Ripponpete | ಜಗತ್ತಿನ ಪ್ರತಿಯೊಬ್ಬರು ನೆಮ್ಮದಿಯ ಬದುಕನ್ನು ಕಂಡುಕೊಳ್ಳಬೇಕು :ಡಾ.ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಜಿ

ಜಗತ್ತಿನ ಪ್ರತಿಯೊಬ್ಬರು ನೆಮ್ಮದಿಯ ಬದುಕನ್ನು ಕಂಡುಕೊಳ್ಳಬೇಕು ’’:ಡಾ.ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಜಿ
ರಿಪ್ಪನ್‌ಪೇಟೆ;-  ದುರ್ಗುಣಗಳು ದೂರವಾಗಿ ಸದ್ಗುಣಗಳು ಸರ್ವರಲ್ಲಿ ಪ್ರಾಪ್ತಿಯಾದಾಗ ಮಾತ್ರ ಜಗತ್ತಿನ  ಪ್ರತಿಯೊಬ್ಬರು  ನೆಮ್ಮದಿಯ ಬದುಕನ್ನು ಕಂಡುಕೊಳ್ಳಲು  ಸಾಧ್ಯ.ಜೀವನವನ್ನು ಹಿಂದೆ ನೋಡಿ ತಿಳಿದುಕೊಳ್ಳಬೇಕು.ಮುಂದೆ ನೋಡಿ ಬದುಕಬೇಕು ಎಂದು ಮಳಲಿಮಠದ ಡಾ.ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಜಿ ಹೇಳಿದರು.

ರಿಪ್ಪನ್‌ಪೇಟೆ ಸಮೀಪದ ಮಸರೂರು ಗ್ರಾಮದ ಶ್ರೀವೀರಭದ್ರಸ್ವಾಮಿ ಸೇವಾ ಸಮಿತಿಯರು ಆ ಯೋಜಿಸಲಾದ ಇಷ್ಟಲಿಂಗ ರುದ್ರಾಭಿಷೇಕ ಹಾಗೂ ಅರ್ಚನೆಯ  ಪ್ರಯುಕ್ತವಾಗಿ ಹಮ್ಮಿಕೊಂಡ ಧರ್ಮಸಮಾರಂಭದ ಸಾನಿಧ್ಯವನ್ನು ವಹಿಸಿ ಆಶೀರ್ವಚನ ನೀಡಿದ ಅವರು ಮುಖದಲ್ಲಿ ನಗುವಿರಲಿ.ಹೃದಯದಲ್ಲಿ ಪ್ರೀತಿ ಇರಲಿ ,ಜೀವನದಲ್ಲಿ ಒಂದು ಗುರಿ ಇರಲಿ.ಆ ಗುರಿಯನ್ನು ಮುಟ್ಟಲು ಸಮರ್ಥ ಗುರುವನ್ನು ಹೊಂದಿರಬೇಕು ಎಂದು ತಿಳಿಸಿದ ಅವರು ಶ್ರೀ ವೀರಭದ್ರ ಮಹಾಸ್ವಾಮಿಯ ದುಷ್ಟರ ಸಂಹಾರಕನಾಗಿ ಶ್ರೇಷ್ಟರ ಪರಿಪಾಲಕನಾಗಿದ್ದಾನೆ.ಅಂತಹ ಮಹಿಮಾಶಾಲಿಯ ಕೃಪೆಯಿಂದ ದುರ್ಗುಣಗಳು ದೂರವಾಗಿ ಸದ್ಗುಣಗಳು ಸರ್ವರಲ್ಲಿ ಪ್ರಾಪ್ತವಾಗಲೆಂದು ಆಶಿಸಿದರು.

ಅನುಭವಿಗಳ ಮಾತಿನಂತೆ ಸಂಬಂಧಗಳಿಗೆಂದೂ ಸಹಜ ಸಾವಿಲ್ಲ,ತಿಳುವಳಿಕೆಯ ಕೊರತೆ.ಪ್ರತಿಷ್ಠೆಗಳೇ  ಅವುಗಳನ್ನು ಕೊಲ್ಲುತ್ತವೆ.ಅದ್ದರಿಂದ ಗುರುಹಿರಿಯರ ಮಾತಾಪಿತೃಗಳ ಮಾರ್ಗದರ್ಶನದಲ್ಲಿ ಜೀವನವನ್ನು ಸಾಗಿಸುವುದ ಜೊತೆಗೆ ಶ್ರೀ ಜಗದ್ಗುರು ರೇಣುಕ ಭಗವತ್ಪಾದರ ದಶಧರ್ಮ ಸೂತ್ರಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡು ಪಾವನವಾದ ಮಾನವ ಜನ್ಮದ ಶ್ರೇಷ್ಠತೆಯನ್ನು ಹೆಚ್ಚಿಸಿಕೊಳ್ಳಬೇಕೆಂದರು.

ಧರ್ಮ ಸಮಾರಂಭದ  ಅಧ್ಯಕ್ಷತೆಯನ್ನು ಮಸರೂರು ಗ್ರಾಮದ ಶ್ರೀವೀರಭದ್ರಸ್ವಾಮಿ ಸೇವಾ ಸಮಿತಿಯ ಅಧ್ಯಕ್ಷ ಪುಟ್ಟಸ್ವಾಮಿಗೌಡ ಕಗ್ಗಲಿ ವಹಿಸಿದ್ದರು.

ಸಭೆಯಲ್ಲಿ  ಎಂ.ಬಿ.ಗಣೇಶ ಗೌಡ,ಕುಣೆಹೊಸೂರು ಕುಮಾರಗೌಡ,ಮಸರೂರು ಎಂ.ಆರ್.ಮುರುಗೇಶಪ್ಪಗೌಡ ಉಪಸ್ಥಿತರಿದ್ದರು.
ಸುಧಾಕರ ಬೆನವಳ್ಳಿ ಸ್ವಾಗತಿಸಿದರು.

ಕಗ್ಗಲಿ ಪ್ರಕಾಶ ಕಾರ್ಯಕ್ರಮ ನಿರೂಪಿಸಿದರು,ಕೆಂಚನಾಲ ಗಣೇಶ್ ವಂದಿಸಿದರು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಸರ್ಕಾರಿ ಜಾಗದಲ್ಲಿ ಖಾಸಗಿ ಬೇಲಿ; ಕಂದಾಯ ಅಧಿಕಾರಿಗಳಿಂದ ತೆರವು – ಹಕ್ಕುಪತ್ರ–9/11 ದಾಖಲೆ ಕುರಿತು ವಾಗ್ವಾದ

ರಿಪ್ಪನ್ ಪೇಟೆಯಲ್ಲಿ ಸರ್ಕಾರಿ ಜಾಗದ ಬೇಲಿ ತೆರವು; ಹಕ್ಕುಪತ್ರ–9/11 ದಾಖಲೆ ಕುರಿತು ವಾಗ್ವಾದ Revenue officials removed a fence…

1 hour ago

ರಿಪ್ಪನ್‌ಪೇಟೆಯಲ್ಲಿ ಮೋದಿ ಜನ್ಮದಿನಾಚರಣೆ : ವರಸಿದ್ದಿವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ

ರಿಪ್ಪನ್‌ಪೇಟೆಯಲ್ಲಿ ಮೋದಿ ಜನ್ಮದಿನಾಚರಣೆ : ವರಸಿದ್ದಿವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ Special pooja was offered at Varasiddhi…

21 hours ago

ಪ್ರಧಾನಿ ಮೋದಿ ಜನ್ಮದಿನ: ಶಿವಮೊಗ್ಗದಲ್ಲಿ ‘ಸೇವಾ ಸಂಕಲ್ಪ ಅಭಿಯಾನ’ಕ್ಕೆ ಚಾಲನೆ

ಪ್ರಧಾನಿ ಮೋದಿ ಜನ್ಮದಿನ: ಶಿವಮೊಗ್ಗದಲ್ಲಿ ‘ಸೇವಾ ಸಂಕಲ್ಪ ಅಭಿಯಾನ’ಕ್ಕೆ ಚಾಲನೆ BJP launches a month-long Seva Sankalpa Abhiyan…

22 hours ago

ಮೋದಿ ಹುಟ್ಟುಹಬ್ಬ ‘ನಿರುದ್ಯೋಗಿಗಳ ದಿನ’ವಾಗಿ ಆಚರಣೆ; ಯುವ ಕಾಂಗ್ರೆಸ್ ಪ್ರತಿಭಟನೆ

ಮೋದಿ ಹುಟ್ಟುಹಬ್ಬ ‘ನಿರುದ್ಯೋಗಿಗಳ ದಿನ’ವಾಗಿ ಆಚರಣೆ; ಯುವ ಕಾಂಗ್ರೆಸ್ ಪ್ರತಿಭಟನೆ Youth Congress and NSUI workers in Shivamogga…

22 hours ago

ಶಿವಮೊಗ್ಗ ಲೋಕಾಯುಕ್ತ ಎಸ್‌ಪಿಯಾಗಿ ಆಂಟನಿ ಜಾನ್ ನೇಮಕ

ಶಿವಮೊಗ್ಗ ಲೋಕಾಯುಕ್ತ ಎಸ್‌ಪಿಯಾಗಿ ಆಂಟನಿ ಜಾನ್ ನೇಮಕ Anthony John has been appointed as the new Lokayukta…

22 hours ago

ಕಡವೆ ಬೇಟೆ ಮಾಡಿ ಮಾಂಸ ಕತ್ತರಿಸುತ್ತಿದ್ದಾಗಲೇ ದಾಳಿ! ಮೂವರ ಬಂಧನ | 70 ಕೆ.ಜಿ. ಮಾಂಸ , ಬಂದೂಕು ಜಪ್ತಿ

ಕಡವೆ ಬೇಟೆ ಮಾಡಿ ಮಾಂಸ ಕತ್ತರಿಸುತ್ತಿದ್ದಾಗಲೇ ದಾಳಿ! ಮೂವರ ಬಂಧನ | 70 ಕೆ.ಜಿ. ಮಾಂಸ , ಬಂದೂಕು ಜಪ್ತಿ…

1 day ago