ವಿವಾಹಿತ ಮಹಿಳೆಗೆ ಪದೇ ಪದೇ ಕಿರುಕುಳ ನೀಡುತಿದ್ದ ಆರೋಪಿಗೆ 2 ವರ್ಷ ಜೈಲು ಶಿಕ್ಷೆ
ಸಾಗರ – ವಿವಾಹಿತ ಮಹಿಳೆಗೆ ಕಿರುಕುಳ ನೀಡುತ್ತಿರುವ ಆರೋಪದ ಹಿನ್ನೆಲೆಯಲ್ಲಿ ಆರೋಪಿಗೆ ಜೆಎಂಎಫ್‌ಸಿ ನ್ಯಾಯಾಲಯ ಜೈಲು ಶಿಕ್ಷೆ ವಿಧಿಸಿದ ಘಟನೆ ನಡೆದಿದೆ.
ಸಮೀಪದ ಶಿರವಾಳ ಗ್ರಾಮದ ರತನ್ ಕುಮಾರ್ ಎಂಬಾತ ಮಹಿಳೆಗೆ 2013ರಿಂದ ನಿರಂತರ ಫೋನ್ ಮಾಡಿ ಕಿರುಕುಳ ನೀಡುತ್ತಿದ್ದನು.
2021ರಲ್ಲಿ ಸಾಗರದಲ್ಲಿ ಅಡ್ಡಗಟ್ಟಿ ಹಲ್ಲೆ ಸಹ ನಡೆಸಿದ್ದನು. ಈ ಸಂಬಂಧ ಮಹಿಳೆ ನೀಡಿದ ದೂರಿನ ಹಿನ್ನೆಲೆಯಲ್ಲಿ ಸಾಗರ ನಗರ ಠಾಣೆಯಲ್ಲಿ ಪ್ರಕರಣ ಸಹ ದಾಖಲಾಗಿತ್ತು.
ವಿಚಾರಣೆ ಸಂದರ್ಭದಲ್ಲಿ ಸಹ ರತನ್ ಕುಮಾರ್ ಮಹಿಳೆಗೆ ಕಿರುಕುಳ ನೀಡುತ್ತಿದ್ದುದು ನ್ಯಾಯಾಲಯದ ಗಮನಕ್ಕೆ ಬಂದ ಹಿನ್ನೆಲೆಯಲ್ಲಿ ಜಾಮೀನು ರದ್ದಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶರಾದ ಶ್ರೀಶೈಲ ಭೀಮಸೇನಾ ಬಗಾಡಿ ಅವರು ರತನ್ ಕುಮಾರ್‌ಗೆ 2 ವರ್ಷಗಳ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿದ್ದಾರೆ.