SAGARA | ನಕಲಿ ಚೆಕ್ ಮೂಲಕ ಕಾಳುಮೆಣಸು ವ್ಯವಹಾರಕ್ಕೆ ಮುಂದಾದ‌ ಹೈಟೆಕ್ ಕಳ್ಳರನ್ನು ಬಂಧಿಸಿದ ಪೊಲೀಸ್

SAGARA | ನಕಲಿ ಚೆಕ್ ಮೂಲಕ ಕಾಳುಮೆಣಸು ವ್ಯವಹಾರಕ್ಕೆ ಮುಂದಾದ‌ ಹೈಟೆಕ್ ಕಳ್ಳರನ್ನು ಬಂಧಿಸಿದ ಪೊಲೀಸ್ 

ಸಾಗರ:  ರೈತ ಉತ್ಪಾದಕರ ಸೌಹಾರ್ದ ಸಹಕಾರಿ ಸಂಘದಿಂದ ನಕಲಿ ಚೆಕ್ ಮೂಲಕ 4.25 ಕ್ವಿಂಟಾಲ್ ಕಾಳು ಮೆಣಸು ಖರೀದಿಸಿ, ಬೇರೆಯವರಿಗೆ ಮಾರಾಟ ಮಾಡಲು ಮುಂದಾಗಿದ್ದ ವಿದ್ಯಾವಂತ ಕಳ್ಳರನ್ನು ಪೇಟೆ ಠಾಣೆ ಪೊಲೀಸರು ಮಾಲು ಸಹಿತ ಬಂಧಿಸಿದ್ದಾರೆ.

ಪ್ರಕರಣದ ಆರೋಪಿಗಳಾದ ಅಕ್ಷಯ್, ಹರ್ಷಿತ್, ಕುಮಾರ್,  ಅಭಿನಂದನ ರನ್ನು ಬಂಧಿಸಿ ಹೆಡೆಮುರಿ ಕಟ್ಟಿದ್ದಾರೆ. ಬಂಧಿತ ಆರೋಪಿಗಳೆಲ್ಲರೂ ಉನ್ನತ ವ್ಯಾಸಂಗ ಮಾಡಿದವರಾಗಿದ್ದಾರೆ.

ಆರೋಪಿತರಿಂದ 2.76 ಲಕ್ಷ ರೂ. ಮೌಲ್ಯದ 4.25 ಕ್ವಿಂಟಾಲ್ ಕಾಳು ಮೆಣಸನ್ನು ವಶಕ್ಕೆ ಪಡೆಯಲಾಗಿದೆ. ಮತ್ತೊಬ್ಬ ಆರೋಪಿ ವಿಕ್ಕಿ ಎಂಬಾತ ಪರಾರಿಯಾಗಿದ್ದು ಪೋಲೀಸರು ಶೋಧಕಾರ್ಯ ನಡೆಸಿದ್ದಾರೆ.

ಎಸ್ಪಿ ಮಿಥುನ್ ಕುಮಾರ್ ಆದೇಶದಂತೆ, ಡಿವೈಎಸ್ಪಿ ಗೋಪಾಲಕೃಷ್ಣ ನಾಯಕ್ ಮಾರ್ಗದರ್ಶನದಲ್ಲಿ ಇನ್ಸ್ ಪೆಕ್ಟರ್ ಸೀತಾರಾಮ ಹಾಗೂ ಪಿಎಸ್‍ಐ ನಾಗರಾಜ ನೇತೃತ್ವದಲ್ಲಿ ಸಿಬ್ಬಂದಿಗಳಾದ ರತ್ನಾಕರ, ಶ್ರೀನಿವಾಸ, ಮೆಹಬೂಬ್, ವಿಕಾಸ್, ಕೃಷ್ಣಮೂರ್ತಿ, ವಿಶ್ವನಾಥ್ ಅವರ ತಂಡ ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದೆ.

Leave a Reply

Your email address will not be published. Required fields are marked *