Ripponpete | ಪ್ರಸ್ತುತ ಸನ್ನಿವೇಶದಲ್ಲಿ ಸಾರ್ವಜನಿಕರು,ವಿದ್ಯಾರ್ಥಿಗಳಲ್ಲಿ ಏಡ್ಸ್ ಕುರಿತು ಜಾಗೃತಿ ಮೂಡಿಸುವ ಅಗತ್ಯತೆ ಇದೆ

ಸಾರ್ವಜನಿಕರು,ವಿದ್ಯಾರ್ಥಿಗಳಲ್ಲಿ ಏಡ್ಸ್ ಕುರಿತು ಜಾಗೃತಿ ಮೂಡಿಸುವ ಅಗತ್ಯತೆ ಇದೆ : ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಕರಿಬಸಮ್ಮ

ರಿಪ್ಪನ್‌ಪೇಟೆ : ಸಾರ್ವಜನಿಕರು,ವಿದ್ಯಾರ್ಥಿಗಳಲ್ಲಿ ಏಡ್ಸ್ ಕುರಿತು ಜಾಗೃತಿ ಮೂಡಿಸುವ ಅಗತ್ಯತೆ ಇದೆ,ಹಾಗೇಯೆ ಏಡ್ಸ್ ಹರಡುವ ವಿಧಾನಗಳು,ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆ ಚಿಕಿತ್ಸೆ ಕ್ರಮಗಳ ಬಗ್ಗೆ ಅರಿವು ಮೂಡಿಸಬೇಕಿದೆ ಎಂದು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಕರಿಬಸಮ್ಮ ಹೇಳಿದರು.

ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ರೆಡ್ ರಿಬ್ಬನ್ ಕ್ಲಬ್,  ಯುವ ರೆಡ್ ಕ್ರಾಸ್ ಘಟಕ, ತಾಲೂಕು ಆರೋಗ್ಯ ಇಲಾಖೆ ಹಾಗೂ ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾದ ಏಡ್ಸ್ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿ ಏಡ್ಸ್ ಕುರಿತು ಇರುವ ತಪ್ಪು ಕಲ್ಪನೆಗಳ ಬಗ್ಗೆ ಅರಿವು ಮೂಡಿಸಿದರು.ವಿದ್ಯಾರ್ಥಿ ಜೀವನ ಅತ್ಯಮೂಲ್ಯವಾದದು ಈ ಅವಧಿಯಲ್ಲಿ ವಿದ್ಯಾರ್ಥಿಗಳು ಯಾವುದೇ ಆಕರ್ಷಣೆಗಳಿಗೆ ಒಳಗಾಗದೆ ಜ್ಞಾನಾರ್ಜನೆಯ ಕಡೆಗೆ ಗಮನಹರಿಸಿ ಉತ್ತಮ ಜೀವನ ರೂಪಿಸಿಕೊಳ್ಳಬೇಕೆಂದು ಸಲಹೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲರಾದ ಚಂದ್ರಶೇಖರ್  ಟಿ. ವಹಿಸಿದ್ದರು.

ಕಾರ್ಯಕ್ರಮದಲ್ಲಿ ಆರೋಗ್ಯ ಇಲಾಖೆಯ ಸುಷ್ಮಾ, ಸುಪ್ರೀತಾ ಹಾಗೂ ಅಮೃತೇಶ್ ಮಾತನಾಡಿ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಿದರು.  

ಈ ಸಂಧರ್ಭದಲ್ಲಿ ಐಕ್ಯೂಎಸಿ ಸಂಚಾಲಕರಾದ ರಾಜು ಆರ್. ಕೆ. ರೆಡ್ ರಿಬ್ಬನ್ ಕ್ಲಬ್ ನ ಸಂಚಾಲಕರಾದ ಶಿಲ್ಪಾ ಪಾಟೀಲ್,   ಯುವ ರೆಡ್ ಕ್ರಾಸ್ ಘಟಕದ ಸಂಚಾಲಕರಾದ ಹರ್ಷ ಕುಮಾರ್ ಕೆ ಆರ್  ಹಾಗೂ ಕಾಲೇಜಿನ  ಬೋಧಕ ಮತ್ತು ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿ ವೃಂದ ಭಾಗವಹಿಸಿದ್ದರು.

Leave a Reply

Your email address will not be published. Required fields are marked *