Ripponpete | ವಿದ್ಯಾರ್ಥಿಗಳಲ್ಲಿ ಕಾನೂನಿನ ಅರಿವು ಅತ್ಯಗತ್ಯ – ಪಿಎಸ್‌ಐ ಪ್ರವೀಣ್ ಎಸ್ ಪಿ

Ripponpete | ವಿದ್ಯಾರ್ಥಿಗಳಲ್ಲಿ ಕಾನೂನಿನ ಅರಿವು ಅತ್ಯಗತ್ಯ – ಪಿಎಸ್‌ಐ ಪ್ರವೀಣ್ ಎಸ್ ಪಿ


ರಿಪ್ಪನ್‌ಪೇಟೆ : ವಿದ್ಯಾರ್ಥಿಗಳು ಪೊಲೀಸ್‌ ಕಾನೂನು, ರಸ್ತೆ ಸುರಕ್ಷ ತೆ ಮುಂತಾದ ನಿಯಮಗಳ ಬಗ್ಗೆ ಅರಿವು ಹೊಂದುವ ಅಗತ್ಯವಿದೆ ಎಂದು ಪಿಎಸ್‌ಐ ಪ್ರವೀಣ್ ಎಸ್ ಪಿ ಹೇಳಿದರು.

ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ ಕಾನೂನು ಅರಿವು ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ವಿದ್ಯಾರ್ಥಿಗಳು ಪೊಲೀಸ್‌ ಇಲಾಖೆಯ ಕಾನೂನು, ನಿಯಮಗಳ ಬಗ್ಗೆ ಅರಿವು ಹೊಂದಿ ಪೋಷಕರು ಹಾಗೂ ಸಾರ್ವಜನಿಕರನ್ನು ಜಾಗೃತಿಗೊಳಿಸುವಷ್ಟು ಪ್ರಬುದ್ಧರಾಗಬೇಕು ಎಂದರು.

ಇತ್ತೀಚಿನ ದಿನಗಳಲ್ಲಿ ರಸ್ತೆ ಅಪಘಾತ ಪ್ರಕರಣಗಳು ಹೆಚ್ಚಾಗುತ್ತಿದ್ದು, ಪ್ರತಿಯೊಬ್ಬರು ಪೊಲೀಸ್‌ ಕಾನೂನು, ನಿಯಮಗಳ ಬಗ್ಗೆ ತಿಳಿದುಕೊಳ್ಳುವ ಅಗತ್ಯ ಇದೆ, ರಸ್ತೆ ಸುರಕ್ಷ ತೆಯ ಕಾನೂನು ನಿಯಮಗಳು, ಮೋಟಾರು ಕಾಯಿದೆ ನಿಯಮಗಳ ಬಗ್ಗೆ ಅರಿತುಕೊಂಡರೆ ಅಪರಾಧ ಪ್ರಕರಣಗಳನ್ನು ತಡೆಗಟ್ಟಲು ಸಾಧ್ಯ ಎಂದರು.

ವಿದ್ಯಾರ್ಥಿಗಳು ಸೇರಿದಂತೆ 18 ವರ್ಷದೊಳಗಿನ ಮಕ್ಕಳು ಯಾವುದೇ ವಾಹನವನ್ನು ಓಡಿಸುವುದು ಕಾನೂನಿನ ಪ್ರಕಾರ ಅಪರಾಧವಾಗುತ್ತದೆ, ಪ್ರತಿ ವಾಹನ ಸವಾರರು ಕಡ್ಡಾಯವಾಗಿ ಡಿಎಲ್‌ ಮಾಡಿಸಿಕೊಂಡು ಓಡಿಸಬೇಕು, ದ್ವಿಚಕ್ರ ವಾಹನ ಸೇರಿದಂತೆ ಪ್ರತಿ ವಾಹನಗಳಿಗೆ ಕಡ್ಡಾಯವಾಗಿ ವಾಹನ ವಿಮೆ ಮಾಡಿಸಿಕೊಳ್ಳಬೇಕು. ಅಪಘಾತ ಸಂದರ್ಭದಲ್ಲಿ ಮೃತಪಟ್ಟರೆ ಹಾಗೂ ಗಾಯಗೊಂಡಲ್ಲಿ ವಿಮೆಯ ಮೂಲಕ ಪರಿಹಾರ ದೊರೆಯುತ್ತದೆ. ಈ ನಿಟ್ಟಿನಲ್ಲಿ ವಾಹನಗಳಿಗೆ ಡಿಎಲ್‌ ಮತ್ತು ವಾಹನ ವಿಮೆ ನೋಂದಣಿ ಮಾಡಿಸಿಕೊಳ್ಳುತ್ತಿರಬೇಕು. ದ್ವಿಚಕ್ರ ವಾಹನ ಸವಾರ ಮತ್ತು ಹಿಂಬದಿ ಸವಾರರಿಬ್ಬರೂ ಕಡ್ಡಾಯವಾಗಿ ಹೆಲ್ಮೆಂಟ್‌ ಧರಿಸಬೇಕು ಎಂದರು.

ಅಪ್ರಾಪ್ತ ಹೆಣ್ಣು ಮಕ್ಕಳ ಮೇಲಾಗುತ್ತಿರುವ ಲೈಂಗಿಕ ದೌರ್ಜನ್ಯ ಪ್ರಕರಣಗಳನ್ನು ತಡೆಗಟ್ಟಲು ಪೊಕ್ಸೊ ಕಾಯಿದೆ ಜಾರಿಗೊಳಿಸಿದೆ. ಈ ಹಿನ್ನೆಲೆಯಲ್ಲಿ ಮಕ್ಕಳ ರಕ್ಷ ಣೆ, ಮತ್ತು ಪೋಷಣೆ ಮಾಡುವ ನಿಟ್ಟಿನಲ್ಲಿ ಪೋಷಕರು, ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡುವಂತೆ ಮನವಿ ಮಾಡಿದರು.

ಇದೇ ಸಂಧರ್ಭದಲ್ಲಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಪೊಲೀಸ್ ಇಲಾಖೆಯಿಂದ “ಅಪರಾಧ ತಡೆಯಲ್ಲಿ ಯುವ ಸಮುದಾಯದ ಪಾತ್ರ” ಎಂಬ ವಿಷಯದಡಿಯಲ್ಲಿ ಆಯೋಜಿಸಿದ್ದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿದರು.

ಕಾಲೇಜಿನ ಪ್ರಾಂಶುಪಾಲರಾದ ಮಂಜುನಾಥ್ ಅಧ್ಯಕ್ಷತೆ ವಹಿಸಿದ್ದರು.

ಈ ಸಂಧರ್ಭದಲ್ಲಿ ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಜಿ ಆರ್ ಗೋಪಾಲಕೃಷ್ಣ ,ಸದಸ್ಯರಾದ ರಫ಼ಿ ರಿಪ್ಪನ್‌ಪೇಟೆ , ಲೇಖನ ಚಂದ್ರನಾಯ್ಕ್ , ಬೋರಪ್ಪ , ಷಣ್ಮುಖ , ಪೊಲೀಸ್ ಸಿಬ್ಬಂದಿಗಳಾದ ಉಮೇಶ್ ಇದ್ದರು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಡವೆ ಬೇಟೆ ಮಾಡಿ ಮಾಂಸ ಕತ್ತರಿಸುತ್ತಿದ್ದಾಗಲೇ ದಾಳಿ! ಮೂವರ ಬಂಧನ | 70 ಕೆ.ಜಿ. ಮಾಂಸ , ಬಂದೂಕು ಜಪ್ತಿ

ಕಡವೆ ಬೇಟೆ ಮಾಡಿ ಮಾಂಸ ಕತ್ತರಿಸುತ್ತಿದ್ದಾಗಲೇ ದಾಳಿ! ಮೂವರ ಬಂಧನ | 70 ಕೆ.ಜಿ. ಮಾಂಸ , ಬಂದೂಕು ಜಪ್ತಿ…

6 hours ago

ಬೇಕರಿ ಉತ್ಪನ್ನಗಳ ತಯಾರಿಕೆಯಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ

ಬೇಕರಿ ಉತ್ಪನ್ನಗಳ ತಯಾರಿಕೆಯಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ One-month skill development training on bakery product preparation…

23 hours ago

ತೀರ್ಥಹಳ್ಳಿ ಪೊಲೀಸ್ ಠಾಣೆಯ ಗಣಪತಿ ವಿಸರ್ಜನೆ ; ಚಂಡೆ ಸದ್ದಿಗೆ ಡಿವೈಎಸ್‌ಪಿ ಭಾನುಪ್ರಕಾಶ್, ಸಿಪಿಐ ಇಮ್ರಾನ್ ಹೆಜ್ಜೆ

ತೀರ್ಥಹಳ್ಳಿ ಪೊಲೀಸ್ ಠಾಣೆಯ ಗಣಪತಿ ವಿಸರ್ಜನೆ ; ಚಂಡೆ ಸದ್ದಿಗೆ ಡಿವೈಎಸ್‌ಪಿ ಭಾನುಪ್ರಕಾಶ್, ಸಿಪಿಐ ಇಮ್ರಾನ್ ಹೆಜ್ಜೆ Thirthahalli police…

1 day ago

ಕೋಡೂರು ಗ್ರಾಮದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ : ಲಕ್ಷಾಂತರ ರೂ. ನಷ್ಟ

ಕೋಡೂರು ಗ್ರಾಮದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ : ಲಕ್ಷಾಂತರ ರೂ. ನಷ್ಟ House fire reported at Keelambi…

1 day ago

ಶಾಸಕರ ಜೊತೆ ಟ್ರಾಫಿಕ್ ಪೊಲೀಸರ ಡ್ಯಾನ್ಸ್; ವಿಡಿಯೋ ವೈರಲ್, ಇಬ್ಬರ ವರ್ಗಾವಣೆ

ಶಾಸಕರ ಜೊತೆ ಟ್ರಾಫಿಕ್ ಪೊಲೀಸರ ಡ್ಯಾನ್ಸ್; ವಿಡಿಯೋ ವೈರಲ್, ಇಬ್ಬರ ವರ್ಗಾವಣೆ Two traffic police personnel in Shivamogga…

1 day ago

ಬಾವಿಗೆ ಬಿದ್ದು ನಿವೃತ್ತ ಕುಲಪತಿ ಪ್ರೊ. ಎಂ.ಕೆ. ನಾಯ್ಕ್ ಸಾವು

ಬಾವಿಗೆ ಬಿದ್ದು ನಿವೃತ್ತ ಕುಲಪತಿ ಪ್ರೊ. ಎಂ.ಕೆ. ನಾಯ್ಕ್ ಸಾವು Retired Vice Chancellor Prof. M.K. Naik, 63,…

1 day ago