ಲೋಕಾಯುಕ್ತ ಅಧಿಕಾರಿ ಹೆಸರಿನಲ್ಲಿ ಮಹಿಳಾ ಅಧಿಕಾರಿಗೆ 1 ಲಕ್ಷ ರೂ ವಂಚನೆ – ಪ್ರಕರಣ ದಾಖಲು
ಶಿವಮೊಗ್ಗ(Shivamogga) : ಮಹಿಳಾ ಆಫೀಸರ್ಗೆ ಲೋಕಾಯುಕ್ತ ಅಧಿಕಾರಿ ಎಂದು ಹೇಳಿಕೊಂಡು ಕರೆ ಮಾಡಿ, ₹1 ಲಕ್ಷ ಹಣ ವಂಚನೆ ಮಾಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.
ಆಹಾರ ಇಲಾಖೆಯಲ್ಲಿ ಶಿರಸ್ತೇದಾರ್ ಆಗಿರುವ ಮಹಿಳಾ ಅಧಿಕಾರಿಯೊಬ್ಬರು ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆಯಲ್ಲಿದ್ದರು.
ಈ ಸಂದರ್ಭ ವಾಟ್ಸಪ್ನಲ್ಲಿ ಕರೆ ಮಾಡಿದ್ದ ವ್ಯಕ್ತಿಯೊಬ್ಬ, ತಾನು ಲೋಕಾಯುಕ್ತ ಕಚೇರಿಯಿಂದ ಕರೆ ಮಾಡುತ್ತಿರುವುದಾಗಿ ಪರಿಚಯಿಸಿಕೊಂಡಿದ್ದ. ‘ತಮ್ಮ ವಿರುದ್ಧ ದೂರು ಬಂದಿದೆ. ಇನ್ನು ಕೆಲವೇ ನಿಮಿಷದಲ್ಲಿ ಎಫ್ಐಆರ್ ದಾಖಲು ಮಾಡಲಾಗುತ್ತದೆ. ಇದನ್ನು ತಪ್ಪಿಸಬೇಕಿದ್ದರೆ ಒಂದೂವರೆ ಲಕ್ಷ ಹಣ ನೀಡಬೇಕುʼ ಎಂದು ಬೆದರಿಸಿದ್ದ.
ಯಾವ ದೂರು ಎಂದು ಕೇಳಿದರೂ ವಿವರಣೆ ನೀಡಿರಲಿಲ್ಲ. ಹೆದರಿದ ಮಹಿಳಾ ಅಧಿಕಾರಿ ಲೋಕಾಯುಕ್ತ ಎಂದು ಕರೆ ಮಾಡಿದ್ದ ವ್ಯಕ್ತಿ ಸೂಚಿಸಿದ್ದ ಅಕೌಂಟ್ ನಂಬರ್ಗಳಿಗೆ ₹1 ಲಕ್ಷ ಹಣ ವರ್ಗಾಯಿಸಿದ್ದರು. ಬಳಿಕ ಪರಿಶೀಲಿಸಿದಾಗ ವಂಚನೆಗೊಳಗಾಗಿರುವುದು ಗೊತ್ತಾಗಿದೆ.
ಈ ಸಂಬಂಧ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್