ನಿಗೂಢ ಕೆಲಸಕ್ಕಾಗಿ 42 ಸಿಮ್ ಖರೀದಿ – ನಾಲ್ವರು ಯುವಕರ ಬಂಧನ
ನಿಗೂಢ ಕೆಲಸಕ್ಕಾಗಿ ಮಂಗಳೂರಿನಿಂದ ಬೆಂಗಳೂರಿಗೆ ಹೊರಟಿದ್ದ ಯುವಕರ ತಂಡವೊಂದು ಸೆರೆಯಾಗಿದೆ. ಅನುಮಾನಾಸ್ಪ ನಡೆ ಹಿನ್ನೆಲೆ ಧರ್ಮಸ್ಥಳ ಪೊಲೀಸರು ಕಾರ್ಯಾಚರಣೆ ನಡೆಸಿ ಗ್ಯಾಂಗ್ ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಅಕ್ರಮ ಸಿಮ್ಗಳ ಸಾಗಾಟ ಬಯಲಿಗೆ ಬಂದಿದೆ.
ಐವರಿದ್ದ ಯುವಕ ತಂಡ 42 ಅಕ್ರಮ ಸಿಮ್ಗಳನ್ನು ಬೆಂಗಳೂರಿಗೆ ಸಾಗಿಸುತ್ತಿದ್ದಾಗ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾ| ಧರ್ಮಸ್ಥಳ ಪೊಲೀಸರ ಬಲೆಗೆ ಬಿದ್ದಿದೆ . ಫೆಬ್ರವರಿ 1 ರಂದು ನೆರಿಯ ಗ್ರಾಮದಲ್ಲಿ ಯುವಕರನ್ನು ಬಂಧಿಸಿ ಸಿಮ್ಗಳನ್ನು ಜಪ್ತಿ ಮಾಡಲಾಗಿದೆ. ರಮೀಝ್ (20), ಅಕ್ಬರ್ ಅಲಿ (24), ಮೊಹಮ್ಮದ್ ಮುಸ್ತಫಾ (22) ಮೊಹಮ್ಮದ್ ಸಾಧಿಕ್ (27) ಬಂಧಿತ ಆರೋಪಿಯಾಗಿದ್ದು, ಪ್ರಕರಣದಲ್ಲಿ 17 ವರ್ಷದ ಅಪ್ರಾಪ್ತ ಬಾಲಕನೂ ಸಿಲುಕಿದ್ದಾನೆ.
ಆರೋಪಿ ಅಕ್ಬರ್ ಅಲಿ ದುಬೈನಲ್ಲಿ ಇದ್ದಾಗ ಬೇರೆಯವರ ಹೆಸರಿನಲ್ಲಿ ನಕಲಿ ದಾಖಲೆ ಕೊಟ್ಟು ಸಿಮ್ ಖರೀದಿ ಮಾಡಿದ್ದ. ಎರಡು ವರ್ಷಗಳ ಕಾಲ ದುಬೈನಲ್ಲಿದ್ದ ಈತ ನಾಲ್ಕು ತಿಂಗಳ ಹಿಂದೆ ಊರಿಗೆ ಮರಳಿದ್ದ. ವಿದೇಶದ ನಂಟು ಇರುವುದರಿಂದ ಪೊಲೀಸರು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.
ನಿಗೂಢ ಕೆಲಸಕ್ಕಾಗಿ 42 ಸಿಮ್ ಖರೀದಿಸಿದ್ದ ಯುವಕರ ತಂಡ ಸೆರೆ
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್