ಮಾಜಿ ಪ್ರಧಾನಿ ಎಚ್​ಡಿ ದೇವೆಗೌಡ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು | HDD

ಮಾಜಿ ಪ್ರಧಾನಿ ಎಚ್​ಡಿ ದೇವೆಗೌಡ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು

ಮಾಜಿ ಪ್ರಧಾನಿ, ಜೆಡಿಎಸ್​ ವರಿಷ್ಠ ಎಚ್​ಡಿ ದೇವೇಗೌಡ (HD Devegowda) ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ಆಸ್ಪತ್ರೆಗೆ (Hospital ) ದಾಖಲಿಸಲಾಗಿದೆ. ಉಸಿರಾಟ ಸಮಸ್ಯೆಯಿಂದಾಗಿ ಬೆಂಗಳೂರಿನ ಮಣಿಪಾಲ ಆಸ್ಪತ್ರೆ (Manipal Hospital ) ದಾಖಲಿಸಲಾಗಿದ್ದು, ಸದ್ಯ ಬಂದಿರುವ ಮಾಹಿತಿ ಪ್ರಕಾರ ದೇವೇಗೌಡರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆ ಮೂಲದ ತಿಳಿದುಬಂದಿದೆ.

ದೇವೇಗೌಡರಿಗೆ ಇಂದು(ಗುರುವಾರ) ಬೆಳಿಗ್ಗೆ ಉಸಿರಾಟ ಸಮಸ್ಯೆ ಕಾಣಿಸಿಕೊಂಡಿದ್ದು, ಕೂಡಲೇ ಅವರನ್ನು ಮಣಿಪಾಲ್‌ ಆಸ್ಪತ್ರೆಗೆ ಕರೆದುಕೊಂಡೊ ಹೋಗಲಾಗಿದೆ. ಶ್ವಾಸಕೋಶ ತಜ್ಞ ಡಾ.ಸತ್ಯನಾರಾಯಣ ಅವರು ಪರೀಕ್ಷೆ ನಡೆಸಿ, ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ನೀಡುತ್ತಿದ್ದು, ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಎಚ್‌ಡಿ ದೇವೇಗೌಡ ಅವರಿಗೆ 90 ವರ್ಷ ಪೂರ್ಣಗೊಂಡಿವೆ. ಆದರೂ ಸಹ ಅವರು ಸಕ್ರಿಯ ರಾಜಕಾರಣದಲ್ಲಿದ್ದು, ಸದ್ಯ ಅವರು ಲೋಕಸಭೆ ಚುನಾವಣೆಯ ಪ್ರಚಾರ, ಸಭೆಗಳನ್ನು ನಡೆಸುತ್ತಿದ್ದಾರೆ. ಈ ಇಳಿವಯಸ್ಸಿನಲ್ಲೂ ಸಹ ಅವರು ಅಧಿವೇಶನದಲ್ಲಿ ಭಾಗವಹಿಸಲು ಬೆಂಗಳೂರು ಟು ದೆಹಲಿ ಹಾಗೂ ಲೋಕಸಭಾ ಚುನಾವಣೆ ಸಂಬಂಧ ಬೆಂಗಳೂರಿನಿಂದ ಹಾಸನಕ್ಕೆ ಹೋಗಿದ್ದರು. ಅಲ್ಲದೇ ಅವರು ರಾಮಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕಾಗಿ ಅಯೋಧ್ಯೆಗೆ ಹೋಗಿಬಂದಿದ್ದರು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಸರ್ಕಾರಿ ಜಾಗದಲ್ಲಿ ಖಾಸಗಿ ಬೇಲಿ; ಕಂದಾಯ ಅಧಿಕಾರಿಗಳಿಂದ ತೆರವು – ಹಕ್ಕುಪತ್ರ–9/11 ದಾಖಲೆ ಕುರಿತು ವಾಗ್ವಾದ

ರಿಪ್ಪನ್ ಪೇಟೆಯಲ್ಲಿ ಸರ್ಕಾರಿ ಜಾಗದ ಬೇಲಿ ತೆರವು; ಹಕ್ಕುಪತ್ರ–9/11 ದಾಖಲೆ ಕುರಿತು ವಾಗ್ವಾದ Revenue officials removed a fence…

1 hour ago

ರಿಪ್ಪನ್‌ಪೇಟೆಯಲ್ಲಿ ಮೋದಿ ಜನ್ಮದಿನಾಚರಣೆ : ವರಸಿದ್ದಿವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ

ರಿಪ್ಪನ್‌ಪೇಟೆಯಲ್ಲಿ ಮೋದಿ ಜನ್ಮದಿನಾಚರಣೆ : ವರಸಿದ್ದಿವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ Special pooja was offered at Varasiddhi…

21 hours ago

ಪ್ರಧಾನಿ ಮೋದಿ ಜನ್ಮದಿನ: ಶಿವಮೊಗ್ಗದಲ್ಲಿ ‘ಸೇವಾ ಸಂಕಲ್ಪ ಅಭಿಯಾನ’ಕ್ಕೆ ಚಾಲನೆ

ಪ್ರಧಾನಿ ಮೋದಿ ಜನ್ಮದಿನ: ಶಿವಮೊಗ್ಗದಲ್ಲಿ ‘ಸೇವಾ ಸಂಕಲ್ಪ ಅಭಿಯಾನ’ಕ್ಕೆ ಚಾಲನೆ BJP launches a month-long Seva Sankalpa Abhiyan…

22 hours ago

ಮೋದಿ ಹುಟ್ಟುಹಬ್ಬ ‘ನಿರುದ್ಯೋಗಿಗಳ ದಿನ’ವಾಗಿ ಆಚರಣೆ; ಯುವ ಕಾಂಗ್ರೆಸ್ ಪ್ರತಿಭಟನೆ

ಮೋದಿ ಹುಟ್ಟುಹಬ್ಬ ‘ನಿರುದ್ಯೋಗಿಗಳ ದಿನ’ವಾಗಿ ಆಚರಣೆ; ಯುವ ಕಾಂಗ್ರೆಸ್ ಪ್ರತಿಭಟನೆ Youth Congress and NSUI workers in Shivamogga…

22 hours ago

ಶಿವಮೊಗ್ಗ ಲೋಕಾಯುಕ್ತ ಎಸ್‌ಪಿಯಾಗಿ ಆಂಟನಿ ಜಾನ್ ನೇಮಕ

ಶಿವಮೊಗ್ಗ ಲೋಕಾಯುಕ್ತ ಎಸ್‌ಪಿಯಾಗಿ ಆಂಟನಿ ಜಾನ್ ನೇಮಕ Anthony John has been appointed as the new Lokayukta…

22 hours ago

ಕಡವೆ ಬೇಟೆ ಮಾಡಿ ಮಾಂಸ ಕತ್ತರಿಸುತ್ತಿದ್ದಾಗಲೇ ದಾಳಿ! ಮೂವರ ಬಂಧನ | 70 ಕೆ.ಜಿ. ಮಾಂಸ , ಬಂದೂಕು ಜಪ್ತಿ

ಕಡವೆ ಬೇಟೆ ಮಾಡಿ ಮಾಂಸ ಕತ್ತರಿಸುತ್ತಿದ್ದಾಗಲೇ ದಾಳಿ! ಮೂವರ ಬಂಧನ | 70 ಕೆ.ಜಿ. ಮಾಂಸ , ಬಂದೂಕು ಜಪ್ತಿ…

1 day ago