ಕೃಷಿ ಉತ್ಪಾದನೆಯ ಮೇಲೆ ಹವಾಮಾನ ಬದಲಾವಣೆಯ ಪ್ರಭಾವ -ಇರುವಕ್ಕಿ ಕೃಷಿ ವಿವಿ ವಿದ್ಯಾರ್ಥಿಗಳಿಂದ ಗುಂಪು ಚರ್ಚೆ | Iruvakki

ಕೃಷಿ ಉತ್ಪಾದನೆಯ ಮೇಲೆ ಹವಾಮಾನ ಬದಲಾವಣೆಯ ಪ್ರಭಾವ -ಇರುವಕ್ಕಿ ಕೃಷಿ ವಿವಿ ವಿದ್ಯಾರ್ಥಿಗಳಿಂದ ಗುಂಪು ಚರ್ಚೆ

ಕೋಡೂರು : ಅತಿಯಾದ ಮಳೆ , ಮಳೆ ಕೊರತೆ, ಅಕಾಲಿಕ ಮಳೆ, ಪ್ರವಾಹ ಮತ್ತು ಬರಗಾಲ  ಮುಂತಾದ ಹವಾಮಾನ ಬದಲಾವಣೆಗಳು ಇತ್ತೀಚಿನ ದಿನಮಾನಗಳಲ್ಲಿ ಸರ್ವೇಸಾಮಾನ್ಯವಾಗಿದ್ದು ,  ಕೃಷಿ ಕ್ಷೇತ್ರದ ಮೇಲೆ ವಿಪರೀತ ಪರಿಣಾಮ ಬೀರಿದೆ. ಈ ಬದಲಾವಣೆಯಿಂದಾಗಿ ಭೂಮಿಯು ತನ್ನ ಸಮತೋಲನವನ್ನು ಕಳೆದುಕೊಂಡು, ಕೃಷಿ ಉತ್ಪಾದನೆಯು ಕುಂಠಿತಗೊಂಡಿದೆ ಎಂದು ಗುಂಪು ಚರ್ಚೆಯಲ್ಲಿ ಅಭಿಪ್ರಾಯ ವ್ಯಕ್ತವಾಯಿತಿ.

ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ,ಕೃಷಿ ವಿಜ್ಞಾನಗಳ ಮಹಾವಿದ್ಯಾಲಯ ಇರುವಕ್ಕಿಯ ಅಂತಿಮ ವರ್ಷದ ಗಂಧದಗುಡಿ ತಂಡದ ವಿದ್ಯಾರ್ಥಿಗಳು ಕೋಡೂರಿನಲ್ಲಿ ಹಮ್ಮಿಕೊಂಡಿದ್ದ ಕೃಷಿ ಉತ್ಪಾದನೆಯ ಮೇಲೆ ಹವಮಾನ ಬದಲಾವಣೆಯ ಪ್ರಭಾವ ಕುರಿತು ಗುಂಪು ಚರ್ಚೆಯಲ್ಲಿ ಅಭಿಪ್ರಾಯ ವ್ಯಕ್ತವಾಯಿತು.

ಕೃಷಿ ಉತ್ಪಾದನೆಯ ಮೇಲಾಗುತ್ತಿರುವ  ಪರಿಣಾಮಗಳನ್ನು ತಪ್ಪಿಸಿ ರೈತರ ಆರ್ಥಿಕ ಪರಿಸ್ಥಿತಿ ಹಾಗೂ ಜೀವನದ ಗುಣಮಟ್ಟ ಸುಧಾರಿಸಲು ಹವಾಮಾನ ಬದಲಾವಣೆಗೆ ಪೂರಕ ಕೃಷಿ  ತಂತ್ರಜ್ಞಾನಗಳು ಅತ್ಯಂತ ಅವಶ್ಯಕವಾಗಿವೆ ಎಂದು ಚರ್ಚಿಸಲಾಯಿತು.

ಅರಣ್ಯನಾಶ ,ಬೆಳೆ ಉಳಿಕೆ ಸುಡುವಿಕೆ, ತೀವ್ರ ಕೃಷಿ, ಗಣಿಗಾರಿಕೆ ಮತ್ತು ಕೈಗಾರಿಕೆ ,ಭತ್ತ ಬೆಳೆಯುವ ಪ್ರದೇಶದಿಂದ ಬಿಡುಗಡೆಯಾಗುವ ಮಿಥೇನ್ ಅನಿಲ ಮುಂತಾದವುಗಳು ಬದಲಾವಣೆಯ ಕಾರಣಗಳಾಗಿವೆ.

ಬದಲಾದ ಹವಾಮಾನಕ್ಕೆ ರೈತರ ಅನುಸರಿಸಬೇಕಾದ ಪೂರಕ ಕೃಷಿ ವಿಧಾನಗಳು.

ಸಮಗ್ರ ಕೃಷಿ ಪದ್ಧತಿ-ಬದಲಾಗುತ್ತಿರುವ ಹವಾಮಾನದೊಂದಿಗೆ ಹಾಗೂ ಕಡಿಮೆ ಖರ್ಚಿನಲ್ಲಿ ಕೃಷಿ ಸಂಪನ್ಮೂಲ ಮರುಬಳಕೆ ಮಾಡಲು ಸಮಗ್ರ ಕೃಷಿ ವ್ಯವಸ್ಥೆ ಅಗತ್ಯವಿದೆ. ಈ ಪದ್ಧತಿಯಲ್ಲಿ ಉತ್ತಮ ಬೆಳೆ ಉತ್ಪಾದನೆ ಮುಖ್ಯ ಗುರಿಯಾಗಿದ್ದು, ಇತರೆ ಪದ್ಧತಿಗಳಾದ ಹೈನುಗಾರಿಕೆ, ತೋಟಗಾರಿಕೆ, ರೇಷ್ಮೆ, ಮೀನುಗಾರಿಕೆ, ಜಾನುವಾರು ಸಾಕಾಣಿಕೆ ಆಧಾರಿತ ಕೃಷಿ ಪದ್ಧತಿಗಳು ಬೆಳೆ ಉತ್ಪಾದನೆಗೆ ಪೂರಕವಾಗಿರುತ್ತದೆ .

ಬೆಳೆ ಪರಿವರ್ತನೆ ಮತ್ತು ಉತ್ಪಾದನೆ ಸಂಬಂಧಿಸಿದಂತೆ ಹೆಚ್ಚಿನ ಬೆಳೆ ವೈವಿಧ್ಯತೆಯನ್ನು ಕಾಪಾಡುವುದು , ಏಕದಳ ಧಾನ್ಯಗಳೊಂದಿಗೆ ದ್ವಿದಳ ಧಾನ್ಯಗಳನ್ನು ಅಂತರ ಬೆಳೆಯಾಗಿ ಅಳವಡಿಸಿಕೊಳ್ಳುವುದು, ಕಾಲಕ್ಕನುಗುಣವಾಗಿ ಬೆಳೆ ಬದಲಾವಣೆ  ಮತ್ತು ಉತ್ತಮ ತಳಿಗಳ ಬಳಕೆ ಮಾಡಬೇಕು.

ಮಣ್ಣು ಮತ್ತು ನೀರಿನ ಸಂಪನ್ಮೂಲಗಳ ಉತ್ತಮ ನಿರ್ವಹಣೆಯು ಭೂ ಸವಕಳಿಯನ್ನು ತಡೆಯಲು ಮತ್ತು ಬಿದ್ದ ನೀರನ್ನು ಇಂಗುವಂತೆ ಮಾಡಲು ಮಣ್ಣು ಮತ್ತು ನೀರಿನ ಸಂರಕ್ಷಣಾ ತಂತ್ರಗಳಾದ ಸಮಪಾತಳಿ ಬದುಗಳು, ಇಳಿಜಾರಿಗೆ ಅಡ್ಡಲಾಗಿ ಬದುಗಳು, ಕೃಷಿ ಹೊಂಡ, ಚೆಕ್ ಡ್ಯಾಮ್, ನಾಲಾ ಬದುಗಳ ನಿರ್ಮಾಣ ,ಮಾಗಿ ಉಳಿಮೆ, ಇಳಿಜಾರಿಗೆ ಅಡ್ಡಲಾಗಿ ಉಳಿಮೆ ಹಾಗೂ ಜಮೀನಿನಲ್ಲಿ ಅಲ್ಲಲ್ಲಿ  ಸಣ್ಣ ಬದುಗಳ ನಿರ್ಮಾಣ ಮಾಡುವುದು .

ಇಂಧನ ಚಾಲಿತ ಯಂತ್ರಗಳ ಬಳಕೆ ಬದಲಾಗಿ ನವೀಕರಿಸಬಹುದಾದ ಶಕ್ತಿ ಮೂಲಗಳಾದ ಸೌರಶಕ್ತಿ, ಜಲಶಕ್ತಿ, ಹಾಗೂ ಜೈವಿಕ ಇಂಧನಗಳನ್ನು ಕೃಷಿಯಲ್ಲಿ ಬಳಸುವುದರಿಂದ ಹವಾಮಾನ ಬದಲಾವಣೆಯನ್ನು ತಡೆಗಟ್ಟಬಹುದು.

ಈ ಮೇಲ್ಕಂಡ ಕೃಷಿ ವಿಧಾನಗಳನ್ನು ಅನುಸರಿಸಿ ಜಾಗತಿಕ ಹವಮಾನ ಬದಲಾವಣೆಯ ಪರಿಣಾಮದಿಂದಾಗಿ ಕೃಷಿ ಉತ್ಪಾದನೆಯ ಮೇಲಾಗುತ್ತಿರುವ  ಪರಿಣಾಮಗಳನ್ನು ತಪ್ಪಿಸಿ ರೈತರ ಆರ್ಥಿಕ ಪರಿಸ್ಥಿತಿ ಮತ್ತು ಜೀವನದ ಗುಣಮಟ್ಟ ಸುಧಾರಿಸಿದರ ಜೊತೆಗೆ ಜೀವ ವೈವಿಧ್ಯ ವೃದ್ಧಿಗೆ ಸಹಕಾರಿಯಾಗಿದೆ ಎಂದು ಹೇಳಲಾಯಿತು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಈದ್ ಮಿಲಾದ್ ಹಿನ್ನೆಲೆ: ಶಿವಮೊಗ್ಗ ಜಿಲ್ಲೆಯಲ್ಲಿ ಬೈಕ್ ರ್ಯಾಲಿ, ಡಿಜೆ, ಸಿಡಿಮದ್ದು ನಿಷೇಧ – ಡಿಸಿ ಆದೇಶ

ಈದ್ ಮಿಲಾದ್ ಹಿನ್ನೆಲೆ: ಶಿವಮೊಗ್ಗ ಜಿಲ್ಲೆಯಲ್ಲಿ ಬೈಕ್ ರ್ಯಾಲಿ, ಡಿಜೆ, ಸಿಡಿಮದ್ದು ನಿಷೇಧ - ಡಿಸಿ ಆದೇಶ Shivamogga district…

13 hours ago

ದೀರ್ಘಕಾಲದಿಂದ ಗೈರುಹಾಜರಾಗಿದ್ದ ಮಕ್ಕಳನ್ನು ಶಾಲೆಗೆ ಮರಳಿ ಕರೆತರಲು ಜಾಗೃತಿ ಅಭಿಯಾನ

ದೀರ್ಘಕಾಲದಿಂದ ಗೈರುಹಾಜರಾಗಿದ್ದ ಮಕ್ಕಳನ್ನು ಶಾಲೆಗೆ ಮರಳಿ ಕರೆತರಲು ಜಾಗೃತಿ ಅಭಿಯಾನ Awareness campaign conducted by Government High School,…

13 hours ago

ದುರಾಸೆ ಗೆಲ್ಲಲಿಲ್ಲ, ಪ್ರಾಮಾಣಿಕತೆ ಸೋಲಲಿಲ್ಲ! ಚಿನ್ನದ ಸರ ಮರಳಿಸಿ ಎಲ್ಲರ ಹೃದಯ ಗೆದ್ದ ಗುರುಶಕ್ತಿ ಬಸ್ ಸಿಬ್ಬಂದಿಗಳು

ದುರಾಸೆ ಗೆಲ್ಲಲಿಲ್ಲ, ಪ್ರಾಮಾಣಿಕತೆ ಸೋಲಲಿಲ್ಲ! ಚಿನ್ನದ ಸರ ಮರಳಿಸಿ ಎಲ್ಲರ ಹೃದಯ ಗೆದ್ದ ಗುರುಶಕ್ತಿ ಬಸ್ ಸಿಬ್ಬಂದಿಗಳು Gold mangalsutra…

14 hours ago

ರಿಪ್ಪನ್ ಪೇಟೆ : ಕೂಲಿ ಕೆಲಸಕ್ಕೆಂದು ಬಂದಿದ್ದ ಬಾಲಕಿಗೆ ಕಂಟಕವಾದ ಕಾಮುಕನಿಂದ ಲೈಂಗಿಕ ದೌರ್ಜನ್ಯ, ಗರ್ಭಿಣಿ! ಆರೋಪಿಯ ಬಂಧನ

ರಿಪ್ಪನ್ ಪೇಟೆ : ಕೂಲಿ ಕೆಲಸಕ್ಕೆಂದು ಬಂದಿದ್ದ ಬಾಲಕಿಗೆ ಕಂಟಕವಾದ ಕಾಮುಕನಿಂದ , ಗರ್ಭಿಣಿ! ಆರೋಪಿಯ ಬಂಧನ A 16-year-old minor…

15 hours ago

ರಿಪ್ಪನ್‌ಪೇಟೆ ಪೊಲೀಸ್ ಜೀಪ್‌ಗೆ ಅಪರಿಚಿತ ವಾಹನ ಡಿಕ್ಕಿ: ಮರಕ್ಕೆ ಅಪ್ಪಳಿಸಿದ ಜೀಪ್, ತಪ್ಪಿದ ಭಾರಿ ಅನಾಹುತ

ರಿಪ್ಪನ್‌ಪೇಟೆ ಪೊಲೀಸ್ ಜೀಪ್‌ಗೆ ಅಪರಿಚಿತ ವಾಹನ ಡಿಕ್ಕಿ: ಮರಕ್ಕೆ ಅಪ್ಪಳಿಸಿದ ಜೀಪ್, ತಪ್ಪಿದ ಭಾರಿ ಅನಾಹುತ A major disaster…

19 hours ago

ತುಂಗಾ ನದಿಗೆ ಮೂವರು ಮಕ್ಕಳೊಂದಿಗೆ ಹಾರಿದ ತಾಯಿ : ಇಬ್ಬರು ಹೆಣ್ಣು ಮಕ್ಕಳಿಗಾಗಿ ಶೋಧ ಮುಂದುವರಿಕೆ

ತುಂಗಾ ನದಿಗೆ ಮೂವರು ಮಕ್ಕಳೊಂದಿಗೆ ಹಾರಿದ ತಾಯಿ : ಇಬ್ಬರು ಹೆಣ್ಣು ಮಕ್ಕಳಿಗಾಗಿ ಶೋಧ ಮುಂದುವರಿಕೆ Mother and three…

20 hours ago