ಚಕ್ರವರ್ತಿ ಸೂಲಿಬೆಲೆಗೆ ಮತ್ತೊಂದು ಸಂಕಷ್ಟ! ಶಿವಮೊಗ್ಗದಲ್ಲಿ FIR ದಾಖಲು, ಕಾರಣವೇನು?

ಶಿವಮೊಗ್ಗದ (Shivamogga) ನಗರದ ಜಯನಗರ ಪೊಲೀಸ್ ಠಾಣೆಯಲ್ಲಿ ವಾಗ್ಮಿ ಚಕ್ರವರ್ತಿ ಸೂಲಿಬೆಲೆ (Chakravarti Sulibele) ವಿರುದ್ಧ ಎಫ್ ಐ ಆರ್ ದಾಖಲು ಮಾಡಲಾಗಿದೆ.


SSLC ಪೂರಕ ಪರೀಕ್ಷೆ ವಿಚಾರವಾಗಿ ಚಕ್ರವರ್ತಿ ಸೂಲಿಬೆಲೆ ಸಾಮಾಜಿಕ ಜಾಲ ತಾಣಗಳಲ್ಲಿ (Social Media) ಹಾಕಿದ ಪೋಸ್ಟ್ ವಿಚಾರವಾಗಿ ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ ಸದಸ್ಯರು ನೀಡಿದ ದೂರಿನ ಮೇರೆಗೆ ಪೊಲೀಸರು ಕೇಸ್ ದಾಖಲಿಸಿಕೊಂಡಿದ್ದಾರೆ.

ಚಕ್ರವರ್ತಿ ಸೂಲಿಬೆಲೆ ಅವರ ವಿರುದ್ಧ ಐಪಿಸಿ 1860 ರ 505/1ಬಿ 505/1ಸಿ 505/2 ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.

ಚಕ್ರವರ್ತಿ ಸೂಲಿಬೆಲೆ ಪೋಸ್ಟ್​ನಲ್ಲಿ ಏನಿದೆ?

ಕರ್ನಾಟಕ ಶಿಕ್ಷಣ ಇಲಾಖೆ ಕಳೆದ ಕೆಲ ದಿನಗಳ ಹಿಂದಷ್ಟೇ ಎಸ್​ಎಸ್​ಎಲ್​ಸಿ ವಿದ್ಯಾರ್ಥಿಗಳ ಪೂರಕ ಪರೀಕ್ಷೆಗೆ ದಿನಾಂಕವನ್ನು ಘೋಷಣೆ ಮಾಡಿತ್ತು. ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯೆ ನೀಡಿದ್ದ ಸೂಲಿಬೆಲೆ ಅವರು, Karnataka state 10th standard exam time table revised all the exam in morning session but first Friday why? Ho time for namaz ಎಂದು ಬರೆದಕೊಂಡಿದ್ದರು.

ಅಶಾಂತಿ ಕೋಮುಗಲಭೆ ಉಂಟು ಮಾಡುವ ಆರೋಪ

ಸೂಲಿಬೆಲೆ ಅವರ ಪೋಸ್ಟ್ ಕುರಿತಂತೆ ಅಸಮಾಧಾನ ವ್ಯಕ್ತಪಡಿಸಿ ದೂರು ದಾಖಲು ಮಾಡಲಾಗಿದೆ. ಪೋಸ್ಟ್​ನಲ್ಲಿ ಅನ್ಯ ಧರ್ಮವನ್ನು ಹೀಯಾಳಿಸುವಂತೆ ಹಾಗೂ ಮುಸಲ್ಮಾನರ ಮೇಲೆ ಕೆಟ್ಟ ಭಾವನೆ ಬರುವಂತೆ ಈ ರೀತಿ ಬರೆಯಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಸರ್ಕಾರ ಒಂದು ಧರ್ಮದ ಪರವಿದೆ ಎಂಬ ಭಾವನೆ ಬರುವಂತೆ ಮಾಡಿ ರಾಜ್ಯದಲ್ಲಿ ಅಶಾಂತಿ ಕೋಮುಗಲಭೆ ಉಂಟು ಮಾಡುವುದರಿಂದ ಕೂಡಲೇ ಕ್ರಮ ಕೈಗೊಳ್ಳುವಂತೆ ವಿಜಯಕುಮಾರ್ ಎಸ್‌ಎನ್ ಎಂಬವರು ದೂರಿನಲ್ಲಿ ಮನವಿ ಮಾಡಿದ್ದಾರೆ.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Share
Published by
ರಫ಼ಿ ರಿಪ್ಪನ್ ಪೇಟೆ

Recent Posts

ಮಾಜಿ ಸಿಎಂಗಳ ಪುತ್ರರಿಗೆ ಮಣೆ, ಮಹಿಳೆಯರು, ವಿಪ್ರರು ಹಾಗೂ ಪ್ರಾಮಾಣಿಕರಿಗೆ ಅನ್ಯಾಯ : ಮಾಜಿ ಶಾಸಕ ಬಿ. ಸ್ವಾಮಿರಾವ್ ವಾಗ್ದಾಳಿ

ಮಾಜಿ ಸಿಎಂಗಳ ಪುತ್ರರಿಗೆ ಮಣೆ, ಮಹಿಳೆಯರು, ವಿಪ್ರರು ಹಾಗೂ ಪ್ರಾಮಾಣಿಕರಿಗೆ ಅನ್ಯಾಯ : ಮಾಜಿ ಶಾಸಕ ಬಿ. ಸ್ವಾಮಿರಾವ್ ವಾಗ್ದಾಳಿ…

6 hours ago

ಮರಕ್ಕೆ ರಭಸವಾಗಿ ಡಿಕ್ಕಿ ಹೊಡೆದು ಮೂರು ತುಂಡಾದ ಕಾರು: 22 ವರ್ಷದ ಯುವಕ ಸ್ಥಳದಲ್ಲೇ ದುರ್ಮರಣ

ಮರಕ್ಕೆ ರಭಸವಾಗಿ ಡಿಕ್ಕಿ ಹೊಡೆದು ಮೂರು ತುಂಡಾದ ಕಾರು: 22 ವರ್ಷದ ಯುವಕ ಸ್ಥಳದಲ್ಲೇ ದುರ್ಮರಣ A 22-year-old youth…

6 hours ago

ಸೀನಿಯರ್ ಚೇಂಬರ್ ಇಂಟರ್‌ನ್ಯಾಷನಲ್ ರಿಪ್ಪನ್‌ಪೇಟೆ ಘಟಕದ ನೂತನ ಸಾರಥಿಯಾಗಿ ಪಿಯುಸ್ ರೋಡ್ರಿಗಸ್ ಪದಗ್ರಹಣ

ಸೀನಿಯರ್ ಚೇಂಬರ್ ಇಂಟರ್‌ನ್ಯಾಷನಲ್ ರಿಪ್ಪನ್‌ಪೇಟೆ ಘಟಕ: ನೂತನ ಸಾರಥಿಯಾಗಿ ಪಿಯುಸ್ ರೋಡ್ರಿಗಸ್ ಪದಗ್ರಹಣ Pius Rodrigues was sworn in…

6 hours ago

ಸಿಎಂ ಡಿಕೆಶಿ ಮನವೊಲಿಕೆ : ರಾಜೀನಾಮೆ ನಿರ್ಧಾರ ಕೈಬಿಟ್ಟ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ

ಸಿಎಂ ಡಿಕೆಶಿ ಸಲಹೆಗೆ ಮನ್ನಣೆ : ರಾಜೀನಾಮೆ ನಿರ್ಧಾರ ಕೈಬಿಟ್ಟ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ Sagar MLA Beluru…

13 hours ago

ಮದ್ಯದ ಅಮಲಿನಲ್ಲಿ ತಂದೆ-ಮಗನ ನಡುವೆ ಗಲಾಟೆ: ಕತ್ತು ಹಿಸುಕಿ ತಂದೆಯನ್ನೇ ಕೊಂದ ಪುತ್ರ!

ಮದ್ಯದ ಅಮಲಿನಲ್ಲಿ ತಂದೆ-ಮಗನ ನಡುವೆ ಗಲಾಟೆ: ಕತ್ತು ಹಿಸುಕಿ ತಂದೆಯನ್ನೇ ಕೊಂದ ಪುತ್ರ! A 55-year-old man was allegedly…

17 hours ago

ಬೇಳೂರುಗೆ ಸಚಿವ ಸ್ಥಾನ ಸಿಗದಿದ್ದಕ್ಕೆ ಆಕ್ರೋಶ: ಹೆದ್ದಾರಿಯಲ್ಲಿ ಟೈರ್ ಗೆ ಬೆಂಕಿ , ಕಾಂಗ್ರೆಸ್‌ನಲ್ಲಿ ರಾಜೀನಾಮೆ ಪರ್ವ

ಬೇಳೂರುಗೆ ಸಚಿವ ಸ್ಥಾನ ಸಿಗದಿದ್ದಕ್ಕೆ ಆಕ್ರೋಶ: ಹೆದ್ದಾರಿಯಲ್ಲಿ ಟೈರ್ ಗೆ ಬೆಂಕಿ , ಕಾಂಗ್ರೆಸ್‌ನಲ್ಲಿ ರಾಜೀನಾಮೆ ಪರ್ವ Supporters of…

17 hours ago