POSTMANNEWS

ನೈಜ ಸುದ್ದಿ ನೇರ ಬಿತ್ತರ..

Ripponpete | ರಾಷ್ಟ್ರಮಟ್ಟದ ಕಬ್ಬಡಿ ಪಂದ್ಯಾವಳಿಗೆ ಆಯ್ಕೆಯಾದ ವಿದ್ಯಾರ್ಥಿನಿಯರಿಗೆ ಶಾಸಕರಿಂದ ಸನ್ಮಾನ

Ripponpete | ರಾಷ್ಟ್ರಮಟ್ಟದ ಕಬ್ಬಡಿ ಪಂದ್ಯಾವಳಿಗೆ ಆಯ್ಕೆಯಾದ ವಿದ್ಯಾರ್ಥಿನಿಯರಿಗೆ ಶಾಸಕರಿಂದ ಸನ್ಮಾನ


ರಿಪ್ಪನ್‌ಪೇಟೆ : ಕಬ್ಬಡಿ ಪಂದ್ಯಾವಳಿಯಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿನಿಯರಿಗೆ ಶಾಸಕ ಬೇಳೂರು ಗೋಪಾಲಕೃಷ್ಣ ಸನ್ಮಾನಿಸಿ ಗೌರವಿಸಿದರು.

ಪಟ್ಟಣದ ಶ್ರೀ ಶಾರದಾ ರಾಮಕೃಷ್ಣ ವಿದ್ಯಾಲಯದ ನಾಲ್ವರು ವಿದ್ಯಾರ್ಥಿನಿಯರು ಕಬ್ಬಡಿ ಪಂದ್ಯಾವಳಿಯಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.


ಮಂಡ್ಯ ಜಿಲ್ಲೆಯ ನಾಗಮಂಗಲದ ಆದಿಚುಂಚನಗಿರಿ ಮಠದ ಕ್ರೀಡಾಂಗಣದಲ್ಲಿ ನಡೆದ ರಾಜ್ಯಮಟ್ಟದ 17 ವರ್ಷ ವಯೋಮಿತಿಯೊಳಗಿನ ಹಾಗೂ 14 ವರ್ಷ ವಯೋಮಿತಿಯ ಬಾಲಕಿಯರ ಕಬ್ಬಡಿ ಪಂದ್ಯಾವಳಿಯಲ್ಲಿ ಭಾಗವಹಿಸಿ ಕ್ರಮವಾಗಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದು ಈ ತಿಂಗಳು ದೆಹಲಿ ಹಾಗೂ ಜಾರ್ಖಂಡ್ ನಲ್ಲಿ ನಡೆಯುವ ರಾಷ್ಟ್ರ ಮಟ್ಟದ ಕಬ್ಬಡಿ ಪಂದ್ಯಾವಳಿಗೆ ಶ್ರೀ ಶಾರದ ರಾಮಕೃಷ್ಣ ವಿದ್ಯಾಲಯದ ವಿದ್ಯಾರ್ಥಿನಿಯರಾದ ಜ್ಞಾನ ಎನ್ ಕುಕ್ಕಳಲೆ , ಶ್ರೇಯಾ ಬಿ ಆರ್ ನಾಯಕ್ ಮತ್ತು ಶ್ರಾವ್ಯ ಹಿರೆಮೈತೆ ,ಶಮಿತಾ ಹಿರೆಮೈತೆ ಆಯ್ಕೆಯಾಗಿದ್ದಾರೆ.

ಈ ಹಿನ್ನಲೆಯಲ್ಲಿ ಶಾಸಕ ಬೇಳೂರು ಗೋಪಾಲಕೃಷ್ಣ ರವರು ಪಟ್ಟಣದಲ್ಲಿ ವಿದ್ಯಾರ್ಥಿನಿಯರನ್ನು ಸನ್ಮಾನಿಸಿ ಗೌರವಿಸಿ ಪಂದ್ಯಾವಳಿಗೆ ತೆರಳಲು ವೈಯಕ್ತಿಕವಾಗಿ ಆರ್ಥಿಕ ಸಹಾಯ ಮಾಡಿದರು.

ಈ ಸಂಧರ್ಭದಲ್ಲಿ ಪಕ್ಷದ ಪ್ರಮುಖರಾದ ಉಮಾಕರ್ , ರವೀಂದ್ರ ಕೆರೆಹಳ್ಳಿ ,ರಮೇಶ್ ಫ್ಯಾನ್ಸಿ , ಶ್ರೀನಿವಾಸ್ ಆಚಾರ್ , ಕೃಷ್ಣೋಜಿ ರಾವ್ , ದಿವಾಕರ್ , ಖಲೀಲ್ ಷರೀಫ್ , ಹೆಚ್ ಎಸ್ ಪ್ರಭಾಕರ್ ಹಾಗೂ ತರಬೇತುದಾರ ವಿನಯ್ ಇದ್ದರು.

About The Author

Leave a Reply

Your email address will not be published. Required fields are marked *

Exit mobile version