w
Headlines
Home » Ripponpete | ವಡಗೆರೆಯ ಶ್ರೀತುಳಜಾಭವಾನಿ ದೇವಸ್ಥಾನದ ಪ್ರತಿಷ್ಠಾ ವರ್ಧಂತ್ಯುತ್ಸವ

Ripponpete | ವಡಗೆರೆಯ ಶ್ರೀತುಳಜಾಭವಾನಿ ದೇವಸ್ಥಾನದ ಪ್ರತಿಷ್ಠಾ ವರ್ಧಂತ್ಯುತ್ಸವ

ripponpete | ವಡಗೆರೆಯ ಶ್ರೀ ತುಳಜಾಭವಾನಿ ದೇವಸ್ಥಾನದ ಪ್ರತಿಷ್ಠಾ ವರ್ಧಂತ್ಯುತ್ಸವ


ರಿಪ್ಪನ್‌ಪೇಟೆ;-ಇಲ್ಲಿಗೆ ಸಮೀಪದ ವಡಗೆರೆ ಶ್ರೀ ತುಳುಜಾಭವಾನಿ ದೇವಸ್ಥಾನ ಸೇವಾ ಸಮಿತಿ ಇವರು ದೇವಸ್ಥಾನದ ಏಳನೇ ವರ್ಷದ ಶ್ರೀ ತುಳಜಾಭವಾನಿ ದೇವಸ್ಥಾನದ ಪ್ರತಿಷ್ಠಾ ವರ್ಧಂತ್ಯುತ್ಸವ ಕಾರ್ಯಕ್ರಮವನ್ನು ಫೆಬ್ರವರಿ 20 ರಂದು ಮಂಗಳವಾರ ಅಯೋಜಿಸಲಾಗಿದೆ ಎಂದು ದೇವಸ್ಥಾನ ಸೇವಾ ಸಮಿತಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಫಬ್ರವರಿ 20 ರಂದು ಮಂಗಳವಾರ ಬೆಳಗ್ಗೆ 8 ಗಂಟೆಗೆ ಶ್ರೀ ದೇವಿಗೆ ಕಲಾತತ್ವದಿವಾಸ ಹೋಮ ಶ್ರೀ ದುರ್ಗಾ ಹೋಮ ಕಲಶಾಭಿಷೇಕ ಮಹಾಪೂಜೆ ಮಹಾಮಂಗಳಾರತಿ ಪ್ರಸಾದ ವಿತರಣೆ ಹಾಗೂ ಸಾಮೂಹಿಕ ಅನ್ನಸಂತಪ್ಣೆ ಜರುಗಲಿದೆ.

ಸಂಜೆ 6 ಗಂಟೆಗೆ ಧಾರ್ಮಿಕ ಸಮಾರಂಭ ಅನಂದಪುರA ಮುರುಘಾಮಠದ ಜಗದ್ಗುರು ಡಾ.ಮಲ್ಲಿಕಾರ್ಜುನ ಮುರುಘಾರಾಜೇಂದ್ರ ಮಹಾಸ್ವಾಮಿಜಿಯವರು ದಿವ್ಯ ಸಾನಿಧ್ಯವಹಿಸಿ ಆಶೀರ್ವಚನ ನೀಡುವರು.

ಧಾರ್ಮಿಕ ಸಭೆಯ ಅಧ್ಯಕ್ಷತೆಯನ್ನು ಶ್ರೀತುಳಜಾಭವಾನಿ ದೇವಸ್ಥಾನ ಸೇವಾ ಸಮಿತಿ ಅಧ್ಯಕ್ಷ ವೈ.ಸುರೇಶ್‌ಸಿಂಗ್ ವಹಿಸುವರು.

ಇದೇ ದಿನ ರಾತ್ರಿ 8 ಗಂಟೆಗೆ ಶ್ರೀಕ್ಷೇತ್ರ ಅಲಸೆ ಶ್ರೀನಾಗೇಶ್ವರಿ ಶ್ರೀಸುಬ್ರಹ್ಮಣ್ಯ ಕೃಪಾಶ್ರಿತ ಯಕ್ಷಗಾನ ಮೆಳ ಇವರಿಂದ “ನಾಗಕಾರುಣ್ಯ’’ ಎಂಬ ಪೌರಾಣಿಕ ಕಾಲಮಿತ ಯಕ್ಷಗಾನ ಪ್ರದರ್ಶನ ಜರುಗಲಿದೆ  ಎಂದು ದೇವಸ್ಥಾನ ಸೇವಾ ಸಮಿತಿಯ ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.