ಹೊಸನಗರ ತಾಲೂಕ್ ಒಕ್ಕಲಿಗರ ಸಂಘದ ನೂತನ ಅಧ್ಯಕ್ಷರಾಗಿ ಎಂ ಬಿ ಲಕ್ಷ್ಮಣಗೌಡ ಆಯ್ಕೆ | Rpet
ರಿಪ್ಪನ್ ಪೇಟೆ : ಹೊಸನಗರ ತಾಲೂಕು ಒಕ್ಕಲಿಗರ ಸಂಘದ ನೂತನ ಅಧ್ಯಕ್ಷರಾಗಿ ರಿಪ್ಪನ್ಪೇಟೆಯ ಎಂ. ಬಿ ಲಕ್ಷ್ಮಣಗೌಡ ಆಯ್ಕೆಯಾಗಿದ್ದಾರೆ.
19 ಜನ ನಿರ್ದೇಶಕರನ್ನು ಹೊಂದಿರುವ ಹೊಸನಗರ ತಾಲೂಕು ಒಕ್ಕಲಿಗರ ಸಂಘದ ನಿರ್ದೇಶಕರ ಸ್ಥಾನಕ್ಕೆ ಚುನಾವಣೆ ಇತ್ತೀಚೆಗೆ ನಡೆದಿತ್ತು.ಇಬ್ಬರು ಅವಿರೋಧವಾಗಿ ಆಯ್ಕೆಯಾಗಿದ್ದರು.17 ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಎಂ.ಬಿ ಲಕ್ಷ್ಮಣಗೌಡ ನೇತ್ರತ್ವದ ತಂಡದಿಂದ ಕಣಕ್ಕಿಳಿದ ಅಭ್ಯರ್ಥಿಗಳು 17 ಸ್ಥಾನಗಳಲ್ಲಿಯೂ ಭರ್ಜರಿ ಜಯಭೇರಿ ಗಳಿಸಿದ್ದರು.
ಸೋಮವಾರ ಪಟ್ಟಣದ ಸಾಗರ ರಸ್ತೆಯ ವಿಶ್ವಮಾನವ ಸಭಾಭವನದಲ್ಲಿ ಚುನಾವಣಾ ಅಧಿಕಾರಿಗಳಾದ ಬಸಪ್ಪ ಹಾಗೂ ಸಹಾಯಕ ಚುನಾವಣಾ ಅಧಿಕಾರಿಗಳಾದ ಉಮೇಶ್ ಭಟ್ ಮತ್ತು ಚಂದ್ರ ಬಾಬು ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಚುನಾಯಿತ ಪ್ರತಿನಿಧಿಗಳಿಂದ ಆಡಳಿತ ಮಂಡಳಿ ಆಯ್ಕೆಯಲ್ಲಿ ಎಂ ಬಿ ಲಕ್ಷ್ಮಣಗೌಡ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಹೊಸನಗರ ತಾಲೂಕ್ ಒಕ್ಕಲಿಗ ಸಂಘದ ಆಡಳಿತ ಮಂಡಳಿಗೆ ಆಯ್ಕೆಯಾದವರ ವಿವರ:
ಅಧ್ಯಕ್ಷರು : ಎಂ ಬಿ ಲಕ್ಷ್ಮಣಗೌಡ
ಕಾರ್ಯಾಧ್ಯಕ್ಷರು : ಹರೀಶ್ ಹೆಚ್ ವಿ
ಉಪಾಧ್ಯಕ್ಷರು : ಎಂ ಎಂ ಪರಮೇಶ್
ಮಹಿಳಾ ಉಪಾಧ್ಯಕ್ಷರು : ವಜ್ರಾಕ್ಷಮ್ಮ ಲೋಕಪ್ಪಗೌಡ
ಕಾರ್ಯದರ್ಶಿ :ಮಂಜುನಾಥ್ ಇ ಡಿ
ಸಹ ಕಾರ್ಯದರ್ಶಿ : ಷಣ್ಮುಖಪ್ಪ ಗೌಡ ಬಿ ಹೆಚ್ , ಸಂತೋಷ್ ಕುಮಾರ್
ಖಜಾಂಚಿ : ಕೃಷ್ಣಮೂರ್ತಿ ಟಿ ಎಂ
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್