Ripponpete | ಪೊಲೀಸರ ಭರ್ಜರಿ ಕಾರ್ಯಾಚರಣೆ – ಅಕ್ರಮ ಮರಳು ಸಾಗಿಸುತಿದ್ದ ಮೂರು ಟಿಪ್ಪರ್ ಲಾರಿ ವಶಕ್ಕೆ..!
ರಿಪ್ಪನ್ಪೇಟೆ : ಮಲೆನಾಡು ಭಾಗದಲ್ಲಿ ಅಕ್ರಮ ಮರಳು ಮಾಫ಼ಿಯಾದ ಹೆಡೆಮುರಿ ಕಟ್ಟುವಲ್ಲಿ ಪಟ್ಟಣದ ಪೊಲೀಸ್ ಪಿಎಸ್ ಐ ಪ್ರವೀಣ್ ಎಸ್ ಪಿ ನೇತ್ರತ್ವದ ತಂಡ ಯಶಸ್ವಿಯಾಗಿದ್ದಾರೆ.
ಖಚಿತ ಮಾಹಿತಿ ದೊರೆತ ಹಿನ್ನಲೆಯಲ್ಲಿ ಬುಧವಾರ ರಾತ್ರಿ ಪಟ್ಟಣದ ಪಿಎಸ್ ಪ್ರವೀಣ್ ಎಸ್ ಪಿ ನೇತ್ರತ್ವದ ತಂಡ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಅಕ್ರಮ ಮರಳು ಸಾಗಿಸುತಿದ್ದ ಮೂರು ಟಿಪ್ಪರ್ ಲಾರಿಯನ್ನು ವಶಕ್ಕೆ ಪಡೆದಿದ್ದಾರೆ.
ವೀಡಿಯೋ ಇಲ್ಲಿ ವೀಕ್ಷಿಸಿ
ರಿಪ್ಪನ್ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಕ್ರಮವಾಗಿ ಮರಳು ಸಾಗಿಸುತಿದ್ದ ಮೂರು ಟಿಪ್ಪರ್ ಲಾರಿಯನ್ನು ವಶಕ್ಕೆ ಪಡೆದಿದ್ದಾರೆ.
ಅಕ್ರಮ ಮರಳು ತುಂಬಿಕೊಂಡು ಕೋಡೂರು ಮಾರ್ಗವಾಗಿ ಸಾಗಿಸುತ್ತಿರುವ ಖಚಿತ ಮಾಹಿತಿ ದೊರೆತ ಹಿನ್ನಲೆಯಲ್ಲಿ ದಾಳಿ ನಡೆಸಿ ಮೂರು ಟಿಪ್ಪರ್ ವಾಹನ ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದಾರೆ.
ಕಾರ್ಯಾಚರಣೆಯಲ್ಲಿ ಹೆಚ್ ಸಿ ಉಮೇಶ್, ಶಿವಕುಮಾರ್ ನಾಯ್ಕ್ ಹಾಗೂ ಮಧುಸೂಧನ್ ಇದ್ದರು.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್