ಚಲಿಸುತಿದ್ದ ಬಸ್ ನಿಂದ ಆಯತಪ್ಪಿ ಕೆಳಗೆ ಬಿದ್ದು SSLC ವಿದ್ಯಾರ್ಥಿ ಸಾವು
ಶಿವಮೊಗ್ಗ(Shivamogga) ಜಿಲ್ಲೆ ಶಿಕಾರಿಪುರ ತಾಲೂಕಿನ ಸಿದ್ದನಪುರ ಗ್ರಾಮದಲ್ಲಿ ಬಸ್(bus) ನಿಂದ ಇಳಿಯುವಾಗ ಆಯತಪ್ಪಿ ಬಿದ್ದು ಎಸ್‌ಎಸ್‌ಎಲ್ ಸಿ (SSLC) ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ನಡೆದಿದೆ.
ಆದಿತ್ಯ(15) ಮೃತಪಟ್ಟ ವಿದ್ಯಾರ್ಥಿ ಎಂದು ಹೇಳಲಾಗಿದೆ.
ಶಿಕಾರಿಪುರದ ಮೈತ್ರಿ ಶಾಲೆಯಲ್ಲಿ ಓದುತ್ತಿದ್ದ ಆದಿತ್ಯ ಭಾನುವಾರ ಶಿಕಾರಿಪುರಕ್ಕೆ ಬಂದಿದ್ದು, ಸಂಜೆ ಊರಿಗೆ ಮರಳುವಾಗ ಘಟನೆ ನಡೆದಿದೆ.
ಬಸ್ ನಿಲ್ದಾಣ ಬರುತ್ತಿದ್ದಂತೆ ಆದಿತ್ಯ ಬಾಗಿಲ ಬಳಿ ಬಂದಿದ್ದಾರೆ. ಈ ವೇಳೆ ಬಸ್ ನಲ್ಲಿದ್ದ ಶುಂಠಿ ಚೀಲಕ್ಕೆ ಎಡವಿ ಚಲಿಸುತ್ತಿದ್ದ ಬಸ್ ನಿಂದ ಕೆಳಗೆ ಬಿದ್ದು, ಸಾವನ್ನಪ್ಪಿದ್ದಾರೆ.
ವಿಠಲ ನಗರ ಗ್ರಾಮದ ಅಜ್ಜ ನಾಗಪ್ಪನವರ ಮನೆಯಲ್ಲಿದ್ದ ಆದಿತ್ಯ ಶಿಕಾರಿಪುರ ಶಾಲೆಗೆ ಹೋಗುತ್ತಿದ್ದ. ತಂದೆ, ತಾಯಿ ಬೆಂಗಳೂರಿನಲ್ಲಿ ವಾಸಿಸುತ್ತಿದ್ದಾರೆ ಎನ್ನಲಾಗಿದೆ.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್