ಈಡಿಗ ಸಮಾಜಕ್ಕೆ ಬಿ.ಎಸ್ ಯಡಿಯೂರಪ್ಪ ನೀಡಿದ ಕೊಡುಗೆ ಅಪಾರ: ಹರತಾಳು ಹಾಲಪ್ಪ
ತೀರ್ಥಹಳ್ಳಿ : ಸಾಗರದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್ .ಯಡಿಯೂರಪ್ಪನವರಿಗೆ ಈಡಿಗ ನಾಮಧಾರಿ, ಬಿಲ್ಲವ, ದೀವರು ಹಾಗೂ 26 ಪಂಗಡಗಳ ವತಿಯಿಂದ ಮಾ. 5, ರಂದು ಅದ್ದೂರಿ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷರು ಹಾಗೂ ಮಾಜಿ ಸಚಿವರಾದ ಹರತಾಳು ಹಾಲಪ್ಪ ಹೇಳಿದರು.
ಬುಧವಾರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು ಈಡಿಗ ಸಮಾಜಕ್ಕೆ ಬಿಎಸ್ ಯಡಿಯೂರಪ್ಪನವರು ಮುಖ್ಯಮಂತ್ರಿಯಾದ ಅವಧಿಯಲ್ಲಿ ಸರ್ಕಾರದಿಂದ ಕೊಟ್ಟಿರುವ ಅಭಿವೃದ್ಧಿ ಕಾರ್ಯಗಳನ್ನು ಸ್ಮರಿಸುವ ಉದ್ದೇಶದಿಂದ ಹಾಗೂ ಜಾತಿಭೇದ ಮರೆತು ರಾಜಕಾರಣ ಮಾಡಿದ ಹಿರಿಯ ನಾಯಕರಿಗೆ ಸನ್ಮಾನಿಸುವ ಉದ್ದೇಶದಿಂದ ಈ ಸನ್ಮಾನ ನಡೆಸಲಾಗುತ್ತಿದೆ ಎಂದರು.
ಯಡಿಯೂರಪ್ಪನವರ ಸೇವೆ ಎಲ್ಲಾ ಸಮಾಜದವರಿಗೂ ಅನುಕೂಲವಾಗಿದೆ. ನಮ್ಮ ಸಮಾಜಕ್ಕೆ ನೀಡಿದ ಕೊಡುಗೆ ಅಪಾರವಾಗಿದ್ದು ಶಕ್ತಿಸಾಗರ ಸಂಗಮದ ಮೂಲಕ ಯಡಿಯೂರಪ್ಪನವರನ್ನು ಸನ್ಮಾನ ಮಾಡುತ್ತಿದ್ದೇವೆ. ಯಡಿಯೂರಪ್ಪ ಅಷ್ಟೇ ಅಲ್ಲದೆ ಬಂಗಾರಪ್ಪನವರು ಕೂಡ ನಮ್ಮ ಸಮಾಜಕ್ಕೆ ಒಳ್ಳೊಳ್ಳೆ ಕೆಲಸ ಮಾಡಿಸಿಕೊಟ್ಟಿದ್ದಾರೆ. ಇಬ್ಬರು ಕೂಡ ನಮ್ಮ ಸಮಾಜದವರು ಮುಖ್ಯಮಂತ್ರಿ ಆಗಿದ್ದರು ಎಂದರು.
ಸುಮಾರು 45000 ಜನ ಸೇರುವ ನಿರೀಕ್ಷೆ ಇದೆ. ಕಾರ್ಯಕ್ರಮಕ್ಕೆ ತೀರ್ಥಹಳ್ಳಿ ತಾಲೂಕಿನ ಸಮಾಜದ ಬಾಂಧವರು ಪಕ್ಷಭೇದ ಮರೆತು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕು ಎಂದು ಮನವಿ ಮಾಡಿದರು.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್