287 ಕೋಟಿ ರೂಪಾಯಿ ವೆಚ್ಚದಲ್ಲಿ ಹೊಸನಗರಕ್ಕೆ – ಚಕ್ರಾನಗರದಿಂದ ಕುಡಿಯುವ ನೀರು ಯೋಜನೆ ಕಾರ್ಯರೂಪಕ್ಕೆ

287 ಕೋಟಿ ರೂಪಾಯಿ ವೆಚ್ಚದಲ್ಲಿ ಹೊಸನಗರಕ್ಕೆ – ಚಕ್ರಾನಗರದಿಂದ ಕುಡಿಯುವ ನೀರು ಯೋಜನೆ ಕಾರ್ಯರೂಪಕ್ಕೆ

ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶದಲ್ಲಿ ಶಾಸಕ ಬೇ ಳೂರು ಗೋಪಾಲಕೃಷ್ಣ ಘೋಷಣೆ



ಹೊಸನಗರ : ಮುಂದಿನ ವರ್ಷದಿಂದ 287 ಕೋಟಿ ರೂಪಾಯಿ ವೆಚ್ಚದಲ್ಲಿ ಹೊಸನಗರಕ್ಕೆ – ಚಕ್ರಾನಗರದಿಂದ ಕುಡಿಯುವ ನೀರು ತರುವ ಯೋಜನೆ ಕಾರ್ಯರೂಪಕ್ಕೆ ಬರಲಿದೆ ಎಂದು ಶಾಸಕ ಹಾಗೂ ರಾಜ್ಯ ಅರಣ್ಯ ಕೈಗಾರಿಕಾ ಮಂಡಳಿಯ ಅಧ್ಯಕ್ಷರಾದ ಬೇಳೂರು ಗೋಪಾಲಕೃಷ್ಣ ಹೇಳಿದರು.

ಪಟ್ಟಣದ ಈಡಿಗರ ಸಭಾಭವನದಲ್ಲಿ  ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ತಾಲೂಕ್ ಆಡಳಿತ, ತಾಲೂಕು ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ, ಮತ್ತು ಇಂಧನ ಇಲಾಖೆಗಳ ಸಂಯುಕ್ತ  ಆಶ್ರಯದಲ್ಲಿ ಏರ್ಪಡಿಸಿದ ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶವನ್ನು ಅವರು ಜ್ಯೋತಿ ಬೆಳಗುವ ಮೂಲಕ ಉದ್ಘಾಟಿಸಿ ಮಾತನಾಡಿ ರಾಜ್ಯದಲ್ಲಿ ಈ ಬಾರಿ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿದ್ದು ನೀರಿನ ಮಿತ ಬಳಕೆಯ ಮೂಲಕ ಸಮಸ್ಯೆಯನ್ನು ಸರಿ ದೂಗಿಸಬೇಕೆಂದು ಮುಂದಿನ ಬಾರಿ ಕುಡಿಯುವ ನೀರಿನ ಸಮಸ್ಯೆ ಹೋಗಲಾಡಿಸಲು ತಾಲೂಕಿನ ಚಕ್ರನಗರದಿಂದ ಪಟ್ಟಣಕ್ಕೆ ಶುದ್ದಿಕರಿಸಿದ ನೀರಿನ ವ್ಯವಸ್ಥೆಯನ್ನು 287 ಕೋಟಿ ರೂ ವೆಚ್ಚದಲ್ಲಿ ಕಲ್ಪಿಸಲಾಗುವುದೆಂದು ತಿಳಿಸಿದರು

ಕಾಂಗ್ರೆಸ್ ಸರ್ಕಾರದ ಯೋಜನೆಗಳ ಬಗ್ಗೆ ವಿಪಕ್ಷಗಳು ಅಲ್ಲಸಲ್ಲದ ಟೀಕೆಗಳನ್ನು ಮಾಡುತ್ತಿದ್ದು ಈ ಟೀಕೆಗಳ ಬಗ್ಗೆ ಜನರು ವಿಚಲಿತರಾಗದೆ ವಿಳಂಬ ಆದರೂ ಎಲ್ಲಾ ಯೋಜನೆಗಳ ಸೌಲಭ್ಯ ರಾಜ್ಯದ ಫಲಾನುಭವಿಗಳಿಗೆ ದೊರಕಲಿದೆ ಎಂದರು ನಮ್ಮ ಸರ್ಕಾರದ ಸಾಧನೆಗಳನ್ನು ಸಹಿಸಲಾಗದೆ ವಿಪಕ್ಷಗಳವರ ಮನಸ್ಸಿಗೆ ಬಂದಂತೆ ಹೇಳಿಕೆ ನೀಡುತ್ತಿದ್ದು ಫಲಾನುಭವಿ ಗಳೇ ಇದಕ್ಕೆ ಉತ್ತರಿಸಬೇಕಾಗಿದೆ ಎಂದರು.
ಈ ಸಂದರ್ಭದಲ್ಲಿ ಶಾಸಕರು ಕಾರ್ಮಿಕ ಇಲಾಖೆ ಹಾಗೂ ಸಾಮಾಜಿಕ ಭದ್ರತೆ ಯೋಜನೆಯ ಫಲಾನುಭವಿಗಳಿಗೆ  ಸರ್ಕಾರದ ಸೌಲಭ್ಯಗಳನ್ನು ವಿತರಿಸಿದರು.

ತಹಸಿಲ್ದಾರ್ ಶ್ರೀಮತಿ ರಶ್ಮಿ ಹಾಲೇಶ್ ಪ್ರಾಥಮಿಕ ವಾಗಿ ಮಾತನಾಡಿ ಸರ್ಕಾರದ ಸೌಲಭ್ಯಗಳ ಬಗ್ಗೆ ವಿವರಿಸಿದರು.

ಸಮಾರಂಭದಲ್ಲಿ ತಾಲೂಕ್ ಪಂಚಾಯತ್ ಕಾರ್ಯ ನಿರ್ವಾಹಣಾಧಿಕಾರಿ ವೈ ನರೇಂದ್ರ ಕುಮಾರ್ , ಕ್ಷೇತ್ರ ಶಿಕ್ಷಣಾಧಿಕಾರಿ ಎಚ್ಆರ್ ಕೃಷ್ಣಮೂರ್ತಿ ಸಿಪಿಐ ಗುರಣ್ಣ ಎಸ್ ಹೆಬ್ಬಾಳ್ ಸಿಡಿಪಿಓ ಸುರೇಶ್ ಮೆಸ್ಕಾಂ ಎಇಇ ಚಂದ್ರಶೇಖರ್, ಮಲ್ಲಿಕಾರ್ಜುನ್, ಜಿಲ್ಲಾ ಯುವ ಒಕ್ಕೂಟದ ಅಧ್ಯಕ್ಷ ಮಾಸ್ತಿಕಟ್ಟೆ ಸುಬ್ರಮಣ್ಯ, ಗ್ರಾಮ ಪಂಚಾಯತ್ ಒಕ್ಕೂಟದ ಅಧ್ಯಕ್ಷ ಶ್ರೀನಿವಾಸ್ ರೆಡ್ಡಿ, ಮೆಸ್ಕಾಂ ಪಟ್ಟಣ ಪಂಚಾಯತಿ ಸದಸ್ಯರುಗಳ ವಿವಿಧ ಇಲಾಖೆ ಅಧಿಕಾರಿಗಳ ಗ್ರಾಮ ಪಂಚಾಯಿತಿಗಳ ಅಧ್ಯಕ್ಷರು ಉಪಾಧ್ಯಕ್ಷರು ಸದಸ್ಯರು ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತರು ಸಮಾವೇಶದಲ್ಲಿ ಪಾಲ್ಗೊಂಡಿದ್ದರು.

ಬಿಇಓ ಕೃಷ್ಣಮೂರ್ತಿ ಸ್ವಾಗತಿಸಿದರು ಸಿಡಿಪಿಓ ಕಚೇರಿಯ ವೀರಮ್ಮ  ವಂದಿಸಿದರು
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಈದ್ ಮಿಲಾದ್ ಹಿನ್ನೆಲೆ: ಶಿವಮೊಗ್ಗ ಜಿಲ್ಲೆಯಲ್ಲಿ ಬೈಕ್ ರ್ಯಾಲಿ, ಡಿಜೆ, ಸಿಡಿಮದ್ದು ನಿಷೇಧ – ಡಿಸಿ ಆದೇಶ

ಈದ್ ಮಿಲಾದ್ ಹಿನ್ನೆಲೆ: ಶಿವಮೊಗ್ಗ ಜಿಲ್ಲೆಯಲ್ಲಿ ಬೈಕ್ ರ್ಯಾಲಿ, ಡಿಜೆ, ಸಿಡಿಮದ್ದು ನಿಷೇಧ - ಡಿಸಿ ಆದೇಶ Shivamogga district…

13 hours ago

ದೀರ್ಘಕಾಲದಿಂದ ಗೈರುಹಾಜರಾಗಿದ್ದ ಮಕ್ಕಳನ್ನು ಶಾಲೆಗೆ ಮರಳಿ ಕರೆತರಲು ಜಾಗೃತಿ ಅಭಿಯಾನ

ದೀರ್ಘಕಾಲದಿಂದ ಗೈರುಹಾಜರಾಗಿದ್ದ ಮಕ್ಕಳನ್ನು ಶಾಲೆಗೆ ಮರಳಿ ಕರೆತರಲು ಜಾಗೃತಿ ಅಭಿಯಾನ Awareness campaign conducted by Government High School,…

14 hours ago

ದುರಾಸೆ ಗೆಲ್ಲಲಿಲ್ಲ, ಪ್ರಾಮಾಣಿಕತೆ ಸೋಲಲಿಲ್ಲ! ಚಿನ್ನದ ಸರ ಮರಳಿಸಿ ಎಲ್ಲರ ಹೃದಯ ಗೆದ್ದ ಗುರುಶಕ್ತಿ ಬಸ್ ಸಿಬ್ಬಂದಿಗಳು

ದುರಾಸೆ ಗೆಲ್ಲಲಿಲ್ಲ, ಪ್ರಾಮಾಣಿಕತೆ ಸೋಲಲಿಲ್ಲ! ಚಿನ್ನದ ಸರ ಮರಳಿಸಿ ಎಲ್ಲರ ಹೃದಯ ಗೆದ್ದ ಗುರುಶಕ್ತಿ ಬಸ್ ಸಿಬ್ಬಂದಿಗಳು Gold mangalsutra…

14 hours ago

ರಿಪ್ಪನ್ ಪೇಟೆ : ಕೂಲಿ ಕೆಲಸಕ್ಕೆಂದು ಬಂದಿದ್ದ ಬಾಲಕಿಗೆ ಕಂಟಕವಾದ ಕಾಮುಕನಿಂದ ಲೈಂಗಿಕ ದೌರ್ಜನ್ಯ, ಗರ್ಭಿಣಿ! ಆರೋಪಿಯ ಬಂಧನ

ರಿಪ್ಪನ್ ಪೇಟೆ : ಕೂಲಿ ಕೆಲಸಕ್ಕೆಂದು ಬಂದಿದ್ದ ಬಾಲಕಿಗೆ ಕಂಟಕವಾದ ಕಾಮುಕನಿಂದ , ಗರ್ಭಿಣಿ! ಆರೋಪಿಯ ಬಂಧನ A 16-year-old minor…

15 hours ago

ರಿಪ್ಪನ್‌ಪೇಟೆ ಪೊಲೀಸ್ ಜೀಪ್‌ಗೆ ಅಪರಿಚಿತ ವಾಹನ ಡಿಕ್ಕಿ: ಮರಕ್ಕೆ ಅಪ್ಪಳಿಸಿದ ಜೀಪ್, ತಪ್ಪಿದ ಭಾರಿ ಅನಾಹುತ

ರಿಪ್ಪನ್‌ಪೇಟೆ ಪೊಲೀಸ್ ಜೀಪ್‌ಗೆ ಅಪರಿಚಿತ ವಾಹನ ಡಿಕ್ಕಿ: ಮರಕ್ಕೆ ಅಪ್ಪಳಿಸಿದ ಜೀಪ್, ತಪ್ಪಿದ ಭಾರಿ ಅನಾಹುತ A major disaster…

19 hours ago

ತುಂಗಾ ನದಿಗೆ ಮೂವರು ಮಕ್ಕಳೊಂದಿಗೆ ಹಾರಿದ ತಾಯಿ : ಇಬ್ಬರು ಹೆಣ್ಣು ಮಕ್ಕಳಿಗಾಗಿ ಶೋಧ ಮುಂದುವರಿಕೆ

ತುಂಗಾ ನದಿಗೆ ಮೂವರು ಮಕ್ಕಳೊಂದಿಗೆ ಹಾರಿದ ತಾಯಿ : ಇಬ್ಬರು ಹೆಣ್ಣು ಮಕ್ಕಳಿಗಾಗಿ ಶೋಧ ಮುಂದುವರಿಕೆ Mother and three…

21 hours ago