ಮನೆಗೆ ನುಗ್ಗಿ ಚಿನ್ನಾಭರಣ ದೋಚಿದ್ದ ಕಳ್ಳರು – 24 ಗಂಟೆಯಲ್ಲಿ ಆರೋಪಿಗಳ ಹೆಡೆಮುರಿ ಕಟ್ಟಿದ ನಗರ ಪೊಲೀಸರು

ಮನೆಗೆ ನುಗ್ಗಿ ಚಿನ್ನಾಭರಣ ದೋಚಿದ್ದ ಕಳ್ಳರು –  24 ಗಂಟೆಯಲ್ಲಿ ಆರೋಪಿಗಳ ಹೆಡೆಮುರಿ ಕಟ್ಟಿದ ನಗರ ಪೊಲೀಸರು
ಹೊಸನಗರ ತಾಲೂಕಿನ ಬಿದನೂರು ನಗರದಲ್ಲಿ ಮನೆಗೆ ನುಗ್ಗಿ ರೂ.4.65 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಆರೋಪಿಗಳನ್ನು 24 ಗಂಟೆಯೊಳಗೆ ಆಭರಣ ಸಹಿತ ನಗರ ಠಾಣೆ ಪಿಎಸ್‌ಐ ರಮೇಶ್ ಪಿ ಎಸ್ ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ

ನೂಲಿಗ್ಗೇರಿ ನಿವಾಸಿಗಳಾದ ಸುಹಾನ್ 21, ಅಶೋಕ 24, ಗಣೇಶ 30 ಬಂಧಿತ ಆರೋಪಿಗಳು.

ನಡೆದಿದ್ದೇನು..??

ಬಿದನೂರಿನ ನೂಲಿಗ್ಗೇರಿ ನಿವಾಸಿ ರಾಜಮ್ಮ ಮನೆಯಲ್ಲಿರದ ವೇಳೆಯನ್ಬು ಗಮನಿಸಿ ಸೋಮವಾರ ರಾತ್ರಿ ಮನೆಯ ಹಂಚು ಕಿತ್ತು ಒಳನುಗ್ಗಿದ ಕಳ್ಳರು ಬೀರುವಿನ ಬೀಗ ಒಡೆದು ಚಿನ್ನದ ಸರ, ಉಂಗುರ, ಬ್ರಾಸ್ ಲೇಟ್ ಸೇರಿದಂತೆ ರೂ.4.65 ಲಕ್ಷ ಮೌಲ್ಯದ 94 ಗ್ರಾಂ ತೂಕದ ಚಿನ್ನಾಭರಣ ದೋಚಿದ್ದರು.ರಾಜಮ್ಮ ಮನೆಗೆ ವಾಪಾಸಾಗಿ ನೋಡುತ್ತಿದ್ದಂತೆ ಕಳ್ಳತನ ಆಗಿದ್ದು ತಿಳಿದು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಎಸ್ಪಿ ಮಿಥುನ್ ಕುಮಾರ್, ಡಿವೈಎಸ್ಪಿ ಗಜಾನನ ವಿ ಸುತಾರ, ಸಿಪಿಐ ಗುರಣ್ಣ ಎಸ್ ಹೆಬ್ಬಾಳ ಮತ್ತು ಅಧಿಕಾರಿಗಳ ಮಾರ್ಗದರ್ಶನದಲ್ಲಿ ಪ್ರಕರಣದ ಬೆನ್ನತ್ತಿದ ನಗರ ಪಿಎಸ್ಐ ರಮೇಶ್ ಪಿ.ಎಸ್ ನೇತೃತ್ವದ ಪೊಲೀಸರ ತಂಡ  ಆರೋಪಿಗಳ ಪತ್ತೆಗೆ ಜಾಲ ಬೀಸಿತ್ತು.

ಪ್ರಕರಣದ ದಾಖಲಾಗಿ ಕೇವಲ 24 ಗಂಟೆಯೊಳಗೆ ಮೂವರು ಆರೋಪಿಗಳ‌ ಜೊತೆಗೆ ಚಿನ್ನಾಭರಣ ಮತ್ತು ಮೊಬೈಲ್ ಫೋನ್ ನ್ನು ವಶಪಡಿಸಿಕೊಂಡಿದೆ. ಆರೋಪಿಗಳನ್ನು ಗುರುವಾರ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.

ಕಾರ್ಯಾಚರಣೆಯಲ್ಲಿ ಪೊಲೀಸ್ ಸಿಬ್ಬಂದಿಗಳಾದ ಮಂಜುನಾಥ ಎಂ.ಜಿ, ವೆಂಕಟೇಶ್, ಪ್ರವೀಣ್ ಕುಮಾರ್, ಕಿರಣ್ ಕುಮಾರ್, ವಿಶ್ವನಾಥ್, ಶಾಂತಪ್ಪ ಭಾಗವಹಿಸಿದ್ದರು.

ಕ್ಷಿಪ್ರವಾಗಿ ಪ್ರಕರಣ ಬೇಧಿಸಿ ಚಿನ್ನಾಭರಣವನ್ನು ವಶಕ್ಕೆ ಪಡೆಯುವ‌ ಮೂಲಕ ಆರೋಪಿಗಳನ್ನು ಬಂಧಿಸಿದ ಪಿಎಸ್‌ಐ ರಮೇಶ್ ಹಾಗೂ ಸಿಬ್ಬಂದಿಗಳ ಕಾರ್ಯಾಚರಣೆಯನ್ನು ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ತೀರ್ಥಹಳ್ಳಿ ಉಪವಿಭಾಗದ ಖಡಕ್ ಡಿವೈಎಸ್ಪಿ ಗಜಾನನ ವಿ ಸುತಾರ ನಗರ ಠಾಣೆಗೆ ಆಗಮಿಸಿ ಪೊಲೀಸರನ್ನು ಅಭಿನಂದಿಸಿದ್ದಾರೆ.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Share
Published by
ರಫ಼ಿ ರಿಪ್ಪನ್ ಪೇಟೆ

Recent Posts

ಈದ್ ಮಿಲಾದ್ ಹಿನ್ನೆಲೆ: ಶಿವಮೊಗ್ಗ ಜಿಲ್ಲೆಯಲ್ಲಿ ಬೈಕ್ ರ್ಯಾಲಿ, ಡಿಜೆ, ಸಿಡಿಮದ್ದು ನಿಷೇಧ – ಡಿಸಿ ಆದೇಶ

ಈದ್ ಮಿಲಾದ್ ಹಿನ್ನೆಲೆ: ಶಿವಮೊಗ್ಗ ಜಿಲ್ಲೆಯಲ್ಲಿ ಬೈಕ್ ರ್ಯಾಲಿ, ಡಿಜೆ, ಸಿಡಿಮದ್ದು ನಿಷೇಧ - ಡಿಸಿ ಆದೇಶ Shivamogga district…

12 hours ago

ದೀರ್ಘಕಾಲದಿಂದ ಗೈರುಹಾಜರಾಗಿದ್ದ ಮಕ್ಕಳನ್ನು ಶಾಲೆಗೆ ಮರಳಿ ಕರೆತರಲು ಜಾಗೃತಿ ಅಭಿಯಾನ

ದೀರ್ಘಕಾಲದಿಂದ ಗೈರುಹಾಜರಾಗಿದ್ದ ಮಕ್ಕಳನ್ನು ಶಾಲೆಗೆ ಮರಳಿ ಕರೆತರಲು ಜಾಗೃತಿ ಅಭಿಯಾನ Awareness campaign conducted by Government High School,…

12 hours ago

ದುರಾಸೆ ಗೆಲ್ಲಲಿಲ್ಲ, ಪ್ರಾಮಾಣಿಕತೆ ಸೋಲಲಿಲ್ಲ! ಚಿನ್ನದ ಸರ ಮರಳಿಸಿ ಎಲ್ಲರ ಹೃದಯ ಗೆದ್ದ ಗುರುಶಕ್ತಿ ಬಸ್ ಸಿಬ್ಬಂದಿಗಳು

ದುರಾಸೆ ಗೆಲ್ಲಲಿಲ್ಲ, ಪ್ರಾಮಾಣಿಕತೆ ಸೋಲಲಿಲ್ಲ! ಚಿನ್ನದ ಸರ ಮರಳಿಸಿ ಎಲ್ಲರ ಹೃದಯ ಗೆದ್ದ ಗುರುಶಕ್ತಿ ಬಸ್ ಸಿಬ್ಬಂದಿಗಳು Gold mangalsutra…

13 hours ago

ರಿಪ್ಪನ್ ಪೇಟೆ : ಕೂಲಿ ಕೆಲಸಕ್ಕೆಂದು ಬಂದಿದ್ದ ಬಾಲಕಿಗೆ ಕಂಟಕವಾದ ಕಾಮುಕನಿಂದ ಲೈಂಗಿಕ ದೌರ್ಜನ್ಯ, ಗರ್ಭಿಣಿ! ಆರೋಪಿಯ ಬಂಧನ

ರಿಪ್ಪನ್ ಪೇಟೆ : ಕೂಲಿ ಕೆಲಸಕ್ಕೆಂದು ಬಂದಿದ್ದ ಬಾಲಕಿಗೆ ಕಂಟಕವಾದ ಕಾಮುಕನಿಂದ , ಗರ್ಭಿಣಿ! ಆರೋಪಿಯ ಬಂಧನ A 16-year-old minor…

14 hours ago

ರಿಪ್ಪನ್‌ಪೇಟೆ ಪೊಲೀಸ್ ಜೀಪ್‌ಗೆ ಅಪರಿಚಿತ ವಾಹನ ಡಿಕ್ಕಿ: ಮರಕ್ಕೆ ಅಪ್ಪಳಿಸಿದ ಜೀಪ್, ತಪ್ಪಿದ ಭಾರಿ ಅನಾಹುತ

ರಿಪ್ಪನ್‌ಪೇಟೆ ಪೊಲೀಸ್ ಜೀಪ್‌ಗೆ ಅಪರಿಚಿತ ವಾಹನ ಡಿಕ್ಕಿ: ಮರಕ್ಕೆ ಅಪ್ಪಳಿಸಿದ ಜೀಪ್, ತಪ್ಪಿದ ಭಾರಿ ಅನಾಹುತ A major disaster…

18 hours ago

ತುಂಗಾ ನದಿಗೆ ಮೂವರು ಮಕ್ಕಳೊಂದಿಗೆ ಹಾರಿದ ತಾಯಿ : ಇಬ್ಬರು ಹೆಣ್ಣು ಮಕ್ಕಳಿಗಾಗಿ ಶೋಧ ಮುಂದುವರಿಕೆ

ತುಂಗಾ ನದಿಗೆ ಮೂವರು ಮಕ್ಕಳೊಂದಿಗೆ ಹಾರಿದ ತಾಯಿ : ಇಬ್ಬರು ಹೆಣ್ಣು ಮಕ್ಕಳಿಗಾಗಿ ಶೋಧ ಮುಂದುವರಿಕೆ Mother and three…

19 hours ago