಿಗೇಡಿಗಳು ಹಂಚಿಕೊಳ್ಳುತಿದ್ದು ಇದು ಸತ್ಯಕ್ಕೆ ದೂರವಾದ ಸಂಗತಿಯಾಗಿದೆ.
2021 ರ ಡಿಸೆಂಬರ್ ತಿಂಗಳಿನಲ್ಲಿ ರಿಪ್ಪನ್‌ಪೇಟೆಯ ಸಾಗರ ರಸ್ತೆಯ ಕುಕ್ಕಳಲೆ ಸಂಪರ್ಕ ರಸ್ತೆಗೆ ಕರ್ನಾಟಕ ರತ್ನ ಪುನೀತ್ ರಾಜಕುಮಾರ್ ಇಡಲಾಗಿತ್ತು ತಡರಾತ್ರಿ ಕೆಲವು ದುಷ್ಕರ್ಮಿಗಳು ಪುನೀತ್ ರಾಜಕುಮಾರ್ ರವರ ನಾಮಫಲಕಕ್ಕೆ ಬಣ್ಣಹಚ್ಚಿ ವಿಕೃತಿ ಮೆರೆದಿದ್ದರು.
ಈ ಸಂಬಂಧ ಪ್ರತಿಭಟನೆಗಳು ನಡೆದು ಆ ನಂತರದಲ್ಲಿ ಅದೇ ಸ್ಥಳದಲ್ಲಿ ಪುನೀತ್ ರಾಜ್‍ಕುಮಾರ್ ನಾಮಫಲಕಕ್ಕೆ ಸಿದ್ದಗೊಂಡಿದ್ದು ಪ್ರಸ್ತುತ ಯಾವುದೇ ರೀತಿಯಾಗಿ ಗೊಂದಲವಾಗಿರುವುದಿಲ್ಲ ಆದರೆ ಕೆಲವು ಕಿಡಿಗೇಡಿಗಳು ಹಳೆಯ ಘಟನೆಯನ್ನು ಸಾಮಾಜಿಕ ಜಾಲತಾಣದಲ್ಲಿ ಹಬ್ಬಿಸಿ ಗೊಂದಲ ಮೂಡಿಸುತಿದ್ದಾರೆ.
ವೈರಲ್ ಆದ ಮಾಹಿತಿಯಲ್ಲಿ ಪುತ್ಥಳಿ ಗೆ ಹಾನಿ ಎನ್ನಲಾಗುತಿದೆ ಆದರೆ ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪುನೀತ್ ರಾಜ್‍ಕುಮಾರ್ ರವರ ಯಾವುದೇ ಪುತ್ಥಳಿ ಇರುವುದಿಲ್ಲ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್