SAGARA | ಶ್ವಾನ ಪ್ರದರ್ಶನ ವೇಳೆ ಪ್ರೇಕ್ಷಕರ ಮೇಲೆ ನಾಯಿ ದಾಳಿ : ಓರ್ವ ವ್ಯಕ್ತಿಗೆ ಗಂಭೀರ ಗಾಯ
ಶ್ವಾನ ಪ್ರದರ್ಶನದ ವೇಳೆಯಲ್ಲಿ ಪ್ರೇಕ್ಷಕದ ಮೇಲೆ ರಾಟ್ ವೀಲರ್ ನಾಯಿಯು ಮನಸೋ ಇಚ್ಛೆ ದಾಳಿ ನಡೆಸಿರುವ ಘಟನೆ ನಡೆದಿದೆ. ಈ ವೇಳೆ ಗಂಭೀರವಾಗಿ ಗಾಯ ಗೊಂಡಿರುವ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಶ್ವಾನ ಪ್ರದರ್ಶನ ವೇಳೆ ಪ್ರೇಕ್ಷಕರ ಮೇಲೆ ನಾಯಿ ದಾಳಿ ನಡೆಸಿದ್ದು, ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದಲ್ಲಿ ನಡೆದ ಘಟನೆ ಯಾಗಿದೆ. ರಾಟ್ ವಿಲರ್ ಜಾತಿಯ ನಾಯಿಯಿಂದ ಪ್ರೇಕ್ಷಕ ಶರತ್ ಎನ್ನುವವರ ಮೇಲೆ ಮನಸೊ ಇಚ್ಛೆ ದಾಳಿ ಮಾಡಿದೆ.
ರಾಟ್ ವೀಲರ್ ನಾಯಿ ಪ್ರದರ್ಶನಕ್ಕೆ ಬಂದ ಪ್ರೇಕ್ಷಕ ಶರತ್ ಗೆ ಕೂಡ ಗಂಭೀರವಾದಂತಹ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಯಲ್ಲಿ ಗಾಯಾಳು ಶರತ್ತಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಇದೆ ವೇಳೆ ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲು ಆಯೋಜಕರು ಹಿಂದೇಟು ಹಾಕಿದಾಗ ಶರತ್ ಆಯೋಜಕರ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
ಘಟನೆ ನಡೆದ ನಂತರ ಆಯೋಜಕರ ವಿರುದ್ಧ ಗಾಯಾಳು ಶರತ್ ಈ ಸಂದರ್ಭದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. 11 ಬಾರಿ ದಾಳಿ ನಡೆಸಿದ ನಾಯಿಯನ್ನು ಶ್ವಾನ ಪ್ರದರ್ಶನಕ್ಕೆ ಕರೆದುಕೊಂಡು ಬಂದಿದ್ದು ದೊಡ್ಡ ತಪ್ಪಾಗಿದ್ದು ನನ್ನ ಮೇಲೆ ನಾಯಿ ದಾಳಿ ಮಾಡಿದ ನಂತರ ಸ್ಥಳದಲ್ಲಿ ಯಾವುದೇ ರೀತಿಯಾದ ವೈದ್ಯಕೀಯ ವ್ಯವಸ್ಥೆ ಹಾಗೂ ಅಂಬುಲೆನ್ಸ್ ಕೂಡ ಇರಲಿಲ್ಲ. ಹೀಗಾಗಿ ನಾನು ಆಸ್ಪತ್ರೆಗೆ ದಾಖಲಾಗಲು ತಡವಾಯಿತು ಎಂದು ಆಯೋಜಕರು ವಿರುದ್ಧ ಗಾಯಾಳು ಶರತ್ ಆಕ್ರೋಶ ಹೊರಹಾಕಿದ್ದಾರೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್