NDPS ಕಾಯ್ದೆ ಅಡಿ ವಶಪಡಿಸಿಕೊಂಡಿದ್ದ 13,16,400 ರೂ. ಮೌಲ್ಯದ 34 ಕೆ.ಜಿ. 825 ಗ್ರಾಂ ಗಾಂಜಾ ಸೊಪ್ಪು ನಾಶ
ಶಿವಮೊಗ್ಗ : ಕಳೆದ 6 ತಿಂಗಳಲ್ಲಿ ನಡೆದ ಗಾಂಜಾ ದಾಳಿಯಲ್ಲಿ ಪತ್ತೆಯಾದ ಒಟ್ಟು 34 ಕೆ.ಜಿ 825 ಗ್ರಾಂ ಒಣ ಗಾಂಜಾವನ್ನ ಇಂದು ಮಾಚೇನಹಳ್ಳಿಯ ಕೈಗಾರಿಕಾ ಪ್ರದೇಶದಲ್ಲಿ ಎಸ್ಪಿ ಮಿಥುನ್ ಕುಮಾರ್ ಜಿ.ಕೆ ಸಮ್ಮುಖದಲ್ಲಿ ನಾಶ ಪಡಿಸಲಾಯಿತು.
ಜಿಲ್ಲೆಯಾದ್ಯಂತ 42 ಎನ್ ಡಿ ಪಿ ಎಸ್ ಪ್ರಕರಣಗಳು ದಾಖಲಾಗಿದ್ದು ಈ ವೇಳೆ ಸಂಗ್ರಹಿಸಲಾದ ಗಾಂಜಾವನ್ನ ಬೆಂಕಿಗೆ ಹಾಕಿ ಸುಡಲಾಯಿತು. ಶಿವಮೊಗ್ಗ ಜಿಲ್ಲೆಯಾದ್ಯಂತ ಮಾದಕ ವಸ್ತು ಗಾಂಜಾ ಮಾರಾಟ, ಸಾಗಟ, ಸಂಗ್ರಹಣೆ ಮತ್ತು ಬೆಳೆಯುವವರ ವಿರುದ್ಧ ನಿರ್ದಾಕ್ಷಿಣ್ಯ ಮತ್ತು ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ.
ಶಿವಮೊಗ್ಗ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಈ ಹಿಂದೆ ದಾಖಲಾದ ಒಟ್ಟು 42 NDPS ಪ್ರಕರಣಗಳಲ್ಲಿ ಅಮಾನತ್ತು ಪಡಿಸಿಕೊಳ್ಳಲಾದ ಅಂದಾಜು ಮೌಲ್ಯ 13,16,400/- ರೂಗಳ ಒಟ್ಟು 34 ಕೆಜಿ 825 ಗ್ರಾಂ ತೂಕದ ಮಾದಕ ವಸ್ತು ಗಾಂಜಾವನ್ನು, ಇಂದು ಬೆಳಿಗ್ಗೆ ಮೇ|| ಶುಶ್ರುತ ಬಯೋ ಮೆಡಿಕಲ್ ವೇಸ್ಟ್ ಮ್ಯಾನೇಜ್ ಮೆಂಟ್ ಸೊಸೈಟಿ (ರಿ) ಕೈಗಾರಿಕಾ ಪ್ರದೇಶ ಮಾಚೇನಹಳ್ಳಿಯಲ್ಲಿ ಶಿವಮೊಗ್ಗ ಜಿಲ್ಲಾ ಮಾದಕ ವಸ್ತು ವಿಲೇವಾರಿ ಸಮಿತಿಯ ಅಧ್ಯಕ್ಷರಾದ ಮಿಥುನ್ ಕುಮಾರ್ ಜಿ.ಕೆ. ಐಪಿಎಸ್, ಮಾನ್ಯ ಪೊಲೀಸ್ ಅಧೀಕ್ಷಕರು ಶಿವಮೊಗ್ಗ ರವರ ಸಮ್ಮುಖದಲ್ಲಿ ನಾಶ ಪಡಿಸಲಾಯಿತು.
ಈ ಸಂದರ್ಭದಲ್ಲಿ ಅಡಿಷನಲ್ ಎಸ್ಪಿ ಅನಿಲ್ ಕುಮಾರ್ ಭೂಮರಡ್ಡಿ, ಎ ಜಿ ಕಾರ್ಯಪ್ಪ, ಶಿವಮೊಗ್ಗ ಜಿಲ್ಲೆ, ಡಾ|| ಗಿರೀಶ್ ಸಿ. ಎಸ್, ಅಧ್ಯಕ್ಷರು ಹಾಗೂ ಕಾರ್ಯದರ್ಶಿಗಳು, ಮೇ|| ಶುಶ್ರುತ ಬಯೋ ಮೆಡಿಕಲ್ ವೇಸ್ಟ್ ಮ್ಯಾನೇಜ್ ಮೆಂಟ್ ಪ್ರೈವೇಟ್ ಲಿಮಿಟೆಡ್ ಸೊಸೈಟಿ (ರಿ), ಡಾ|| ಹರೀಶ್ ದೆಲಂತ ಬೆಟ್ಟು, ಮೇ|| ಶುಶ್ರುತ ಬಯೋ ಮೆಡಿಕಲ್ ವೇಸ್ಟ್ ಮ್ಯಾನೇಜ್ ಮೆಂಟ್ ಪ್ರೈವೇಟ್ ಲಿಮಿಟೆಡ್ ಸೊಸೈಟಿ (ರಿ), ಡಿವೈಎಸ್ಪಿಗಳಾದ ಬಾಬು ಆಂಜನಪ್ಪ, , ಸುರೇಶ್ ಎಂ ಮತ್ತು ವಿನಾಯಕ್ ಬಿ ಆರ್, ಕ್ಷೇತ್ರ ಸಹಾಯಕರು, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಶಿವಮೊಗ್ಗ ರವರು ಉಪಸ್ಥಿತರಿದ್ದರು.
ಮಾದಕ ವಸ್ತು ಗಾಂಜಾ ಮಾರಾಟ, ಸಾಗಟ, ಸಂಗ್ರಹಣೆ ಮತ್ತು ಬೆಳೆಯುವವರ ವಿರುದ್ಧ ಪೊಲೀಸ್ ಇಲಾಖೆಯಿಂದ ನಿರ್ದಾಕ್ಷಿಣ್ಯ ಮತ್ತು ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದ್ದು, ಗಾಂಜಾ ಮಾರಾಟ, ಸಾಗಟ, ಸಂಗ್ರಹಣೆ ಮತ್ತು ಬೆಳೆಯುವ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ತಿಳಿದುಬಂದಲ್ಲಿ, ಪೊಲೀಸ್ ಇಲಾಖೆಗೆ ಮಾಹಿತಿಯನ್ನು ನೀಡಿ ಸಹಕರಿಸಿ, ಮಾಹಿತಿ ನೀಡಿದವರ ವಿವರವನ್ನು ಗೌಪ್ಯವಾಗಿಡಲಾಗುವುದು ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್