287 ಕೋಟಿ ರೂಪಾಯಿ ವೆಚ್ಚದಲ್ಲಿ ಹೊಸನಗರಕ್ಕೆ – ಚಕ್ರಾನಗರದಿಂದ ಕುಡಿಯುವ ನೀರು ಯೋಜನೆ ಕಾರ್ಯರೂಪಕ್ಕೆ
ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶದಲ್ಲಿ ಶಾಸಕ ಬೇ ಳೂರು ಗೋಪಾಲಕೃಷ್ಣ ಘೋಷಣೆ
ಹೊಸನಗರ : ಮುಂದಿನ ವರ್ಷದಿಂದ 287 ಕೋಟಿ ರೂಪಾಯಿ ವೆಚ್ಚದಲ್ಲಿ ಹೊಸನಗರಕ್ಕೆ – ಚಕ್ರಾನಗರದಿಂದ ಕುಡಿಯುವ ನೀರು ತರುವ ಯೋಜನೆ ಕಾರ್ಯರೂಪಕ್ಕೆ ಬರಲಿದೆ ಎಂದು ಶಾಸಕ ಹಾಗೂ ರಾಜ್ಯ ಅರಣ್ಯ ಕೈಗಾರಿಕಾ ಮಂಡಳಿಯ ಅಧ್ಯಕ್ಷರಾದ ಬೇಳೂರು ಗೋಪಾಲಕೃಷ್ಣ ಹೇಳಿದರು.
ಪಟ್ಟಣದ ಈಡಿಗರ ಸಭಾಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ತಾಲೂಕ್ ಆಡಳಿತ, ತಾಲೂಕು ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ, ಮತ್ತು ಇಂಧನ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಿದ ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶವನ್ನು ಅವರು ಜ್ಯೋತಿ ಬೆಳಗುವ ಮೂಲಕ ಉದ್ಘಾಟಿಸಿ ಮಾತನಾಡಿ ರಾಜ್ಯದಲ್ಲಿ ಈ ಬಾರಿ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿದ್ದು ನೀರಿನ ಮಿತ ಬಳಕೆಯ ಮೂಲಕ ಸಮಸ್ಯೆಯನ್ನು ಸರಿ ದೂಗಿಸಬೇಕೆಂದು ಮುಂದಿನ ಬಾರಿ ಕುಡಿಯುವ ನೀರಿನ ಸಮಸ್ಯೆ ಹೋಗಲಾಡಿಸಲು ತಾಲೂಕಿನ ಚಕ್ರನಗರದಿಂದ ಪಟ್ಟಣಕ್ಕೆ ಶುದ್ದಿಕರಿಸಿದ ನೀರಿನ ವ್ಯವಸ್ಥೆಯನ್ನು 287 ಕೋಟಿ ರೂ ವೆಚ್ಚದಲ್ಲಿ ಕಲ್ಪಿಸಲಾಗುವುದೆಂದು ತಿಳಿಸಿದರು
ಕಾಂಗ್ರೆಸ್ ಸರ್ಕಾರದ ಯೋಜನೆಗಳ ಬಗ್ಗೆ ವಿಪಕ್ಷಗಳು ಅಲ್ಲಸಲ್ಲದ ಟೀಕೆಗಳನ್ನು ಮಾಡುತ್ತಿದ್ದು ಈ ಟೀಕೆಗಳ ಬಗ್ಗೆ ಜನರು ವಿಚಲಿತರಾಗದೆ ವಿಳಂಬ ಆದರೂ ಎಲ್ಲಾ ಯೋಜನೆಗಳ ಸೌಲಭ್ಯ ರಾಜ್ಯದ ಫಲಾನುಭವಿಗಳಿಗೆ ದೊರಕಲಿದೆ ಎಂದರು ನಮ್ಮ ಸರ್ಕಾರದ ಸಾಧನೆಗಳನ್ನು ಸಹಿಸಲಾಗದೆ ವಿಪಕ್ಷಗಳವರ ಮನಸ್ಸಿಗೆ ಬಂದಂತೆ ಹೇಳಿಕೆ ನೀಡುತ್ತಿದ್ದು ಫಲಾನುಭವಿ ಗಳೇ ಇದಕ್ಕೆ ಉತ್ತರಿಸಬೇಕಾಗಿದೆ ಎಂದರು.
ಈ ಸಂದರ್ಭದಲ್ಲಿ ಶಾಸಕರು ಕಾರ್ಮಿಕ ಇಲಾಖೆ ಹಾಗೂ ಸಾಮಾಜಿಕ ಭದ್ರತೆ ಯೋಜನೆಯ ಫಲಾನುಭವಿಗಳಿಗೆ ಸರ್ಕಾರದ ಸೌಲಭ್ಯಗಳನ್ನು ವಿತರಿಸಿದರು.
ತಹಸಿಲ್ದಾರ್ ಶ್ರೀಮತಿ ರಶ್ಮಿ ಹಾಲೇಶ್ ಪ್ರಾಥಮಿಕ ವಾಗಿ ಮಾತನಾಡಿ ಸರ್ಕಾರದ ಸೌಲಭ್ಯಗಳ ಬಗ್ಗೆ ವಿವರಿಸಿದರು.
ಸಮಾರಂಭದಲ್ಲಿ ತಾಲೂಕ್ ಪಂಚಾಯತ್ ಕಾರ್ಯ ನಿರ್ವಾಹಣಾಧಿಕಾರಿ ವೈ ನರೇಂದ್ರ ಕುಮಾರ್ , ಕ್ಷೇತ್ರ ಶಿಕ್ಷಣಾಧಿಕಾರಿ ಎಚ್ಆರ್ ಕೃಷ್ಣಮೂರ್ತಿ ಸಿಪಿಐ ಗುರಣ್ಣ ಎಸ್ ಹೆಬ್ಬಾಳ್ ಸಿಡಿಪಿಓ ಸುರೇಶ್ ಮೆಸ್ಕಾಂ ಎಇಇ ಚಂದ್ರಶೇಖರ್, ಮಲ್ಲಿಕಾರ್ಜುನ್, ಜಿಲ್ಲಾ ಯುವ ಒಕ್ಕೂಟದ ಅಧ್ಯಕ್ಷ ಮಾಸ್ತಿಕಟ್ಟೆ ಸುಬ್ರಮಣ್ಯ, ಗ್ರಾಮ ಪಂಚಾಯತ್ ಒಕ್ಕೂಟದ ಅಧ್ಯಕ್ಷ ಶ್ರೀನಿವಾಸ್ ರೆಡ್ಡಿ, ಮೆಸ್ಕಾಂ ಪಟ್ಟಣ ಪಂಚಾಯತಿ ಸದಸ್ಯರುಗಳ ವಿವಿಧ ಇಲಾಖೆ ಅಧಿಕಾರಿಗಳ ಗ್ರಾಮ ಪಂಚಾಯಿತಿಗಳ ಅಧ್ಯಕ್ಷರು ಉಪಾಧ್ಯಕ್ಷರು ಸದಸ್ಯರು ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತರು ಸಮಾವೇಶದಲ್ಲಿ ಪಾಲ್ಗೊಂಡಿದ್ದರು.
ಬಿಇಓ ಕೃಷ್ಣಮೂರ್ತಿ ಸ್ವಾಗತಿಸಿದರು ಸಿಡಿಪಿಓ ಕಚೇರಿಯ ವೀರಮ್ಮ ವಂದಿಸಿದರು