Headlines

ಮನೆಗೆ ನುಗ್ಗಿ ಚಿನ್ನಾಭರಣ ದೋಚಿದ್ದ ಕಳ್ಳರು – 24 ಗಂಟೆಯಲ್ಲಿ ಆರೋಪಿಗಳ ಹೆಡೆಮುರಿ ಕಟ್ಟಿದ ನಗರ ಪೊಲೀಸರು

ಮನೆಗೆ ನುಗ್ಗಿ ಚಿನ್ನಾಭರಣ ದೋಚಿದ್ದ ಕಳ್ಳರು –  24 ಗಂಟೆಯಲ್ಲಿ ಆರೋಪಿಗಳ ಹೆಡೆಮುರಿ ಕಟ್ಟಿದ ನಗರ ಪೊಲೀಸರು
ಹೊಸನಗರ ತಾಲೂಕಿನ ಬಿದನೂರು ನಗರದಲ್ಲಿ ಮನೆಗೆ ನುಗ್ಗಿ ರೂ.4.65 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಆರೋಪಿಗಳನ್ನು 24 ಗಂಟೆಯೊಳಗೆ ಆಭರಣ ಸಹಿತ ನಗರ ಠಾಣೆ ಪಿಎಸ್‌ಐ ರಮೇಶ್ ಪಿ ಎಸ್ ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ

ನೂಲಿಗ್ಗೇರಿ ನಿವಾಸಿಗಳಾದ ಸುಹಾನ್ 21, ಅಶೋಕ 24, ಗಣೇಶ 30 ಬಂಧಿತ ಆರೋಪಿಗಳು.

ನಡೆದಿದ್ದೇನು..??

ಬಿದನೂರಿನ ನೂಲಿಗ್ಗೇರಿ ನಿವಾಸಿ ರಾಜಮ್ಮ ಮನೆಯಲ್ಲಿರದ ವೇಳೆಯನ್ಬು ಗಮನಿಸಿ ಸೋಮವಾರ ರಾತ್ರಿ ಮನೆಯ ಹಂಚು ಕಿತ್ತು ಒಳನುಗ್ಗಿದ ಕಳ್ಳರು ಬೀರುವಿನ ಬೀಗ ಒಡೆದು ಚಿನ್ನದ ಸರ, ಉಂಗುರ, ಬ್ರಾಸ್ ಲೇಟ್ ಸೇರಿದಂತೆ ರೂ.4.65 ಲಕ್ಷ ಮೌಲ್ಯದ 94 ಗ್ರಾಂ ತೂಕದ ಚಿನ್ನಾಭರಣ ದೋಚಿದ್ದರು.ರಾಜಮ್ಮ ಮನೆಗೆ ವಾಪಾಸಾಗಿ ನೋಡುತ್ತಿದ್ದಂತೆ ಕಳ್ಳತನ ಆಗಿದ್ದು ತಿಳಿದು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಎಸ್ಪಿ ಮಿಥುನ್ ಕುಮಾರ್, ಡಿವೈಎಸ್ಪಿ ಗಜಾನನ ವಿ ಸುತಾರ, ಸಿಪಿಐ ಗುರಣ್ಣ ಎಸ್ ಹೆಬ್ಬಾಳ ಮತ್ತು ಅಧಿಕಾರಿಗಳ ಮಾರ್ಗದರ್ಶನದಲ್ಲಿ ಪ್ರಕರಣದ ಬೆನ್ನತ್ತಿದ ನಗರ ಪಿಎಸ್ಐ ರಮೇಶ್ ಪಿ.ಎಸ್ ನೇತೃತ್ವದ ಪೊಲೀಸರ ತಂಡ  ಆರೋಪಿಗಳ ಪತ್ತೆಗೆ ಜಾಲ ಬೀಸಿತ್ತು.

ಪ್ರಕರಣದ ದಾಖಲಾಗಿ ಕೇವಲ 24 ಗಂಟೆಯೊಳಗೆ ಮೂವರು ಆರೋಪಿಗಳ‌ ಜೊತೆಗೆ ಚಿನ್ನಾಭರಣ ಮತ್ತು ಮೊಬೈಲ್ ಫೋನ್ ನ್ನು ವಶಪಡಿಸಿಕೊಂಡಿದೆ. ಆರೋಪಿಗಳನ್ನು ಗುರುವಾರ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.

ಕಾರ್ಯಾಚರಣೆಯಲ್ಲಿ ಪೊಲೀಸ್ ಸಿಬ್ಬಂದಿಗಳಾದ ಮಂಜುನಾಥ ಎಂ.ಜಿ, ವೆಂಕಟೇಶ್, ಪ್ರವೀಣ್ ಕುಮಾರ್, ಕಿರಣ್ ಕುಮಾರ್, ವಿಶ್ವನಾಥ್, ಶಾಂತಪ್ಪ ಭಾಗವಹಿಸಿದ್ದರು.

ಕ್ಷಿಪ್ರವಾಗಿ ಪ್ರಕರಣ ಬೇಧಿಸಿ ಚಿನ್ನಾಭರಣವನ್ನು ವಶಕ್ಕೆ ಪಡೆಯುವ‌ ಮೂಲಕ ಆರೋಪಿಗಳನ್ನು ಬಂಧಿಸಿದ ಪಿಎಸ್‌ಐ ರಮೇಶ್ ಹಾಗೂ ಸಿಬ್ಬಂದಿಗಳ ಕಾರ್ಯಾಚರಣೆಯನ್ನು ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. 

ತೀರ್ಥಹಳ್ಳಿ ಉಪವಿಭಾಗದ ಖಡಕ್ ಡಿವೈಎಸ್ಪಿ ಗಜಾನನ ವಿ ಸುತಾರ ನಗರ ಠಾಣೆಗೆ ಆಗಮಿಸಿ ಪೊಲೀಸರನ್ನು ಅಭಿನಂದಿಸಿದ್ದಾರೆ.

Leave a Reply

Your email address will not be published. Required fields are marked *