Headlines

ಲೋಕಾಯುಕ್ತ ಅಧಿಕಾರಿ ಹೆಸರಿನಲ್ಲಿ ಮಹಿಳಾ ಅಧಿಕಾರಿಗೆ 1 ಲಕ್ಷ ರೂ ವಂಚನೆ – ಪ್ರಕರಣ ದಾಖಲು

ಲೋಕಾಯುಕ್ತ ಅಧಿಕಾರಿ ಹೆಸರಿನಲ್ಲಿ ಮಹಿಳಾ ಅಧಿಕಾರಿಗೆ 1 ಲಕ್ಷ ರೂ ವಂಚನೆ – ಪ್ರಕರಣ ದಾಖಲು


ಶಿವಮೊಗ್ಗ(Shivamogga) : ಮಹಿಳಾ ಆಫೀಸರ್‌ಗೆ ಲೋಕಾಯುಕ್ತ ಅಧಿಕಾರಿ ಎಂದು ಹೇಳಿಕೊಂಡು ಕರೆ ಮಾಡಿ, ₹1 ಲಕ್ಷ ಹಣ ವಂಚನೆ ಮಾಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

ಆಹಾರ ಇಲಾಖೆಯಲ್ಲಿ ಶಿರಸ್ತೇದಾರ್‌ ಆಗಿರುವ ಮಹಿಳಾ ಅಧಿಕಾರಿಯೊಬ್ಬರು ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆಯಲ್ಲಿದ್ದರು.

ಈ ಸಂದರ್ಭ ವಾಟ್ಸಪ್‌ನಲ್ಲಿ ಕರೆ ಮಾಡಿದ್ದ ವ್ಯಕ್ತಿಯೊಬ್ಬ, ತಾನು ಲೋಕಾಯುಕ್ತ ಕಚೇರಿಯಿಂದ ಕರೆ ಮಾಡುತ್ತಿರುವುದಾಗಿ ಪರಿಚಯಿಸಿಕೊಂಡಿದ್ದ. ‘ತಮ್ಮ ವಿರುದ್ಧ ದೂರು ಬಂದಿದೆ. ಇನ್ನು ಕೆಲವೇ ನಿಮಿಷದಲ್ಲಿ ಎಫ್‌ಐಆರ್‌ ದಾಖಲು ಮಾಡಲಾಗುತ್ತದೆ. ಇದನ್ನು ತಪ್ಪಿಸಬೇಕಿದ್ದರೆ ಒಂದೂವರೆ ಲಕ್ಷ ಹಣ ನೀಡಬೇಕುʼ ಎಂದು ಬೆದರಿಸಿದ್ದ.

ಯಾವ ದೂರು ಎಂದು ಕೇಳಿದರೂ ವಿವರಣೆ ನೀಡಿರಲಿಲ್ಲ. ಹೆದರಿದ ಮಹಿಳಾ ಅಧಿಕಾರಿ ಲೋಕಾಯುಕ್ತ ಎಂದು ಕರೆ ಮಾಡಿದ್ದ ವ್ಯಕ್ತಿ ಸೂಚಿಸಿದ್ದ ಅಕೌಂಟ್‌ ನಂಬರ್‌ಗಳಿಗೆ ₹1 ಲಕ್ಷ ಹಣ ವರ್ಗಾಯಿಸಿದ್ದರು. ಬಳಿಕ ಪರಿಶೀಲಿಸಿದಾಗ ವಂಚನೆಗೊಳಗಾಗಿರುವುದು ಗೊತ್ತಾಗಿದೆ.

ಈ ಸಂಬಂಧ ಜಯನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

About The Author

Leave a Reply

Your email address will not be published. Required fields are marked *

Exit mobile version