Shivamogga | ಹುಂಡೈ ಕಾರು ಶೋರೂಂಗೆ ಆಕಸ್ಮಿಕ ಬೆಂಕಿ – ಮೂರು ಕಾರು ಸಂಪೂರ್ಣ ಸುಟ್ಟು ಭಸ್ಮ, 7 ಕಾರುಗಳಿಗೆ ಭಾಗಶಃ ಹಾನಿ
ಶಿವಮೊಗ್ಗ (Shivamogga) ನಗರದ ಶಂಕರಮಠದಲ್ಲಿರುವ ರಾಹುಲ್ ಹುಂಡೈ ಕಾರು ಶೋ ರೂಂನಲ್ಲಿ ಶುಕ್ರವಾರ ರಾತ್ರಿ ಸುಮಾರು 8 ಗಂಟೆಗೆ ಆಕಸ್ಮಿಕ ಬೆಂಕಿ ಅವಘಡ ನಡೆದಿದೆ. ಕಾರು ಶೋ ರೂಂ ಸಂಪೂರ್ಣ ವಾಲ್ ಸೀಲಿಂಗ್ನಿಂದ ಮಾಡಿದ್ದಾಗಿದ್ದರಿಂದ ಬೆಂಕಿ ಕೆನ್ನಾಲಿಗೆಗೆ ಶೋರೂಂನ ಮುಂಭಾಗ ಸಂಪೂರ್ಣ ಸುಟ್ಟು ಕರಕಲಾಗಿದೆ. ಅಲ್ಲದೇ ಬೆಂಕಿಯು ಶೋ ರೂಂನ ಮೇಲ್ಭಾಗ ಸೇರಿದಂತೆ ನೆಲಮಹಡಿಗೂ ಆವರಿಸಿದ್ದು, ಇದರಿಂದ ಶೋ ರೂಂನಲ್ಲಿ ಡಿಸ್ಪ್ಲೇ ಗೆಂದು ಇಟ್ಟಿದ್ದ 6 ಕಾರುಗಳಲ್ಲಿ 3 ಕಾರುಗಳು ಸಂಪೂರ್ಣ ಸುಟ್ಟು ಹೋಗಿವೆ.
ಸರ್ವೀಸ್ಗೆ ಎಂದು ಇಟ್ಟಿದ್ದ ಕಾರುಗಳು ಹಾಗೂ ಪಕ್ಕದ ಟಾಟಾ ಶೋ ರೂಂನ ಹೊರಭಾಗದಲ್ಲಿದ್ದ ನಾಲ್ಕರಿಂದ – ಐದು ಕಾರುಗಳು ಸಹ ಬೆಂಕಿ ಕೆನ್ನಾಲಿಗೆಗೆ ಸಿಲುಕಿ ಭಾಗಶಃ ಹಾನಿಯಾಗಿವೆ. ಅಲ್ಲದೇ ನೆಲ ಮಾಳಿಗೆಯಲ್ಲಿ ಇಟ್ಟಿದ್ದ ಕಾರಿನ ಬಿಡಿ ಭಾಗಗಳು ಸುಟ್ಟು ಭಸ್ಮವಾಗಿವೆ.
ಶೋ ರೂಂಗೆ ಹೇಗೆ ಬೆಂಕಿ ಬಿತ್ತು ಎನ್ನುವುದು ಇನ್ನೂ ತಿಳಿದು ಬಂದಿಲ್ಲ. ಅಗ್ನಿಶಾಮಕದಳದ ನಾಲ್ಕು ವಾಹನಗಳು ಬೆಂಕಿ ನಂದಿಸುವ ಕಾರ್ಯ ನಡೆಸಿವೆ. ಶೋ ರೂಂನಲ್ಲಿ ಎಷ್ಟು ಕಾರುಗಳು ಹಾಗೂ ಇತರ ನಷ್ಟ ಉಂಟಾಗಿವೆ ಎಂಬುದು ನಿಖರವಾಗಿ ತಿಳಿದು ಬಂದಿಲ್ಲ. ಕಾರು ಶೋ ರೂಂ ಮಾಲೀಕ ರಾಹುಲ್ ಅವರು ವಿದೇಶಿ ಪ್ರವಾಸದಲ್ಲಿದ್ದಾರೆ. ಸ್ಥಳಕ್ಕೆ ಶಿವಮೊಗ್ಗ ನಗರ ಡಿವೈಎಸ್ಪಿ ಸೇರಿದಂತೆ ಕೋಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಬೆಂಕಿ ಬಿದ್ದ ಸುದ್ದಿ ತಿಳಿಯುತ್ತಲೇ ಜನರು ತಂಡೋಪ ತಂಡವಾಗಿ ಆಗಮಿಸಿದ್ದು, ಶಂಕರ ಮಠ ರಸ್ತೆಯಲ್ಲಿ ಜನ ಸಾಗರವೇ ಸೇರಿತ್ತು. ಜನರನ್ನು ಚದುರಿಸಲು ಹರ ಸಾಹಸ ಪಡುವಂತಾಗಿತ್ತು.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್