ಜಗದೀಶ್ ಶೆಟ್ಟರ್ ಕಾಂಗ್ರೆಸ್ ಪಕ್ಷವನ್ನು ತ್ಯಜಿಸಿ ಬಿಜೆಪಿಗೆ ಬಂದಿರುವುದು ಸ್ವಾಗತರ್ಹ – ಆರಗ ಜ್ಞಾನೇಂದ್ರ
ತೀರ್ಥಹಳ್ಳಿ : ಕಾಂಗ್ರೆಸ್ ಪಕ್ಷವನ್ನು ತ್ಯಜಿಸಿ ಬಿಜೆಪಿಗೆ ಬಂದಿರುವುದನ್ನು ನಾನು ಹೃತ್ಪೂರ್ವಕವಾಗಿ ಸ್ವಾಗತ ಮಾಡುತ್ತೇನೆ. ಜಗದೀಶ್ ಶೆಟ್ಟರ್ ಎಂಬುವವರು ಕಾಂಗ್ರೆಸ್ ಸಂಸ್ಕೃತಿಯನ್ನು ಹೊಂದಾಣಿಕೆ ಮಾಡಿಕೊಳ್ಳಲು ಸಾಧ್ಯವಿಲ್ಲ ಎಂದು ಮಾಜಿ ಸಚಿವ, ಶಾಸಕ ಆರಗ ಜ್ಞಾನೇಂದ್ರ ಹೇಳಿದರು.
ಗುರುವಾರ ಪಟ್ಟಣದಲ್ಲಿ ಮಾತನಾಡಿ ಜಗದೀಶ್ ಶೆಟ್ಟರ್ ಹುಟ್ಟಿನಿಂದ ಬಿಜೆಪಿ ಹಾಗೂ ಆರ್ ಎಸ್ ಎಸ್ ನಲ್ಲಿ ಬೆಳೆದು ಬಂದವರು, ಎಲ್ಲಾ ಸ್ಥಾನಮಾನಗಳು ಗೌರವಗಳು ಅವರಿಗೆ ಸಿಕ್ಕಿತ್ತು.ಕಳೆದ ಬಾರಿ ಚುನಾವಣೆಯಲ್ಲಿ ಸ್ವಲ್ಪ ವ್ಯತ್ಯಾಸವಾಗಿ ಪಕ್ಷವನ್ನು ತ್ಯಜಿಸುವ ಸಂದರ್ಭ ಬಂದಿತ್ತು.ಇವತ್ತು ಪುನಃ ಬಿಜೆಪಿ ಪಕ್ಷಕ್ಕೆ ಬಂದಿದ್ದಾರೆ. ಇದರಿಂದ ನಮ್ಮ ಸಂಘಟನೆಗೆ ಪಕ್ಷಕ್ಕೆ ಬಲ ಬರುತ್ತದೆ ಎಂದರು.
ಬಿ ಎಸ್ ಯಡಿಯೂರಪ್ಪ ಹಾಗೂ ಬಿ ವೈ ವಿಜಯೇಂದ್ರ ಅವರ ನೇತೃತ್ವದಲ್ಲಿ ಪಕ್ಷಕ್ಕೆ ಸೇರಿದ್ದಾರೆ.ಮೊದಲಿನಂತೆ ಪಕ್ಷಕ್ಕಾಗಿ ಕೆಲಸ ಮಾಡುತ್ತಾರೆ ಹಾಗೂ ಶಕ್ತಿ ತುಂಬುತ್ತಾರೆ ಅವರಿಗೆ ನಾನು ಅತ್ಯಂತ ಸಂತೋಷದಿಂದ ಸ್ವಾಗತಿಸುತ್ತೇನೆ ಎಂದರು.