ಶಿವಮೊಗ್ಗದಲ್ಲಿ ರೌಡಿಗಳಿಂದ ಟ್ರಾಫಿಕ್ ಪೊಲೀಸರಿಗೇ ಕೊಲೆ ಬೆದರಿಕೆ – ಇಬ್ಬರ ಬಂಧನ | ವೀಡಿಯೋ ವೈರಲ್ SMG
ಸಾರ್ವಜನಿಕವಾಗಿ ರೌಡಿ ಪಟಾಲಂಗಳು ಶಿವಮೊಗ್ಗದಲ್ಲಿ ಮತ್ತೆ ಗರಿಬಿಚ್ಚಿದ್ದು, ಹಾಡಹಗಲೇ, ಅದರಲ್ಲೂ ಪೊಲೀಸ್ ಸಿಬ್ಭಂದಿ ಮೇಲೆ ಮರ್ಡರ್ ಬೆದರಿಕೆ, ಅವಾಚ್ಯವಾಗಿ ಬೈದು ಧಮ್ಕಿ ಹಾಕಿರುವ ಘಟನೆ ಸದ್ಯ ಮಲೆನಾಡಿನಲ್ಲಿ ಸಂಚಲನ ಮೂಡಿಸಿದೆ. ಶಿವಮೊಗ್ಗದಲ್ಲಿ ಟ್ರಾಫಿಕ್ ಪೊಲೀಸರಿಗೇ ಅವಾಜ್ ಹಾಕಲಾಗಿದೆ. ನಟೋರಿಯಸ್ ಹಿನ್ನೆಲೆಯುಳ್ಳ ಪುಡಾರಿಗಳು, ಟ್ರಾಫಿಕ್ ಪೊಲೀಸರು ಹಿಡಿಯುತ್ತಾರೆ ಅಂತಾ ತಾವೇ ಬೈಕಿನಲ್ಲಿ ಬಿದ್ದು, ತಾವೇ ವಿಡಿಯೋ ಮಾಡಿ ತಗಲಾಕಿಕೊಂಡಿದ್ದಾರೆ. ಟ್ರಾಫಿಕ್ ಪೊಲೀಸ್ ಸಿಬ್ಭಂಧಿಗೆ ಪ್ರಾಣ ಬೆದರಿಕೆ ಒಡ್ಡಿರುವ ರೌಡಿ ಶೀಟರ್ ಗಳು, ತಮ್ಮ ಹುಡುಗರನ್ನು ಕರೆಸಿ, ಹಲ್ಲೆ ಮಾಡಲು…