ಬಟ್ಟೆಮಲ್ಲಪದಲ್ಲಿ ಶ್ರೀ ನಾರಾಯಣ ಗುರು ಮಂದಿರವನ್ನು ವಿರೂಪಗೊಳಿಸಿ ಬ್ಯಾನರ್ ಕಿತ್ತುಹಾಕಿದ ಕಿಡಿಗೇಡಿಗಳು – ದೂರು ದಾಖಲು
ರಿಪ್ಪನ್ಪೇಟೆ : ಇಲ್ಲಿನ ಸಮೀಪದ ಬಟ್ಟೆಮಲ್ಲಪ್ಪ ಗ್ರಾಮದ ಪುರಾತನ ಪ್ರಸಿದ್ದ ಶ್ರೀ ನಾರಾಯಣ ಗುರು ಮಂದಿರವನ್ನು ಕಿಡಿಗೇಡಿಗಳು ಜೆಸಿಬಿಯಿಂದ ಧ್ವಂಸಗೊಳಿಸಿ, ಬ್ಯಾನರ್ ನ್ನು ಕಿತ್ತು ಹಾಕಿರುವ ಘಟನೆ ನಡೆದಿದೆ.
ಬಟ್ಟೆಮಲ್ಲಪ್ಪ ಗ್ರಾಮದ ಐದಾರು ದಶಕಗಳ ಹಿಂದಿನ ಶ್ರೀ ನಾರಾಯಣ ಗುರು ಸಮಿತಿಗೆ ಸೇರಿದ ಮಂದಿರದ ಹಳೆಯ ಅಡಿಪಾಯನ್ನು ವಿರೂಪಗೊಳಿಸಿ ವಿಕೃತಿ ಮೆರೆದಿರುವ ಘಟನೆ ಶುಕ್ರವಾರ ರಾತ್ರಿ ನಡೆದಿದೆ.
ಈ ಬಗ್ಗೆ ಸಮಿತಿಯವರು ಪ್ರಶ್ನಿಸಲು ಹೋದಾಗ ಸಮಿತಿಯ ಸದಸ್ಯರಿಗೆ ಅವಾಚ್ಯವಾಗಿ ನಿಂದಿಸಿ ಬೆದರಿಕೆ ಹಾಕಿದ್ದಾರೆ,ಸ್ಥಳದಲ್ಲಿ ಈ ಸಂಧರ್ಭದಲ್ಲಿ ಸ್ಥಳದಲ್ಲಿ ಗೊಂದಲವುಂಟಾಗಿದೆ.
ಈ ಬಗ್ಗೆ ಶ್ರೀ ನಾರಾಯಣ ಗುರು ಸಮಿತಿಯ ಗಣಪತಿ ಎಂಬುವವರು ಹೊಸನಗರ ಪೊಲೀಸ್ ಠಾಣೆಗೆ ಹಲವರ ವಿರುದ್ಧ ದೂರು ಸಲ್ಲಿಸಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್