w
Headlines
Home » Shivamogga | ಹುಂಡೈ ಕಾರು ಶೋರೂಂಗೆ ಆಕಸ್ಮಿಕ ಬೆಂಕಿ – ಮೂರು ಕಾರು ಸಂಪೂರ್ಣ ಸುಟ್ಟು ಭಸ್ಮ, 7 ಕಾರುಗಳಿಗೆ ಭಾಗಶಃ ಹಾನಿ

Shivamogga | ಹುಂಡೈ ಕಾರು ಶೋರೂಂಗೆ ಆಕಸ್ಮಿಕ ಬೆಂಕಿ – ಮೂರು ಕಾರು ಸಂಪೂರ್ಣ ಸುಟ್ಟು ಭಸ್ಮ, 7 ಕಾರುಗಳಿಗೆ ಭಾಗಶಃ ಹಾನಿ

Shivamogga | ಹುಂಡೈ ಕಾರು ಶೋರೂಂಗೆ ಆಕಸ್ಮಿಕ ಬೆಂಕಿ – ಮೂರು ಕಾರು ಸಂಪೂರ್ಣ ಸುಟ್ಟು ಭಸ್ಮ, 7 ಕಾರುಗಳಿಗೆ ಭಾಗಶಃ ಹಾನಿ


ಶಿವಮೊಗ್ಗ (Shivamogga) ನಗರದ ಶಂಕರಮಠದಲ್ಲಿರುವ ರಾಹುಲ್ ಹುಂಡೈ ಕಾರು ಶೋ ರೂಂನಲ್ಲಿ ಶುಕ್ರವಾರ ರಾತ್ರಿ ಸುಮಾರು 8 ಗಂಟೆಗೆ ಆಕಸ್ಮಿಕ ಬೆಂಕಿ ಅವಘಡ ನಡೆದಿದೆ. ಕಾರು ಶೋ ರೂಂ ಸಂಪೂರ್ಣ ವಾಲ್ ಸೀಲಿಂಗ್​ನಿಂದ ಮಾಡಿದ್ದಾಗಿದ್ದರಿಂದ ಬೆಂಕಿ ಕೆನ್ನಾಲಿಗೆಗೆ ಶೋರೂಂನ ಮುಂಭಾಗ ಸಂಪೂರ್ಣ ಸುಟ್ಟು ಕರಕಲಾಗಿದೆ. ಅಲ್ಲದೇ ಬೆಂಕಿಯು ಶೋ ರೂಂನ ಮೇಲ್ಭಾಗ ಸೇರಿದಂತೆ ನೆಲಮಹಡಿಗೂ ಆವರಿಸಿದ್ದು, ಇದರಿಂದ ಶೋ ರೂಂನಲ್ಲಿ ಡಿಸ್ಪ್ಲೇ ಗೆಂದು ಇಟ್ಟಿದ್ದ 6 ಕಾರುಗಳಲ್ಲಿ 3 ಕಾರುಗಳು ಸಂಪೂರ್ಣ ಸುಟ್ಟು ಹೋಗಿವೆ.


ಸರ್ವೀಸ್​ಗೆ ಎಂದು ಇಟ್ಟಿದ್ದ ಕಾರುಗಳು ಹಾಗೂ ಪಕ್ಕದ ಟಾಟಾ ಶೋ ರೂಂನ ಹೊರಭಾಗದಲ್ಲಿದ್ದ ನಾಲ್ಕರಿಂದ – ಐದು ಕಾರುಗಳು ಸಹ ಬೆಂಕಿ ಕೆನ್ನಾಲಿಗೆಗೆ ಸಿಲುಕಿ ಭಾಗಶಃ ಹಾನಿಯಾಗಿವೆ. ಅಲ್ಲದೇ ನೆಲ ಮಾಳಿಗೆಯಲ್ಲಿ ಇಟ್ಟಿದ್ದ ಕಾರಿನ ಬಿಡಿ ಭಾಗಗಳು ಸುಟ್ಟು ಭಸ್ಮವಾಗಿವೆ.


ಶೋ ರೂಂಗೆ ಹೇಗೆ ಬೆಂಕಿ ಬಿತ್ತು ಎನ್ನುವುದು ಇನ್ನೂ ತಿಳಿದು ಬಂದಿಲ್ಲ. ಅಗ್ನಿಶಾಮಕದಳದ ನಾಲ್ಕು ವಾಹನಗಳು ಬೆಂಕಿ ನಂದಿಸುವ ಕಾರ್ಯ ನಡೆಸಿವೆ. ಶೋ ರೂಂನಲ್ಲಿ ಎಷ್ಟು ಕಾರುಗಳು ಹಾಗೂ ಇತರ ನಷ್ಟ ಉಂಟಾಗಿವೆ ಎಂಬುದು ನಿಖರವಾಗಿ ತಿಳಿದು ಬಂದಿಲ್ಲ. ಕಾರು ಶೋ ರೂಂ ಮಾಲೀಕ ರಾಹುಲ್ ಅವರು ವಿದೇಶಿ ಪ್ರವಾಸದಲ್ಲಿದ್ದಾರೆ. ಸ್ಥಳಕ್ಕೆ ಶಿವಮೊಗ್ಗ ನಗರ ಡಿವೈಎಸ್ಪಿ ಸೇರಿದಂತೆ ಕೋಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

 ಬೆಂಕಿ ಬಿದ್ದ ಸುದ್ದಿ ತಿಳಿಯುತ್ತಲೇ ಜನರು ತಂಡೋಪ ತಂಡವಾಗಿ ಆಗಮಿಸಿದ್ದು, ಶಂಕರ ಮಠ ರಸ್ತೆಯಲ್ಲಿ ಜನ ಸಾಗರವೇ ಸೇರಿತ್ತು. ಜನರನ್ನು ಚದುರಿಸಲು ಹರ ಸಾಹಸ ಪಡುವಂತಾಗಿತ್ತು.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.