SAGARA | ನಕಲಿ ಚೆಕ್ ಮೂಲಕ ಕಾಳುಮೆಣಸು ವ್ಯವಹಾರಕ್ಕೆ ಮುಂದಾದ ಹೈಟೆಕ್ ಕಳ್ಳರನ್ನು ಬಂಧಿಸಿದ ಪೊಲೀಸ್
ಸಾಗರ: ರೈತ ಉತ್ಪಾದಕರ ಸೌಹಾರ್ದ ಸಹಕಾರಿ ಸಂಘದಿಂದ ನಕಲಿ ಚೆಕ್ ಮೂಲಕ 4.25 ಕ್ವಿಂಟಾಲ್ ಕಾಳು ಮೆಣಸು ಖರೀದಿಸಿ, ಬೇರೆಯವರಿಗೆ ಮಾರಾಟ ಮಾಡಲು ಮುಂದಾಗಿದ್ದ ವಿದ್ಯಾವಂತ ಕಳ್ಳರನ್ನು ಪೇಟೆ ಠಾಣೆ ಪೊಲೀಸರು ಮಾಲು ಸಹಿತ ಬಂಧಿಸಿದ್ದಾರೆ.
ಪ್ರಕರಣದ ಆರೋಪಿಗಳಾದ ಅಕ್ಷಯ್, ಹರ್ಷಿತ್, ಕುಮಾರ್, ಅಭಿನಂದನ ರನ್ನು ಬಂಧಿಸಿ ಹೆಡೆಮುರಿ ಕಟ್ಟಿದ್ದಾರೆ. ಬಂಧಿತ ಆರೋಪಿಗಳೆಲ್ಲರೂ ಉನ್ನತ ವ್ಯಾಸಂಗ ಮಾಡಿದವರಾಗಿದ್ದಾರೆ.
ಆರೋಪಿತರಿಂದ 2.76 ಲಕ್ಷ ರೂ. ಮೌಲ್ಯದ 4.25 ಕ್ವಿಂಟಾಲ್ ಕಾಳು ಮೆಣಸನ್ನು ವಶಕ್ಕೆ ಪಡೆಯಲಾಗಿದೆ. ಮತ್ತೊಬ್ಬ ಆರೋಪಿ ವಿಕ್ಕಿ ಎಂಬಾತ ಪರಾರಿಯಾಗಿದ್ದು ಪೋಲೀಸರು ಶೋಧಕಾರ್ಯ ನಡೆಸಿದ್ದಾರೆ.
ಎಸ್ಪಿ ಮಿಥುನ್ ಕುಮಾರ್ ಆದೇಶದಂತೆ, ಡಿವೈಎಸ್ಪಿ ಗೋಪಾಲಕೃಷ್ಣ ನಾಯಕ್ ಮಾರ್ಗದರ್ಶನದಲ್ಲಿ ಇನ್ಸ್ ಪೆಕ್ಟರ್ ಸೀತಾರಾಮ ಹಾಗೂ ಪಿಎಸ್ಐ ನಾಗರಾಜ ನೇತೃತ್ವದಲ್ಲಿ ಸಿಬ್ಬಂದಿಗಳಾದ ರತ್ನಾಕರ, ಶ್ರೀನಿವಾಸ, ಮೆಹಬೂಬ್, ವಿಕಾಸ್, ಕೃಷ್ಣಮೂರ್ತಿ, ವಿಶ್ವನಾಥ್ ಅವರ ತಂಡ ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್