ಖಾಸಗಿ ಶಾಲಾ ಬಸ್ ಪಲ್ಟಿ – ವಿದ್ಯಾರ್ಥಿಗಳಿಗೆ ಗಂಭೀರ ಗಾಯ!
ಓವರ್ ಟೇಕ್ ಮಾಡುವ ವೇಳೆ ಕಾರು ಅಡ್ಡಾದಿಡ್ಡಿ ಚಲಿಸಿದ ಪರಿಣಾಮ ಖಾಸಗಿ ಶಾಲೆ ಬಸ್ ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿ ವಿದ್ಯಾರ್ಥಿಗಳು ಗಾಯಗೊಂಡಿರುವ ದುರ್ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಬೈಪಾಸ್ ರಸ್ತೆಯಲ್ಲಿ ನಡೆದಿದೆ.
ಈ ವೇಳೆ ಕಾರಿನ ಚಾಲಕ ಓವರ್ ಟೇಕ್ ಮಾಡುವ ಭರದಲ್ಲಿ ಅಡ್ಡಾದಿಡ್ಡಿ ಚಲಿಸಿದ್ದಾನೆ. ಇದರಿಂದ ಗೊಂದಲಕ್ಕೀಡಾಗಿ ಖಾಸಗಿ ಶಾಲಾ ಬಸ್ ಚಾಲಕ ನಿಯಂತ್ರಣ ಕಳೆದುಕೊಂಡಿದ್ದಾನೆ. ಮುಗ್ಗರಿಸಿ ಬಿದ್ದ ಬಸ್ನೊಳಗೆ ಚಿಕ್ಕಮಕ್ಕಳು ತಲೆ ಕಾಲುಗಳಿಗೆ ಪೆಟ್ಟುಬಿದ್ದಿದೆ.
ಘಟನೆ ಬಳಿಕ ತಕ್ಷಣವೇ ಮಕ್ಕಳನ್ನು ಸಮೀಪದ ದುರ್ಗ ಕ್ಲಿನಿಕ್ಗೆ ದಾಖಲಿಸಿ ರಕ್ಷಣೆ ಮಾಡಿದ ಸ್ಥಳೀಯರು. ಅಪಘಾತ ಸುದ್ದಿ ತಿಳಿದು ಆಸ್ಪತ್ರೆಗೆ ದೌಡಾಯಿಸಿ ಮಕ್ಕಳ ಪೋಷಕರು ಮಕ್ಕಳ ಸ್ಥಿತಿ ಕಂಡು ಕಣ್ಣೀರು ಹಾಕಿದ್ದಾರೆ. ಸದ್ಯ ಭದ್ರಾವತಿ ನ್ಯೂಟೌನ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್