ಸಾರ್ವಜನಿಕರು,ವಿದ್ಯಾರ್ಥಿಗಳಲ್ಲಿ ಏಡ್ಸ್ ಕುರಿತು ಜಾಗೃತಿ ಮೂಡಿಸುವ ಅಗತ್ಯತೆ ಇದೆ : ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಕರಿಬಸಮ್ಮ
ರಿಪ್ಪನ್ಪೇಟೆ : ಸಾರ್ವಜನಿಕರು,ವಿದ್ಯಾರ್ಥಿಗಳಲ್ಲಿ ಏಡ್ಸ್ ಕುರಿತು ಜಾಗೃತಿ ಮೂಡಿಸುವ ಅಗತ್ಯತೆ ಇದೆ,ಹಾಗೇಯೆ ಏಡ್ಸ್ ಹರಡುವ ವಿಧಾನಗಳು,ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆ ಚಿಕಿತ್ಸೆ ಕ್ರಮಗಳ ಬಗ್ಗೆ ಅರಿವು ಮೂಡಿಸಬೇಕಿದೆ ಎಂದು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಕರಿಬಸಮ್ಮ ಹೇಳಿದರು.
ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ರೆಡ್ ರಿಬ್ಬನ್ ಕ್ಲಬ್, ಯುವ ರೆಡ್ ಕ್ರಾಸ್ ಘಟಕ, ತಾಲೂಕು ಆರೋಗ್ಯ ಇಲಾಖೆ ಹಾಗೂ ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾದ ಏಡ್ಸ್ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿ ಏಡ್ಸ್ ಕುರಿತು ಇರುವ ತಪ್ಪು ಕಲ್ಪನೆಗಳ ಬಗ್ಗೆ ಅರಿವು ಮೂಡಿಸಿದರು.ವಿದ್ಯಾರ್ಥಿ ಜೀವನ ಅತ್ಯಮೂಲ್ಯವಾದದು ಈ ಅವಧಿಯಲ್ಲಿ ವಿದ್ಯಾರ್ಥಿಗಳು ಯಾವುದೇ ಆಕರ್ಷಣೆಗಳಿಗೆ ಒಳಗಾಗದೆ ಜ್ಞಾನಾರ್ಜನೆಯ ಕಡೆಗೆ ಗಮನಹರಿಸಿ ಉತ್ತಮ ಜೀವನ ರೂಪಿಸಿಕೊಳ್ಳಬೇಕೆಂದು ಸಲಹೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲರಾದ ಚಂದ್ರಶೇಖರ್ ಟಿ. ವಹಿಸಿದ್ದರು.
ಕಾರ್ಯಕ್ರಮದಲ್ಲಿ ಆರೋಗ್ಯ ಇಲಾಖೆಯ ಸುಷ್ಮಾ, ಸುಪ್ರೀತಾ ಹಾಗೂ ಅಮೃತೇಶ್ ಮಾತನಾಡಿ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಿದರು.
ಈ ಸಂಧರ್ಭದಲ್ಲಿ ಐಕ್ಯೂಎಸಿ ಸಂಚಾಲಕರಾದ ರಾಜು ಆರ್. ಕೆ. ರೆಡ್ ರಿಬ್ಬನ್ ಕ್ಲಬ್ ನ ಸಂಚಾಲಕರಾದ ಶಿಲ್ಪಾ ಪಾಟೀಲ್, ಯುವ ರೆಡ್ ಕ್ರಾಸ್ ಘಟಕದ ಸಂಚಾಲಕರಾದ ಹರ್ಷ ಕುಮಾರ್ ಕೆ ಆರ್ ಹಾಗೂ ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿ ವೃಂದ ಭಾಗವಹಿಸಿದ್ದರು.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್