ರಿಪ್ಪನ್ಪೇಟೆ : ಸುಮಾರು 5.50 ಕೋಟಿ ರೂ. ವೆಚ್ಚದಲ್ಲಿ ಸಾಗರ ರಸ್ತೆಯಲ್ಲಿ ನಿರ್ಮಾಣವಾಗುತ್ತಿರುವ ಚತುಷ್ಪಥ ರಸ್ತೆ ನಿರ್ಮಾಣ ಕಾಮಗಾರಿಯನ್ನು ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ವೀಕ್ಷಿಸಿದರು.
ವಿನಾಯಕ ವೃತ್ತದಿಂದ ಎಪಿಎಂಸಿ ವರೆಗೆ ಚತುಷ್ಪತ ರಸ್ತೆ ಕಾಮಗಾರಿಯು ಸುಮಾರು 5.50 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣವಾಗುತಿದ್ದು ಈ ಕಾಮಗಾರಿಯನ್ನು ವೀಕ್ಷಿಸಿದ ಶಾಸಕರು ಕಾಮಗಾರಿಯ ಗುಣಮಟ್ಟವನ್ನು ಕಾಯ್ದುಕೊಂಡು ಕೆಲಸ ನಿರ್ವಹಿಸುವಂತೆ ಗುತ್ತಿಗೆದಾರನಿಗೆ ಎಚ್ಚರಿಕೆ ನೀಡಿದರು.
ನಂತರ ಮಾದ್ಯಮದವರೊಂದಿಗೆ ಮಾತನಾಡಿದ ಶಾಸಕ ಬೇಳೂರು ಗೋಪಾಲಕೃಷ್ಣ 5.50 ಕೋಟಿ ರೂ ವೆಚ್ಚದಲ್ಲಿ ಚತುಷ್ಫತ ರಸ್ತೆ ನಿರ್ಮಾಣವಾಗುತಿದ್ದು ಮಾರ್ಚ್ ಅಂತ್ಯದೊಳಗೆ ಕಾಮಗಾರಿ ಪೂರ್ಣಗೊಳ್ಳುವ ವಿಶ್ವಾಸವಿದೆ ಎಂದರು.
ಪಟ್ಟಣದಲ್ಲಿ ಇನ್ನುಳಿದ ಮೂರು ಪ್ರಮುಖ ರಸ್ತೆಗಳನ್ನು ಚತುಷ್ಪತ ರಸ್ತೆಗಳನ್ನಾಗಿ ಅಭಿವೃದ್ಧಿ ಪಡಿಸುವ ಮೂಲಕ ಮುಂದಿನ ದಿನಗಳಲ್ಲಿ ರಿಪ್ಪನ್ ಪೇಟೆ ಯನ್ನು ಉನ್ನತಮಟ್ಟದ ಅಭಿವೃದ್ಧಿ ಪಥದತ್ತ ಕೊಂಡೊಯ್ಯಲಾಗುವುದು ಎಂದರು.
ಈ ಸಂಧರ್ಭದಲ್ಲಿ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಇದ್ದರು
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್