Breaking
12 Jan 2026, Mon

ರಿಪ್ಪನ್‌ಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಇಂದಿನಿಂದ ದಿನದ 24 ಗಂಟೆಯೂ ವೈದ್ಯರ ಸೇವೆ ಲಭ್ಯ

ರಿಪ್ಪನ್‌ಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಇಂದಿನಿಂದ ದಿನದ 24 ಗಂಟೆಯೂ ವೈದ್ಯರ ಸೇವೆ ಲಭ್ಯ


ರಿಪ್ಪನ್‌ಪೇಟೆ : ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ಕಳೆದ ಕೆಲವು ವರ್ಷಗಳಿಂದ ಹಿಡಿದಿರುವ ಗ್ರಹಣ ಬಿಡುವ ಲಕ್ಷಣಗಳು ಗೋಚರಿಸುತ್ತಿದೆ.

ಹೌದು ಹೊಸನಗರ-ಸಾಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಕೈಗಾರಿಕಾ ಅರಣ್ಯ ನಿಗಮದ ಅಧ್ಯಕ್ಷರಾದ ಬೇಳೂರು ಗೋಪಾಲಕೃಷ್ಣ ರವರ ದಿಟ್ಟ ನಿರ್ಧಾರದಿಂದ ಸರ್ಕಾರಿ ಆಸ್ಪತ್ರೆಗೆ ಅಂಟಿದ ಗ್ರಹಣ ಕೊನೆಗೂ ಬಿಟ್ಟಿದೆ. ಇಂದಿನಿಂದ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಮೂರು ವೈದ್ಯರು ಕಾರ್ಯ ನಿರ್ವಹಿಸಲಿದ್ದು ದಿನದ 24 ಗಂಟೆಯೂ ಕಾರ್ಯ ನಿರ್ವಹಿಸಲಿದ್ದಾರೆ.

ಕಳೆದ ಹಲವಾರು ವರ್ಷಗಳಿಂದ ರಾತ್ರಿ ಪಾಳಿಯಲ್ಲಿ ಸಮರ್ಪಕವಾದ ವೈದ್ಯರ ಸೇವೆಯ ಕೊರತೆಯಿಂದ ಹಲವಾರು ಅವಘಡಗಳು ನಡೆದಿತ್ತು. ಈ ಬಗ್ಗೆ ಸಂಬಂದಪಟ್ಟವರಿಗೆ ಎಷ್ಟೇ ಮನವಿ ಸಲ್ಲಿಸಿದ್ದರೂ ಪ್ರಯೋಜನವಾಗದೇ ಜನಸಾಮಾನ್ಯರು ಹಿಡಿಶಾಪ ಹಾಕುತಿದ್ದದ್ದು ಸರ್ವೇ ಸಾಮಾನ್ಯವಾಗಿತ್ತು.

ಇತ್ತೀಚೆಗೆ ವೈದ್ಯರ ಕೊರತೆಯಿಂದ ಮಹಿಳೆಯೊಬ್ಬರು ಮೃತಪಟ್ಟ ಹಿನ್ನಲೆಯಲ್ಲಿ ಆಸ್ಪತ್ರೆಗೆ ಭೇಟಿ ನೀಡಿದ್ದ ಶಾಸಕರು ಸ್ಥಳದಲ್ಲಿಯೇ ಸಂಭದಪಟ್ಟ ಆರೋಗ್ಯ ಅಧಿಕಾರಿಗಳನ್ನು ಸಂಪರ್ಕಿಸಿ ಆಸ್ಪತ್ರೆಯ ನ್ಯೂನ್ಯತೆಗಳನ್ನು ಸರಿಪಡಿಸುವಂತೆ ತಾಕೀತು ಮಾಡಿದ್ದರು.

ಕೊನೆಗೂ ಬಂತು ದಿನದ 24 ಗಂಟೆಗಳ ವೈದ್ಯರ ಸೇವೆ :

ಕಳೆದ ಹಲವಾರು ವರ್ಷಗಳಿಂದ ಪಟ್ಟಣದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರುಗಳ ಸೇವೆ ನಿರಂತರವಾಗಿ ಇಲ್ಲದ ಕಾರಣ ನಾಗರಿಕರು ಕೆಲವು ಸಂದರ್ಭದಲ್ಲಿ  ಪರದಾಡುವಂಥಾಗಿತ್ತು.
ಮಹಿಳೆಯರು ವೃದ್ಧರು ಹಾಗೂ ಮಕ್ಕಳಿಗೆ ತುರ್ತು ಚಿಕಿತ್ಸೆಯ ಅಗತ್ಯತೆಯ ಸಂದರ್ಭದಲ್ಲಿ ವೈದ್ಯರುಗಳ ಸೇವೆ ಇಲ್ಲದೆ ಪರದಾಡುವಂಥಾಗಿತ್ತು ಹಾಗೆಯೇ ಹೃದಯಘಾತ,ರಸ್ತೆ ಅಪಘಾತ, ಹಾಗೂ ವಿಷ ಸೇವನೆಯಂತಹ ತುರ್ತು ಸಂದರ್ಭದಲ್ಲಿ  ವೈದ್ಯರುಗಳ ಸೇವೆ ಇಲ್ಲದೆ  ಮೃತಪಟ್ಟಿರುವ ಘಟನೆಯೂ ಸಹ ನಡೆದಿತ್ತು.


ಇದನ್ನೆಲ್ಲ ಗಮನಿಸಿದ ಶಾಸಕ ಬೇಳೂರು ಗೋಪಾಲಕೃಷ್ಣ ಗ್ರಾಮೀಣ ಪ್ರದೇಶದ ಜನತೆಯ ಆರೋಗ್ಯದ ಸುರಕ್ಷತೆಯ ದೃಷ್ಟಿಯಿಂದ ದಿನದ 24 ಗಂಟೆ ಸೇವೆಯನ್ನು ಸಲ್ಲಿಸಲು ಮೂರು ಜನ ಡಾಕ್ಟರ್ ಹಾಗೂ 05 ಜನ ದಾದಿಯರನ್ನು  ನೇಮಕಗೊಳಿಸಿದ್ದಾರೆ.

ಹೊರ ರೋಗಿಗಳು ಬೆಳಿಗ್ಗೆ 09 ರಿಂದ ಸಂಜೆ 4.30 ರೊಳಗೆ ಚಿಕಿತ್ಸೆ ಪಡೆದುಕೊಳ್ಳಬಹುದು ಆ ನಂತರದಲ್ಲಿ ಎಮರ್ಜೆನ್ಸಿಯಂತಹ ಪ್ರಕರಣಗಳಿಗೆ ವೈದ್ಯರ ಸೇವೆ ಲಭ್ಯವಿದೆ. ರೇಬಿಸ್ ಇಂಜೆಕ್ಷನ್‌ , ಹಾಗೂ ಮಾತ್ರೆಗಳನ್ನು ಪಡೆದುಕೊಳ್ಳುವವರು ಸಂಜೆ 4.30 ರೊಳಗೆ ಪಡೆದುಕೊಳ್ಳಬಹುದಾಗಿದೆ.

ರಿಪ್ಪನ್‌ಪೇಟೆ ಪಟ್ಟಣದ ಬಹುದಿನಗಳ ಬೇಡಿಕೆಯನ್ನು ಬಗೆಹರಿಸಿ ದಿನದ 24 ಗಂಟೆಯೂ ವೈದ್ಯರ ಸೇವೆ ಕೊಡಿಸುವಲ್ಲಿ ಯಶಸ್ವಿಯಾದ ಶಾಸಕ ಬೇಳೂರು ಗೋಪಾಲಕೃಷ್ಣ ರವರಿಗೆ ರಿಪ್ಪನ್‌ಪೇಟೆ ಘಟಕದ ಕಾಂಗ್ರೆಸ್ ಅಧ್ಯಕ್ಷ ಗಣಪತಿ ಗವಟೂರು ,ಕಾಂಗ್ರೆಸ್ ತಾಲೂಕ್ ಅಲ್ಪಸಂಖ್ಯಾತ ಅಧ್ಯಕ್ಷ ಆಸೀಫ಼್ ಭಾಷಾ ,ಗ್ರಾಪಂ ಮಾಜಿ ಉಪಾಧ್ಯಕ್ಷ ರವೀಂದ್ರ ಕೆರೆಹಳ್ಳಿ ಆರೋಗ್ಯ ರಕ್ಷಾ ಸಮಿತಿ ಸದಸ್ಯ ಶ್ರೀಧರ್ , ಯುವ ಕಾಂಗ್ರೆಸ್ ಕಾರ್ಯದರ್ಶಿ ಖಲೀಲ್ ಷರೀಫ್ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

About The Author

By ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Leave a Reply

Your email address will not be published. Required fields are marked *

Exit mobile version