w
Headlines
Home » Ripponpete | ವಡಗೆರೆ ಬಳಿ ಟೋಯಿಂಗ್ ವಾಹನ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಬೈಕ್ ಸವಾರ ಗಂಭೀರ

Ripponpete | ವಡಗೆರೆ ಬಳಿ ಟೋಯಿಂಗ್ ವಾಹನ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಬೈಕ್ ಸವಾರ ಗಂಭೀರ

Ripponpete | ಟೋಯಿಂಗ್ ವಾಹನ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಬೈಕ್ ಸವಾರ ಗಂಭೀರ


ರಿಪ್ಪನ್ ಪೇಟೆ : ಇಲ್ಲಿನ ಸಾಗರ ರಸ್ತೆಯ ವಡಗೆರೆ ಬಳಿ ಬೈಕ್ ಹಾಗೂ ಟೋಯಿಂಗ್ ವಾಹನ (ಟಾಟಾ 207) ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ.


ರಿಪ್ಪನ್‌ಪೇಟೆ ಕಡೆಯಿಂದ ಆನಂದಪುರಕ್ಕೆ ತೆರಳುತಿದ್ದ ಬೈಕ್ ಹಾಗೂ ಆನಂದಪುರ ಕಡೆಯಿಂದ ರಿಪ್ಪನ್‌ಪೇಟೆ ಕಡೆಗೆ ಬರುತಿದ್ದ ಟೋಯಿಂಗ್ (ಟಾಟಾ 207) ವಾಹನದ ನಡುವೆ ವಡಗೆರೆ ಸಮೀಪದಲ್ಲಿ ಮುಖಾಮುಖಿ ಡಿಕ್ಕಿಯಾಗಿದೆ.

ಈ ರಸ್ತೆ ಅಪಘಾತದಲ್ಲಿ ಪಟ್ಟಣದ ಸಮೀಪದ ಆನಂದಪುರದ ಯಡೆಹಳ್ಳಿ ಗ್ರಾಮದ ಕೃಷ್ಣಪ್ಪ ಬಿನ್ ಲಕ್ಷ್ಮಣಪ್ಪ ಎಂಬ ವ್ಯಕ್ತಿಯ ತಲೆಗೆ ಹಾಗೂ ಕಾಲಿಗೆ ತೀವ್ರವಾದ ಪೆಟ್ಟಾಗಿದ್ದು ಕಾಲು ಮುರಿದು ಸ್ಥಿತಿ ಗಂಭೀರವಾಗಿದೆ.

ಗಾಯಾಳುವನ್ನು ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ನೀಡಿ ಶಿವಮೊಗ್ಗಕ್ಕೆ ರವಾನಿಸಲಾಗಿದೆ.


ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.