ಗ್ರಂಥಾಲಯ-ಮಾಹಿತಿ ಕೇಂದ್ರಗಳಲ್ಲಿ ಮೇಲ್ವಿಚಾರಕ ಹುದ್ದೆಗಳಿಗೆ ಅರ್ಜಿ ಆಹ್ವಾನ
ಶಿವಮೊಗ್ಗ (Shivamogga) ಜಿಲ್ಲಾ ವ್ಯಾಪ್ತಿಯ 251 ಗ್ರಾ.ಪಂ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳಲ್ಲಿ ಪ್ರಸ್ತುತ ಖಾಲಿ ಇರುವ 14 ಗ್ರಾ.ಪಂ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಹೊಸನಗರ ತಾಲ್ಲೂಕಿನ ರಾಮಚಂದ್ರಾಪುರ, ರಿಪ್ಪನ್ಪೇಟೆ,
ಶಿಕಾರಿಪುರ ತಾಲ್ಲೂಕಿನ ಬಳ್ಳಿಗಾವಿ, ಹೋತನಕಟ್ಟೆ, ತಾಳಗುಂದ, ಮಾರವಳ್ಳಿ, ಅಗ್ರಹಾರ ಮುಚುಡಿ, ಸೊರಬ ತಾಲ್ಲೂಕಿನ ಅಂಡಿಗೆ, ಮುಟುಗುಪ್ಪೆ, ಭದ್ರಾವತಿ ತಾಲ್ಲೂಕಿನ ಹನುಮಂತಾಪುರ, ಸನ್ಯಾಸಿಕೋಡಮಗ್ಗೆ, ಶಿವಮೊಗ್ಗ ತಾಲ್ಲೂಕಿನ ತುಪ್ಪೂರು, ತೀರ್ಥಹಳ್ಳಿ ತಾಲ್ಲೂಕಿನ ತೂದೂರು, ಸಾಗರ ತಾಲ್ಲೂಕಿನ ಭೀಮನಕೋಣೆ ಇಲ್ಲಿ ಮೀಸಲಾಯಿಯನ್ವಯ ಹುದ್ದೆಗಳು ಖಾಲಿ ಇದ್ದು ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಫೆ.23 ಕಡೆಯ ದಿನ. ಅರ್ಜಿಗಳನ್ನು ಸಂಬಂಧಿಸಿದ 14 ಗ್ರಾ.ಪಂ ಗಳಲ್ಲಿ ಮತ್ತು ವೆಬ್ಸೈಟ್ https://shimoga.nic.in ನಲ್ಲಿ ಡೌನ್ಲೋಡ್ ಮಾಡಿಕೊಂಡು ಭರ್ತಿ ಮಾಡಿದ ಅರ್ಜಿಗಳನ್ನು ದೃಢೀಕರಿಸಿದ ಅಗತ್ಯ ದಾಖಲೆಗಳನ್ನು ಖುದ್ದಾಗಿ ಅಥವಾ ನೋಂದಾಯಿತ ಅಂಚೆ ಮೂಲಕ ಸಂಬಂಧಪಟ್ಟ ಗ್ರಾ.ಪಂ. ಅಭಿವೃದ್ದಿ ಅಧಿಕಾರಿಗಳಿಗೆ ನೇರವಾಗಿ ಸಲ್ಲಿಸಬಹುದು ಹಾಗೂ ಹೆಚ್ಚಿನ ಮಾಹಿತಿಗಾಗಿ ಅಭಿವೃದ್ದಿ ಅಧಿಕಾರಿಗಳನ್ನು ಸಂಪರ್ಕಿಸಬಹುದೆಂದು ಗ್ರಾ.ಪಂ ಮೇಲ್ವಿಚಾರಕರ ನೇಮಕಾತಿ ಸಮಿತಿ ಸದಸ್ಯ ಕಾರ್ಯದರ್ಶಿ ತಿಳಿಸಿದ್ದಾರೆ.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್