w
Headlines
Home » ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ – ಸಾವಿನ ಬಗ್ಗೆ ಕುಟುಂಬಸ್ಥರ ಅನುಮಾನ | Crime News

ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ – ಸಾವಿನ ಬಗ್ಗೆ ಕುಟುಂಬಸ್ಥರ ಅನುಮಾನ | Crime News

ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ – ಸಾವಿನ ಬಗ್ಗೆ ಕುಟುಂಬಸ್ಥರ ಅನುಮಾನ

ಶಿವಮೊಗ್ಗದ ಮಲವಗೊಪ್ಪದ ಮನೆಯೊಂದರಲ್ಲಿ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಮನೆಯಲ್ಲಿ ಫ್ಯಾನ್ ಗೆ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಯುವಕನ ಶವ ಪತ್ತೆಯಾಗಿದ್ದು ಈ ಸಾವಿನ ಬಗ್ಗೆ ಆತನ ಕುಟುಂಬಸ್ಥರು ಅನುಮಾನ  ವ್ಯಕ್ತಪಡಿಸಿ ತುಂಗ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ.

ಜಿತನ್ ಕುಮಾರ್(28) ಮೃತಪಟ್ಟ ದುರ್ಧೈವಿಯಾಗಿದ್ದಾರೆ.

ಎರಡು ವರೆವರ್ಷದ ಹಿಂದೆ ಗಾಡಿಕೊಪ್ಪದ ಮಂಜುಳ ಎಂಬುವವರನ್ನು ಪ್ರೀತಿಸಿ ಮದುವೆಯಾಗಿದ್ದ ಜಿತನ್ ಕುಮಾರ್ (28) ಮಲವಗೊಪ್ಪದಲ್ಲಿ ನೆಲಸಿದ್ದರು. ನಿನ್ನೆ ಮನೆಯಲ್ಲಿ ಫ್ಯಾನ್ ನ ಹುಕ್ ಗೆ ಸೀರೆ ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಪತ್ನಿ ಮತ್ತು ಆಕೆಯ ಕುಟುಂಬದ ಕಡೆಯವರು ಮಗ ಜಿತನ್ ಗೆ ಮಾನಸಿಕ ಕಿರುಕುಳ ನೀಡುತ್ತಿದ್ದರು. ಮಾನಸಿಕ ಕಿರುಕುಳದಿಂದ ಬೇಸತ್ತು ನೇಣಿಗೆ ಶರಣಾಗಿದ್ದಾರೆ ಎಂಬುದು ಮೃತನ ಕುಟುಂಬಸ್ಥರ ಆರೋಪವಾಗಿದೆ. 

ಜಿತನ್ ಕುಮಾರ್ ಪತ್ನಿ, ಪತ್ನಿಯ ತಾಯಿ ಮತ್ತು ಅವರ ಅಳಿಯನ ಕಿರುಕುಳದಿಂದ ಯುವಕ ಮೃತಪಟ್ಟಿದ್ದಾರೆ ಎಂಬುದು ಆರೋಪವಾಗಿದೆ.

ಶಿವಮೊಗ್ಗದ ತುಂಗ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.ಮುಂದಿನ ತನಿಖೆ ಕೈಗೊಂಡಿದ್ದಾರೆ.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.