ಮಾರಕಾಸ್ತ್ರ, ಖಾರದಪುಡಿಯೊಂದಿಗೆ ದರೋಡೆಗೆ ಹೊಂಚು ಹಾಕಿದ್ದ ಆರೋಪ : ನಾಲ್ವರ ಬಂಧನ
ಶಿವಮೊಗ್ಗ : ಮಾರಕಾಸ್ತ್ರ, ಖಾರದ ಪುಡಿ ಹಿಡಿದುಕೊಂಡು ದರೋಡೆಗೆ ಹೊಂಚು ಹಾಕಿದ್ದ ಗ್ಯಾಂಗ್ ವೊಂದನ್ನು ಪೊಲೀಸರು ಬಂಧಿಸಿದ್ದಾರೆ.
ಶಿವಮೊಗ್ಗದ KSRTC ಬಸ್ ಡಿಪೋ ಪಕ್ಕದ ಎಗ್ಸಿಬಿಷನ್ ಗ್ರೌಂಡ್ನಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು, ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.ಒಬ್ಬಾತ ಪರಾರಿಯಾಗಿದ್ದಾನೆ ಎಂದು ಎನ್ನಲಾಗಿದೆ.
ಕೆಎಸ್ಸಾರ್ಟಿಸಿ ಬಸ್ ಡಿಪೋ ಪಕ್ಕದ ಭಾಗದಲ್ಲಿ ಓಡಾಡುವವರನ್ನು ಅಡ್ಡಗಟ್ಟಿ ಮಾರಕಾಸ್ತ್ರ ತೋರಿಸಿ, ಖಾರದ ಪುಡಿ ಎರಚಿ ಚಿನ್ನಾಭರಣ, ನಗದು ದರೋಡೆಗೆ ಹೊಂಚು ಹಾಕಿದ್ದರು ಎಂದು ಆರೋಪಿಸಲಾಗಿದೆ.
ಗಸ್ತು ತಿರುಗುತ್ತಿದ್ದ ದೊಡ್ಡಪೇಟೆ ಠಾಣೆ ಪೊಲೀಸರಿಗೆ ದೊರೆತ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ್ದಾರೆ. ಈ ವೇಳೆ ಅಖ್ರಿ ಖಾನ್ ಅಲಿಯಾಸ್ ಇಡ್ಲಿ (35), ಮುಶ್ತಾಕ್ ಅಹ್ಮದ್ (32), ಆದಿಲ್ ಪಾಷಾ (23), ಮಾಝ್ ಬೇಗ್ (20) ಎಂಬಾತನನ್ನು ಬಂಧಿಸಲಾಗಿದೆ ತಿಳಿದು ಬಂದಿದೆ.
ಪೊಲೀಸರು ದಾಳಿ ನಡೆಸಿದಾಗ ಆರೋಪಿಗಳ ಬಳಿ ಕಬ್ಬಿಣ ರಾಡ್, ಲಾಂಗ್ ಮತ್ತು ಚಾಕು ಪತ್ತೆಯಾಗಿದೆ. 50 ಗ್ರಾಂ ಖಾರದ ಪುಡಿ, ಎರಡು ಮೊಬೈಲ್ ಫೋನ್ಗಳನ್ನು ಕೂಡ ವಶಕ್ಕೆ ಪಡೆಯಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್