Headlines

Shivamogga | ಹಿಂದೂ ಜಾಗರಣ ವೇದಿಕೆ ಸಹ ಸಂಚಾಲಕನ ಮೇಲೆ ಅಪರಿಚಿತರಿಂದ ಹಲ್ಲೆ

Shivamogga | ಹಿಂದೂ ಜಾಗರಣ ವೇದಿಕೆ ಸಹ ಸಂಚಾಲಕನ ಮೇಲೆ ಅಪರಿಚಿತರಿಂದ ಹಲ್ಲೆ


ಹಿಂದೂ ಜಾಗರಣಾ ವೇದಿಕೆ ಸಹ ಸಂಚಾಲಕನ ಮೇಲೆ ಅಪರಿಚಿತ ಯುವಕರು ಹಲ್ಲೆ ನಡೆಸಿದ್ದಾರೆ. ಶಿವಮೊಗ್ಗ(Shivamogga) ನಗರದ ತೀರ್ಥಹಳ್ಳಿ ರಸ್ತೆಯಲ್ಲಿ ಘಟನೆ ನಡೆದಿದೆ.

ಹಿಂದೂ ಜಾಗರಣಾ ವೇದಿಕೆ ಸಹ ಸಂಚಾಲಕ ಶಿವಕುಮಾರ್‌ ಅವರ ಕಾರು ತಡೆದ ನಾಲ್ವರು ಅಪರಿಚಿತ ಯುವಕರು ನಿಂದಿಸಿ, ಹಲ್ಲೆ ಮಾಡಿದ್ದಾರೆ.

ಸ್ಕೂಟಿ ಹಾಗೂ ಬೈಕ್‌ನಲ್ಲಿ ಬಂದ ನಾಲ್ವರು ಅಪರಿಚಿತ ಯುವಕರು ಈ ಕೃತ್ಯ ವೆಸಗಿ ಎಸ್ಕೇಪ್(escape) ಆಗಿದ್ದಾರೆ. ಹಲ್ಲೆಗೊಳಗಾದ ಶಿವಕುಮಾರ್‌ ಅವರನ್ನ ಮೆಗ್ಗಾನ್‌ ಆಸ್ಪತ್ರೆಗೆ(hospital) ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಶಿವಕುಮಾರ್ ಏರ್‌ಪೋರ್ಟ್(airport) ‌ನಲ್ಲಿ ಟ್ಯಾಕ್ಸಿ ಡ್ರೈವಿಂಗ್ ಕೆಲಸ ಮಾಡುತ್ತಿದ್ದಾರೆ. ಸರ್ಕಾರಿ ಬಸ್ ನಿಲ್ದಾಣಕ್ಕೆ ಪ್ಯಾಸೆಂಜರ್ ಡ್ರಾಪ್ ಮಾಡಿ ಹೋಗುವಾಗ ಹಲ್ಲೆ ಮಾಡಿದ್ದಾರೆ. ಈ ಬಗ್ಗೆ ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿನ್ನ ಗಾಡಿ ನಂಬರ್ ನೋಡಿಕೊಂಡಿದ್ದೇವೆ, ಜೀವ ಸಹಿತ ಬಿಡಲ್ಲ ಎಂದು ಬೆದರಿಕೆ ಸಹ ಹಾಕಲಾಗಿದೆ. ನಡುರಸ್ತೆಯಲ್ಲಿ ಹಲ್ಲೆ ಮಾಡುತ್ತಿರುವುದನ್ನು ಸ್ಥಳೀಯರು ತಡೆದಿದ್ದಾರೆ. ನಂತರ ಗಾಯಗೊಂಡಿದ್ದ ಶಿವಕುಮಾರ್ ಅವರನ್ನು ಸ್ಥಳೀಯರೇ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದಾರೆ.

About The Author

Leave a Reply

Your email address will not be published. Required fields are marked *

Exit mobile version