Ripponpete | ವಿಕಲಚೇತನ ಯುವತಿಗೆ ಧೈರ್ಯ ತುಂಬಿ ಆರ್ಥಿಕ ನೆರವು ನೀಡಿದ ಪಿಎಸ್ಐ ಪ್ರವೀಣ್

Ripponpete | ವಿಕಲ ಚೇತನ ಯುವತಿಗೆ  ಧೈರ್ಯ ತುಂಬಿ ಆರ್ಥಿಕ ನೆರವು ನೀಡಿದ ಪಿಎಸ್ಐ ಪ್ರವೀಣ್


ರಿಪ್ಪನ್ ಪೇಟೆ : ಕೋಡೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಾರೋ ಕೊಪ್ಪ ಗ್ರಾಮದ ಬಡ ಕುಟುಂಬದ ವಿಕಲಚೇತನ ಯುವತಿ  ಉಷಾ(24) ರವರಿಗೆ ಧೈರ್ಯ ತುಂಬಿ ಆರ್ಥಿಕ ನೆರವು ನೀಡುವುದರ ಮೂಲಕ ಪಿಎಸ್ಐ ಪ್ರವೀಣ್ ಎಸ್ ಪಿ  ಸಾರ್ವಜನಿಕ ಪ್ರಶಂಸೆಗೆ ಒಳಗಾಗಿದ್ದಾರೆ.

ಕಳೆದ ಎರಡು ದಿನಗಳ ಹಿಂದೆ ಪೋಸ್ಟ್ ಮ್ಯಾನ್ ನ್ಯೂಸ್ ಸುದ್ದಿ ಬಳಗಕ್ಕೆ ಹಾರಂಬಳ್ಳಿ ವಾಸು ಎಂಬುವರು ಹಾರೋಗೊಪ್ಪ ವಿಕಲ ಚೇತನ ಯುವತಿಯ ಹಾಗೂ ಕುಟುಂಬದ ಬಗ್ಗೆ ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಪೋಸ್ಟ್ ಮ್ಯಾನ್ ಸುದ್ದಿ ಬಳಗದ ವತಿಯಿಂದ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲಿಸಿದಾಗ ವಿಕಲಚೇತನ ಯುವತಿಯ ಕುಟುಂಬ ತೀವ್ರ ಆರ್ಥಿಕ ಸಂಕಷ್ಟದಲ್ಲಿದ್ದಿರುವುದನ್ನು ಗಮನಿಸಿ ಈ ಬಗ್ಗೆ ವಿಸ್ತೃತವಾದ ವರದಿ ಪ್ರಕಟಿಸಿ ಬಡ ಕುಟುಂಬಕ್ಕೆ ದಾನಿಗಳಿಂದ ಆರ್ಥಿಕ ನೆರವು ಕೊಡಿಸಲು ತೀರ್ಮಾನಿಸಲಾಗಿತ್ತು.


ಸುದ್ದಿಗೆ ಬೇಕಾದ ಮಾಹಿತಿ ಹಾಗೂ ವೀಡಿಯೋವನ್ನು ಸಂಗ್ರಹಸಿ ಮನೆಯಿಂದ ಹೊರಡುವ ಸಮಯದಲ್ಲಿ ಯುವತಿ ಕಣ್ಣೀರಿನಿಂದ  ನನಗೆ ಒಂದು ಟಿವಿ ಕೊಡಿಸಿ ಎಂದು ಪೋಸ್ಟ್ ಮ್ಯಾನ್ ಸುದ್ದಿ ಬಳಗಕ್ಕೆ ಕೋರಿಕೊಂಡಿದ್ದಳು.ಎರಡೂ ದಿನಗಳಲ್ಲಿ ಟಿವಿ ಕೊಡಿಸುವ ಭರವಸೆ ನೀಡಲಾಗಿತ್ತು.

ಅದರಂತೆ ಈ ದಿನ ಯುವತಿಯ ಬೇಡಿಕೆಯಾದ ಟಿವಿಯನ್ನು ನಮ್ಮ ಬಳಗದ ವತಿಯಿಂದ ರಿಪ್ಪನ್‌ಪೇಟೆ ಪಿಎಸ್ಐ ಪ್ರವೀಣ್ ಮೂಲಕ ನೀಡಲಾಯಿತು.ಇದೇ ಸಂಧರ್ಭದಲ್ಲಿ ಪಿಎಸ್‌ಐ ಪ್ರವೀಣ್ ಯುವತಿಯ ಕುಟುಂಬಕ್ಕೆ ವೈಯಕ್ತಿಕ ಆರ್ಥಿಕ ನೆರವಿನ ಸಹಾಯ ಹಸ್ತ ನೀಡಿ ಧೈರ್ಯ ತುಂಬಿದರು.ನಂತರ ಯುವತಿಯ ಕುಟುಂಬದವರೊಂದಿಗೆ ಮಾತನಾಡಿದ ಅವರು ರಿಪ್ಪನ್ ಪೇಟೆ ಪೊಲೀಸ್ ಠಾಣೆಯ ಸಿಬ್ಬಂದಿ ವರ್ಗದ ಸಹಕಾರದೊಂದಿಗೆ ಮುಂದಿನ ದಿನಗಳಲ್ಲಿ ಆ ಬಡ ಕುಟುಂಬಕ್ಕೆ ಇನ್ನೂ ಹೆಚ್ಚಿನ ಆರ್ಥಿಕ ನೆರವು ನೀಡುತ್ತೇವೆ ಎಂದು ಭರವಸೆ ನೀಡಿದರು.

ನಾಡಿನ ರಕ್ಷಣೆಗಾಗಿ ಹಗಲಿರುಳು ಶ್ರಮಿಸುತ್ತಿರುವ ರಕ್ಷಣಾ ಇಲಾಖೆಯಲ್ಲಿ ಅನೇಕ ಹೃದಯವಂತರಿದ್ದಾರೆ. ಜನಸಾಮಾನ್ಯರ ರಕ್ಷಣೆಯ ಜೊತೆಗೆ ಸಮಾಜ ಸೇವೆಯಲ್ಲು ಸಹ ತೊಡಗಿಕೊಂಡಿದ್ದಾರೆ, ಅಂತವರ ಪಟ್ಟಿಯಲ್ಲಿ  ರಿಪ್ಪನ್ ಪೇಟೆ ಪೊಲೀಸ್ ಠಾಣೆಯ ಪಿ ಎಸ್ ಐ  ಪ್ರವೀಣ್ ಎಸ್ ಪಿ  ಮುಂಚೂಣಿಯಲ್ಲಿದ್ದಾರೆ.


ಕಳೆದ ಆರು ತಿಂಗಳ ಹಿಂದೆ  ರಿಪ್ಪನ್ ಪೇಟೆ ಪಟ್ಟಣದ ಆಟೋ ಚಾಲಕರೊಬ್ಬರ ವಿಕಲಚೇತನ ಮಗಳಿಗೆ  ಸ್ವತಹ ಹಾಗೂ  ತಮ್ಮೊಂದಿಗೆ ಕಾರ್ಯನಿರ್ವಹಿಸುತ್ತಿರುವ  ಸಿಬ್ಬಂದಿಗಳ ಸಹಕಾರದಿಂದ  ಆ ಬಡ ಕುಟುಂಬಕ್ಕೆ ಆರ್ಥಿಕ ನೆರವು ನೀಡಿದ್ದರು. ಯಾವುದೇ ಪ್ರಚಾರವಿಲ್ಲದೆ  ಬಡ ಕುಟುಂಬಕ್ಕೆ ಅದರಲ್ಲೂ ವಿಕಲಚೇತನದವರಿಗೆ  ಸಹಾಯ ಹಸ್ತ ನೀಡುತ್ತಿರುವ ರಿಪ್ಪನ್ ಪೇಟೆ ಪೊಲೀಸ್ ಠಾಣೆಯ ಪಿಎಸ್ಐ ಪ್ರವೀಣ್ ಎಸ್ ಪಿ ಹಾಗೂ ಸಿಬ್ಬಂದಿ ವರ್ಗಕ್ಕೆ  ಪೋಸ್ಟ್ ಮ್ಯಾನ್ ನ್ಯೂಸ್ ಸುದ್ದಿ ಬಳಗದ ವತಿಯಿಂದ  ಅಭಿನಂದನೆಗಳು.

ಈ ಸಂಧರ್ಭದಲ್ಲಿ ಪೋಸ್ಟ್ ಮ್ಯಾನ್ ಸುದ್ದಿ ಬಳಗದ ರಫ಼ಿ ರಿಪ್ಪನ್‌ಪೇಟೆ ,ಸಬಾಸ್ಟಿಯನ್ ಮ್ಯಾಥ್ಯೂಸ್ ಸಮಾಜ ಸೇವಕರಾದ ಹಸನಬ್ಬ , ಲೇಖನ ಚಂದ್ರನಾಯ್ಕ್‌ , ಸಾಜೀದಾ ಹನೀಫ಼್ , ಬಳಗದ ಹಿತೈಶಿಗಳಾದ ಸುಧಾಕರ್ ತ ಮ , ಚರಣ್ ಪೊಲೀಸ್ ಸಿಬ್ಬಂದಿಗಳಾದ ಉಮೇಶ್ , ಶಿವುಕುಮಾರ್ ನಾಯ್ಕ್ , ಮಧುಸೂಧನ್ ಇದ್ದರು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ ಅಪಘಾತ – ತಪ್ಪಿದ ಭಾರಿ ಅನಾಹುತ

ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ ಅಪಘಾತ – ತಪ್ಪಿದ ಭಾರಿ ಅನಾಹುತ A school bus lost control…

3 hours ago

ಶಿಕ್ಷಕರ ಗೌರವದ ಹೆಸರಿನಲ್ಲಿ ರಾಜಕೀಯ ಬೇಡ; ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ಶಿಕ್ಷಕರ ಗೌರವದ ಹೆಸರಿನಲ್ಲಿ ರಾಜಕೀಯ ಬೇಡ; ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ Congress leaders in Sagar have hit…

4 hours ago

ಶಿಕ್ಷಣ ಸೇವೆಗೆ ಸಂದ ಪ್ರತಿಷ್ಠಿತ ಗೌರವ; ಅರಸಾಳಿನ ಸುಮಾ ಎಸ್.ಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ

ಶಿಕ್ಷಣ ಸೇವೆಗೆ ಸಂದ ಪ್ರತಿಷ್ಠಿತ ಗೌರವ; ಅರಸಾಳಿನ ಸುಮಾ ಎಸ್.ಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ Summa S.…

8 hours ago

ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ

ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ Power outage in…

12 hours ago

ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ

ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ Retired government employees were specially honoured by senior…

14 hours ago

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಕರೆತಂದರೆ ₹10…

1 day ago