Ripponpete | ಸರ್ಕಾರಿ ಶಾಲೆಗಳಲ್ಲಿ ಹಳೆಯ ವಿದ್ಯಾರ್ಥಿಗಳ ಸಂಘ ರಚಿಸಿ ಆ ಮೂಲಕ ಶಾಲೆಗಳ ಶ್ರೇಯೋಭಿವೃದ್ದಿಗೆ ಶ್ರಮಿಸಬೇಕು – ಪಿಎಸ್‌ಐ ಪ್ರವೀಣ್ ಎಸ್ ಪಿ

ರಿಪ್ಪನ್‌ಪೇಟೆ : ಸರ್ಕಾರಿ ಕನ್ನಡ ಶಾಲೆಗಳಲ್ಲಿ ಹಳೆ ವಿದ್ಯಾರ್ಥಿಗಳ ಸಂಘವನ್ನು ರಚಿಸಿ ಆ ಮೂಲಕ ಶಾಲೆಗಳ ಶ್ರೇಯೋಭಿವೃದ್ಧಿಗೆ ಶ್ರಮಿಸಬೇಕು ಎಂದು ರಿಪ್ಪನ್ ಪೇಟೆ ಪಿಎಸ್ಐ ಪ್ರವೀಣ್ ಎಸ್ ಪಿ ಕರೆ ನೀಡಿದರು.


ರಿಪ್ಪನ್‌ಪೇಟೆ ಪಟ್ಟಣದ ಹಳೇ ಸಂತೆ ಮಾರುಕಟ್ಟೆ ರಸ್ತೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪೋಸ್ಟ್ ಮ್ಯಾನ್ ಸುದ್ದಿ ಬಳಗ ಆಯೋಜಿಸಿದ್ದ “ಸರ್ಕಾರಿ ಶಾಲೆ ಅಭಿಮಾನ – ಸುಣ್ಣ ಬಣ್ಣ  ಅಭಿಯಾನ” ಕ್ಕೆ ಚಾಲನೆ ನೀಡಿ, ಶ್ರಮದಾನ ನೆರವೇರಿಸಿ ಮಾತನಾಡಿದ ಅವರು ಸರ್ಕಾರಿ ಶಾಲೆಗಳಲ್ಲಿ ಮೂಲ ಸೌಕರ್ಯವಿಲ್ಲದೇ ಕೊರಗುತಿದ್ದು ಈ ಹಿನ್ನಲೆಯಲ್ಲಿ ಸರ್ಕಾರಿ ಶಾಲೆಗಳಲ್ಲಿ ವ್ಯಾಸಾಂಗ ಮಾಡಿ ಜೀವನ ರೂಪಿಸಿಕೊಂಡಿರುವ ಹಳೇ ವಿದ್ಯಾರ್ಥಿಗಳನ್ನು ಸಂಘಟಿಸುವ‌ ಮೂಲಕ ಶಾಲೆಗಳನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯಬಹುದು ಎಂದು ಹೇಳಿದರು.


ಗ್ರಾಪಂ ಅಧ್ಯಕ್ಷೆ ಧನಲಕ್ಷ್ಮಿ ಗಂಗಾಧರ್ ಮಾತನಾಡಿ ಸರ್ಕಾರಿ ಶಾಲೆಗಳ ಅಭಿವೃದ್ಧಿಪಡಿಸುವಲ್ಲಿ ಪೋಸ್ಟ್ ಮ್ಯಾನ್ ಸುದ್ದಿ ಬಳಗ ಆಯೋಜಿಸಿರುವ ಸುಣ್ಣಬಣ್ಣ ಅಭಿಯಾನ ಇನ್ನುಳಿದ ಸಂಘಟನೆಗಳಿಗೆ ಪ್ರೇರಣೆಯಾಗಿದೆ.ರಿಪ್ಪನ್‌ಪೇಟೆ ಪಂಚಾಯತ್ ವ್ಯಾಪ್ತಿಯ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಪಂಚಾಯತ್ ವತಿಯಿಂದ ಸಾಕಷ್ಟು ಅನುದಾನವನ್ನು ನೀಡಲಾಗಿದ್ದು ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ರೀತಿಯಲ್ಲಿ ಸ್ಪಂದಿಸುತ್ತೇವೆ ಎಂದರು.

ಜೆಡಿಎಸ್ ರಾಜ್ಯ ಕಾರ್ಯದರ್ಶಿ ಅರ್ ಎ ಚಾಬುಸಾಬ್ ಮಾತನಾಡಿ
ಸುಮಾರು 70 ವರ್ಷಗಳಷ್ಟು ಇತಿಹಾಸವಿರು ಬರುವೆ ಶಾಲೆಯು ಹಲವಾರು ವರ್ಷಗಳಿಂದ ಸುಣ್ಣಬಣ್ಣ ಕಾಣದೇ ಮಂಕಾಗಿತ್ತು, ಪೋಸ್ಟ್ ಮ್ಯಾನ್ ನ್ಯೂಸ್ ಬಳಗ ಸರಕಾರಿ ಕನ್ನಡ ಶಾಲೆಗಳಿಗೆ ಕಾಯಕಲ್ಪ ನೀಡುವ ಅಭಿಯಾನದಡಿಯಲ್ಲಿ ಸರ್ಕಾರಿ ಶಾಲೆಯಲ್ಲಿ ಸುಣ್ಣ ಬಣ್ಣ ಅಭಿಯಾನ ಪ್ರಶಂಸನೀಯ ಹಾಗೂ ಈ ಅಭಿಯಾನಕ್ಕೆ ಕೈ ಜೋಡಿಸಿರುವ ಪಟ್ಟಣದ ಪೊಲೀಸ್ ಠಾಣೆಯ ಪಿಎಸ್‌ಐ ಹಾಗೂ ಸಿಬ್ಬಂದಿಗಳು ಶ್ರಮದಾನ ನೆರವೇರಿಸುವ ಮೂಲಕ ಅರ್ಥಪೂರ್ಣವಾಗಿ ಗಣರಾಜ್ಯೋತ್ಸ ಹಬ್ಬವನ್ನು ಆಚರಿಸಿದ್ದಾರೆ ಇವರ ಕಾರ್ಯವೈಖರಿ ಎಲ್ಲಾರಿಗೂ ಮಾದರಿಯಾಗಿದೆ ಎಂದರು.

ಬೆಳಿಗ್ಗೆಯಿಂದಲೇ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯ ಪಿಎಸ್‌ಐ ಹಾಗೂ ಸಿಬ್ಬಂದಿಗಳು ಶಾಲೆಯ ಸುತ್ತಮುತ್ತಲಿನ ಪರಿಸರ ಸ್ವಚ್ಚಗೊಳಿಸಿ ಹಾಗೂ ಪಾಚಿಗಟ್ಟಿದ್ದ ಕಾಂಪೌಡ್ ನ್ನು ಶುದ್ದಗೊಳಿಸಿ ಶ್ರಮದಾನ ನೆರವೇರಿಸಿ ಪೋಸ್ಟ್ ಮ್ಯಾನ್ ಸುದ್ದಿ ಬಳಗಕ್ಕೆ ಠಾಣೆಯ ವತಿಯಿಂದ ಆರ್ಥಿಕ ನೆರವು ನೀಡಿದರು.


ಈ ಸಂಧರ್ಭದಲ್ಲಿ ಗ್ರಾಪಂ ಉಪಾಧ್ಯಕ್ಷ ಸುಧೀಂದ್ರ ಪೂಜಾರಿ, ಪೋಸ್ಟ್ ಮ್ಯಾನ್ ಬಳಗದ ರಫ಼ಿ ರಿಪ್ಪನ್‌ಪೇಟೆ ,ಸಬಾಸ್ಟಿಯನ್ ತಾಲೂಕ್ ಕಸಾಪ ಅಧ್ಯಕ್ಷ ತ ಮ ನರಸಿಂಹ ,ಪೊಲೀಸ್ ಎಎಸ್ ಐ ಮಂಜಪ್ಪ , ಜ್ಯೋತಿ ಹಾಗೂ ಸಿಬ್ಬಂದಿಗಳು ಗ್ರಾಪಂ ಸದಸ್ಯರಾದ ಅಶ್ವಿನಿ ರವಿಶಂಕರ್ , ಮಂಜುಳಾ ಕೇತಾರ್ಜಿರಾವ್ , ದಾನಮ್ಮ , ದೀಪಾ ಸುಧೀರ್ , ಪ್ರಕಾಶ್ ಪಾಲೇಕರ್ , ಪೋಸ್ಟ್ ಮ್ಯಾನ್ ಬಳಗದ ಹಸನಬ್ಬ , ಲೇಖನ ಚಂದ್ರನಾಯ್ಕ್ ,ಆರ್ ಡಿ ಶೀಲಾ, ರಾಘವೇಂದ್ರ ಇಂಜಿನಿಯರ್, ಶ್ರೀಧರ್ ,SDMC ಅಧ್ಯಕ್ಷ ರಾಘವೇಂದ್ರ ಪ್ರಭಾರಿ ಮುಖ್ಯ ಶಿಕ್ಷಕ ಉಮೇಶ್ ಎಸ್ ಇದ್ದರು.

ಶಿಕ್ಷಕಿ ಅಂಬಿಕಾ ಪ್ರಾರ್ಥಿಸಿದರು , ಶಿಕ್ಷಕಿ ಮೇಘನ ನಿರೂಪಿಸಿದರು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ ಅಪಘಾತ – ತಪ್ಪಿದ ಭಾರಿ ಅನಾಹುತ

ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ ಅಪಘಾತ – ತಪ್ಪಿದ ಭಾರಿ ಅನಾಹುತ A school bus lost control…

2 hours ago

ಶಿಕ್ಷಕರ ಗೌರವದ ಹೆಸರಿನಲ್ಲಿ ರಾಜಕೀಯ ಬೇಡ; ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ಶಿಕ್ಷಕರ ಗೌರವದ ಹೆಸರಿನಲ್ಲಿ ರಾಜಕೀಯ ಬೇಡ; ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ Congress leaders in Sagar have hit…

3 hours ago

ಶಿಕ್ಷಣ ಸೇವೆಗೆ ಸಂದ ಪ್ರತಿಷ್ಠಿತ ಗೌರವ; ಅರಸಾಳಿನ ಸುಮಾ ಎಸ್.ಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ

ಶಿಕ್ಷಣ ಸೇವೆಗೆ ಸಂದ ಪ್ರತಿಷ್ಠಿತ ಗೌರವ; ಅರಸಾಳಿನ ಸುಮಾ ಎಸ್.ಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ Summa S.…

7 hours ago

ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ

ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ Power outage in…

11 hours ago

ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ

ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ Retired government employees were specially honoured by senior…

13 hours ago

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಕರೆತಂದರೆ ₹10…

1 day ago