ರಿಪ್ಪನ್‌ಪೇಟೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಾಳೆ (28-02-2024) ವಿದ್ಯುತ್ ವ್ಯತ್ಯಯ
ರಿಪ್ಪನ್ ಪೇಟೆ : ಪಟ್ಟಣ ಹಾಗೂ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ 28/02/24 ರಂದು ಬೆಳಿಗ್ಗೆ 09-30 ರಿಂದ ಸಂಜೆ 04 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ.
ರಿಪ್ಪನ್‌ಪೇಟೆ ಪಟ್ಟಣದ ಸಾಗರ ರಸ್ತೆಯಲ್ಲಿ ರಸ್ತೆ ಅಗಲಿಕರಣವಾಗುತ್ತಿರುವ ಹಿನ್ನಲೆಯಲ್ಲಿ ಲೈಟ್ ಕಂಬಗಳನ್ನು ಶಿಫ್ಟ್ ಮಾಡುವ ಕಾಮಗಾರಿಯಿರುವ ಹಿನ್ನಲೆಯಲ್ಲಿ ರಿಪ್ಪನ್‌ಪೇಟೆ ಪಟ್ಟಣ ,ಹೆದ್ದಾರಿಪುರ ,ಜಂಬಳ್ಳಿ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಇಲಾಖೆ ತಿಳಿಸಿದೆ.
ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ ???
ರಿಪ್ಪನ್ ಪೇಟೆ,ಹೆದ್ದಾರಿಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜು ಇರುವುದಿಲ್ಲ ಎಂದು ಮೆಸ್ಕಾಂ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ