ರಿಪ್ಪನ್ಪೇಟೆಗೆ ವಿಧಾನಸಭಾ ಅಧ್ಯಕ್ಷ ಯು ಟಿ ಖಾದರ್ ಭೇಟಿ – ನಾಗರೀಕರಿಂದ ಅದ್ದೂರಿ ಸ್ವಾಗತ |UTK
ರಿಪ್ಪನ್ಪೇಟೆ : ಪಟ್ಟಣಕ್ಕೆ ಆಗಮಿಸಿದ ವಿಧಾನಸಭಾ ಅಧ್ಯಕ್ಷರಾದ ಯು ಟಿ ಖಾದರ್ ರವರಿಗೆ ವಿನಾಯಕ ವೃತ್ತದಲ್ಲಿ ನಾಗರೀಕರು ಅದ್ದೂರಿಯಾಗಿ ಸ್ವಾಗತಿಸಿದರು.
ಖಾಸಗಿ ಕಾರ್ಯಕ್ರಮದ ಅಂಗವಾಗಿ ಸಾಗರಕ್ಕೆ ಭೇಟಿ ನೀಡಿ ಹಿಂದಿರುಗುವಾಗ ಮಾರ್ಗ ಮಧ್ಯದಲ್ಲಿ ಪಟ್ಟಣದ ನಾಗರೀಕರು ಹಾರ ತುರಾಯಿಗಳ ಮೂಲಕ ಅದ್ದೂರಿ ಸ್ವಾಗತ ಕೋರಿದರು.
ಈ ಸಂಧರ್ಭದಲ್ಲಿ ನಾಗರೀಕರೊಂದಿಗೆ ಸರಳ ಸಜ್ಜನಿಕೆಯಿಂದ ಮಾತನಾಡಿದ ಅವರು ವಿಧಾನಸಭಾ ಕಲಾಪ ವೀಕ್ಷಣೆಗೆ ಆಗಮಿಸಿ ಎಂದು ಆಹ್ವಾನಿಸಿದರು.
ಪಟ್ಟಣದ ನಾಗರೀಕರು ಭೇಟಿಯ ಸವಿನೆನಪಿಗಾಗಿ ಅಂತರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆದ ಅಪ್ಪೆ ಮಾವಿನಮಿಡಿಯ ಉಪ್ಪಿನಕಾಯಿಯನ್ನು ಉಡುಗೊರೆಯಾಗಿ ನೀಡಿದರು.
ಈ ಸಂಧರ್ಭದಲ್ಲಿ ಗ್ರಾಪಂ ಅಧ್ಯಕ್ಷೆ ಧನಲಕ್ಷ್ಮಿ , ಮುಖಂಡರುಗಳಾದ ಅಮೀರ್ ಹಂಜಾ , ಈಶ್ವರಪ್ಪ ಗೌಡ , ಆಸೀಫ಼್ ಭಾಷಾ , ಎಂ ಎಂ ಪರಮೇಶ್ ,ಗಣಪತಿ , ಫ್ಯಾನ್ಸಿ ರಮೇಶ್ ,ಖಾಸಿಂ ಸಾಬ್ , ಹಸನಬ್ಬ ,ಹಾಲುಗುಡ್ಡೆ ಹರೀಶ್ , ನಾಗಪ್ಪ ಅರಸಾಳು , ಫೈಜಲ್ ಬ್ಯಾರಿ ಹಾಗೂ ಇನ್ನಿತರರಿದ್ದರು.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್